AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ, ನಾಳೆ ಮಹತ್ವದ ಸಭೆ ಕರೆದ ಸುಧಾಕರ್

ಕಳೆದ 1 ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ನಾಳೆ ತಜ್ಞರ ಸಭೆ ಕರೆಯಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾದ ಆರೋಗ್ಯ ಇಲಾಖೆ, ನಾಳೆ ಮಹತ್ವದ ಸಭೆ ಕರೆದ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್Image Credit source: deccanherald.com
TV9 Web
| Updated By: Digi Tech Desk|

Updated on:Mar 15, 2023 | 2:20 PM

Share

ಬೆಂಗಳೂರು: ಕಳೆದ 1 ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು (coronavirus) ಹೆಚ್ಚಳವಾಗಿದೆ. ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಇನ್ನು ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Dr K Sudhakar), ಹೆಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಈ ಸಂಬಂಧ ನಾಳೆ (ಮಾ.06) ಅಧಿಕಾರಿಗಳು, ತಜ್ಞರ ಜತೆ ಸಭೆ ನಡೆಸಲಾಗುತ್ತೆ. ರೋಗ ಲಕ್ಷಣದಿಂದಾಗಿ ಕೆಮ್ಮು ಉಂಟಾಗಿರುವ ಮಾಹಿತಿ ಇದೆ. ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ: ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ, ರಾಜ್ಯದಲ್ಲಿ ಮತ್ತೆ ಶುರುವಾಯ್ತಾ ಕೋವಿಡ್ ಮಹಾಮಾರಿ​ ಕಾಟ?

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಇಂದು(ಮಾರ್ಚ್ 05) ವಿಧಾನಸೌಧ ಆವರಣದಲ್ಲಿ ಸುಧಾಕರ್​ ಸೈಕಲ್ ಜಾಥಾಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಹೆಚ್​​3ಎನ್​2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಈ ಸಂಬಂಧ ನಾಳೆ ಅಧಿಕಾರಿಗಳು, ತಜ್ಞರ ಜತೆ ಸಭೆ ನಡೆಸಲಾಗುತ್ತೆ.  ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಚರ್ಚಿಸಿ ನಾಳಿನ ಸಭೆಯ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೊರೋನಾ ಕೇಸ್ ಹೆಚ್ಚಳ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ(ಮಾರ್ಚ್ 04) ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊನಾರೋನಾ ಪ್ರಕರಣ ಹೆಚ್ಚಳವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Published On - 10:04 am, Sun, 5 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!