ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ರೂಪಿಸಲು‌ ಸಚಿವ ಈಶ್ವರ್ ಖಂಡ್ರೆ ಸೂಚನೆ

ಅಲ್ಪ ಅರಣ್ಯ ಪ್ರದೇಶ ಹೊಂದಿರುವ ಕರ್ನಾಟಕದ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಜಾರಿಗೆ ತರಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ. ವಿಡಿಯೋ ಸಂವಾದದ ಮೂಲಕ ನಡೆದ ಸಭೆಯಲ್ಲಿ, ಹೆಚ್ಚಿನ ಸಸಿ ನೆಡುವಿಕೆ, ನೀರುಣಿಸುವಿಕೆ ಮತ್ತು ಜಿಯೋ ಟ್ಯಾಗಿಂಗ್ ಮೂಲಕ ಸಂರಕ್ಷಣೆಗೆ ಒತ್ತು ನೀಡುವಂತೆ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ರೂಪಿಸಲು‌ ಸಚಿವ ಈಶ್ವರ್ ಖಂಡ್ರೆ ಸೂಚನೆ
ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ರೂಪಿಸಲು‌ ಸಚಿವ ಈಶ್ವರ್ ಖಂಡ್ರೆ ಸೂಚನೆ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Jan 24, 2025 | 8:47 PM

ಬೆಂಗಳೂರು, ಜನವರಿ 24: ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ರೂಪಿಸಲು‌ ಸಚಿವ ಈಶ್ವರ್ ಖಂಡ್ರೆ (Eshwar Kahndre) ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದ ಖಂಡ್ರೆ, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಬಳ್ಳಾರಿ, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಹೆಚ್ಚು ಸಸಿನೆಟ್ಟು ನೀರುಣಿಸಿ, ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸಲು ಸೂಚನೆ ನೀಡಿದ್ದಾರೆ.

ರಸ್ತೆ ಬದಿ ಹೆಚ್ಚು ಗಿಡ ಬೆಳೆಸಲು‌ ಸೂಚನೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹಸಿರು ಹೊದಿಕೆ ಕಡಿಮೆ ಇರುವ ಜಿಲ್ಲೆಗಳಲ್ಲಿನ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳನ್ನು ಗುರುತಿಸಿ ರಸ್ತೆಯ ಎರಡೂ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಅದಕ್ಕೆ ಈಗಿನಿಂದಲೇ ರಸ್ತೆಗಳನ್ನು ಗುರುತಿಸಿ, ಕಾರ್ಯಯೋಜನೆ ರೂಪಿಸುವಂತೆ ಮತ್ತು ನರ್ಸರಿಗಳಲ್ಲಿ ಎತ್ತರದ ಗಿಡ ಬೆಳೆಸಲು ಆದೇಶಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಬಗ್ಗೆ ಚರ್ಚೆ; ಸಚಿವ ಶಿವರಾಜ ತಂಗಡಗಿ

ಅರಣ್ಯ ಇಲಾಖೆಯ ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ವಿಭಾಗದ ಎಲ್ಲ ನರ್ಸರಿಗಳಲ್ಲಿ ಸ್ಥಳೀಯ ಗಿಡಗಳನ್ನು ಬೆಳೆಸಲು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಎತ್ತರದ ಸಸಿಗಳನ್ನು ಬೆಳೆಸಲು ಕ್ರಮವಹಿಸುವುದು. ಇಂದು ಇಡೀ ಜಗತ್ತು ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸಮಸ್ಯೆ ಎದುರಿಸುತ್ತಿದೆ. ವೃಕ್ಷ ಸಂಪತ್ತು ಸಂರಕ್ಷಿಸುವ ಜವಾಬ್ದಾರಿ ಹೊತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಮುಂದಿನ ಪೀಳಿಗೆಗೆ ಆರೋಗ್ಯ ಪೂರ್ಣ ಭೂಮಿಯನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸಫಾರಿ ಹೋಗುವವರಿಗೆ ಗುಡ್​ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ

ಇನ್ನು ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್ ಮಾಲ್ಕಡೆ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ