ನಾನೂ ಸಹ ಇಬ್ಬರು ಹೆಣ್ಣು ಮಕ್ಕಳ ತಂದೆ ಹಾಗೂ ವೈದ್ಯ, ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿದ್ದು ದುರದೃಷ್ಟಕರ -ಸಚಿವ ಡಾ.ಕೆ. ಸುಧಾಕರ್
ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿದ್ದು ದುರದೃಷ್ಟಕರ ಎಂದು ವಿವಾದಾತ್ಮಕ ಹೇಳಿಕೆ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಜೀವನ ನಡೆಸುವ ಮಹಿಳೆಯರ ಬಗ್ಗೆ ಅಲ್ಲ. ‘ನಾನೂ ಸಹ ಇಬ್ಬರು ಹೆಣ್ಣು ಮಕ್ಕಳ ತಂದೆ ಹಾಗೂ ವೈದ್ಯ’ ‘ಮಹಿಳೆಯರ ಸೂಕ್ಷ್ಮತೆ, ಸಂವೇದನೆ ಬಗ್ಗೆ ನನಗೆ ಅರಿವಿದೆ’ ಎಂದಿದ್ದಾರೆ.
ಬೆಂಗಳೂರು: ಭಾನುವಾರ ನಿಮ್ಹಾನ್ಸ್ ಆಯೋಜಿಸಿದ್ದ 25ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಡಾ.ಕೆ. ಸುಧಾಕರ್ ಮಹಿಳೆಯ ಬಗ್ಗೆ ಕೆಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಅವರ ಈ ಹೇಳಿಕೆಗಳಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸದ್ಯ ಈಗ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.
ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿದ್ದು ದುರದೃಷ್ಟಕರ ಎಂದು ವಿವಾದಾತ್ಮಕ ಹೇಳಿಕೆ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಜೀವನ ನಡೆಸುವ ಮಹಿಳೆಯರ ಬಗ್ಗೆ ಅಲ್ಲ. ‘ನಾನೂ ಸಹ ಇಬ್ಬರು ಹೆಣ್ಣು ಮಕ್ಕಳ ತಂದೆ ಹಾಗೂ ವೈದ್ಯ’ ‘ಮಹಿಳೆಯರ ಸೂಕ್ಷ್ಮತೆ, ಸಂವೇದನೆ ಬಗ್ಗೆ ನನಗೆ ಅರಿವಿದೆ’ ಸಂಶೋಧನೆಗಳ ಅಧ್ಯಯನದ ಆಧಾರದಲ್ಲಿ ಹೇಳಿಕೆ ನೀಡಿದ್ದೆ. ಕೌಟುಂಬಿಕ ವ್ಯವಸ್ಥೆಯ ಮೌಲ್ಯದ ಕುಸಿತದ ಬಗ್ಗೆ ನನ್ನ ಹೇಳಿಕೆ ಇತ್ತು. ‘ಆದರೆ ನನ್ನ ಹೇಳಿಕೆ ಉದ್ದೇಶ ತಪ್ಪಾಗಿ ಅರ್ಥೈಸಿದ್ದು ದುರದೃಷ್ಟಕರ’ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಸಚಿವ ಸುಧಾಕರ್ ಹೇಳಿದ್ದೇನು? ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಾರೆ. ವಿವಾಹವಾದರೂ ಮಕ್ಕಳಿಗೆ ಜನ್ಮ ನೀಡಲು ಇಷ್ಟ ಪಡುತ್ತಿಲ್ಲ. ಬದಲಾಗಿ ಬಾಡಿಗೆ ತಾಯ್ತನವನ್ನು ಅನುಸರಿಸುತ್ತಿದ್ದಾರೆ ಎಂದು ಭಾನುವಾರ ಹೊಸೂರು ರಸ್ತೆಯಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಆಯೋಜಿಸಿದ್ದ 25ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದರು.
ನಾನು ಇಂದು ಈ ಮಾತನ್ನು ಹೇಳಲು ಬೇಸರ ಪಡುತ್ತೇನೆ, ನನ್ನನ್ನು ಕ್ಷಮಿಸಿ ಎಂದು ಮಹಿಳೆಯರ ಬಗ್ಗೆ ಈ ಹೇಳಿಕೆಯನ್ನು ನೀಡಿದ್ದರು. ಇಂದಿನ ಆಧುನಿಕ ಮಹಿಳೆಯರು ಹೆಚ್ಚಾಗಿ ಈ ರೀತಿಯ ಮನೋಭಾವವನ್ನು ಹೊಂದಿದ್ದಾರೆ. ಇದು ಪಾಶ್ಚತ್ಯ ಸಂಸ್ಕೃತಿಯ ಪಾಲನೆ. ಈ ಬದಲಾವಣೆ ಒಳ್ಳೆಯದಲ್ಲ. ಹಾಗೆಯೇ ಈಗಿನ ಜನರು ತಮ್ಮ ಪೋಷಕರು ತಮ್ಮ ಜೊತೆ ಜೀವಿಸಬೇಕು ಎಂಬುವುದನ್ನು ಕೂಡಾ ಒಪ್ಪುವುದಿಲ್ಲ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ಹೇಳಿ ಬಂದಿದ್ದು ಈ ಬಗ್ಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ‘ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಾರೆ’ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ರೋಶ
ಭಾರತದ ಆಧುನಿಕ ಮಹಿಳೆಯರಿಗೆ ಮದುವೆ, ಮಕ್ಕಳೇ ಬೇಡವಾಗಿದೆ; ಪಾಶ್ಚಿಮಾತ್ಯ ಸಂಸ್ಕೃತಿ ಬಗ್ಗೆ ಸಚಿವ ಸುಧಾಕರ್ ಬೇಸರ
Published On - 6:32 pm, Mon, 11 October 21