ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್​ನ್ಯೂಸ್: 3 ತಿಂಗಳಲ್ಲೇ ಹಕ್ಕು ಪತ್ರ ವಿತರಣೆ

| Updated By: ಆಯೇಷಾ ಬಾನು

Updated on: Oct 10, 2023 | 1:13 PM

ಮಂಗಳೂರಿನ ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿದ ಹಿನ್ನಲೆ ಅರಣ್ಯ ಇಲಾಖೆಯು ಫೌಂಡೇಶನ್‌ ಸಮೇತ ಮನೆಯನ್ನ ಧ್ವಂಸಗೊಳಿಸಿತ್ತು. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಸದ್ಯ ಈಗ ಸಚಿವ ಈಶ್ವರ್ ಖಂಡ್ರೆ, ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಗುಡ್​ನ್ಯೂಸ್: 3 ತಿಂಗಳಲ್ಲೇ ಹಕ್ಕು ಪತ್ರ ವಿತರಣೆ
ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ
Follow us on

ಬೆಂಗಳೂರು, ಅ.10: ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿದ್ದವರಿಗೆ ಮೂರು ತಿಂಗಳಲ್ಲಿ ಹಕ್ಕು ಪತ್ರ (Ownership Deeds) ವಿತರಿಸಲು ಅಧಿಕಾರಿಗಳಿಗೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ. ಮಂಗಳೂರಿನ ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಿದ ಹಿನ್ನಲೆ ಅರಣ್ಯ ಇಲಾಖೆಯು ಫೌಂಡೇಶನ್‌ ಸಮೇತ ಮನೆಯನ್ನ ಧ್ವಂಸಗೊಳಿಸಿತ್ತು. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಸದ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, 1978ರ ಪೂರ್ವದಿಂದಲೂ ಅರಣ್ಯ ವ್ಯಾಪ್ತಿಯಲ್ಲಿ ನೆಲೆಸಿರುವವರು, ಅರಣ್ಯ ವ್ಯಾಪ್ತಿಯಲ್ಲಿ ಕೃಷಿ ಮಾಡುತ್ತಿದ್ದವರಿಗೆ ಹಕ್ಕು ಪತ್ರ ವಿತರಣೆ ಮಾಡಲು ಮುಖ್ಯಮಂತ್ರಿಗಳು ಕೂಡ ಸೂಚನೆ ಕೊಟ್ಟಿದ್ದಾರೆ ಎಂದರು. ಶಾಸಕ ಹರೀಶ್ ಪೂಂಜ ಸೇರಿದಂತೆ ಸಾರ್ವಜನಿಕರಲ್ಲಿ ಮನವಿ ಮಾಡ್ತೇನೆ. ಪ್ರಕೃತಿ ಉಳಿಯಬೇಕಂದ್ರೆ ಅರಣ್ಯ ಕಾಯ್ದೆ ಉಲ್ಲಂಘನೆ ಆಗಬಾರದು. ಸುಮಾರು ವರ್ಷಗಳಿಂದ ವಾಸವಿರುವವರಿಗೆ ತೊಂದರೆ ಕೊಡಬಾರದು ಅಂತ ಅರಣ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಈಗಾಗಲೇ 1978ರ ಪೂರ್ವದಲ್ಲಿ ಅರಣ್ಯ, ಅರಣ್ಯದಂಚಿನಲ್ಲಿ ಯಾರ್ಯಾರು ವಾಸವಿದ್ದಾರೆ. ಯಾರ್ಯಾರು ಉಳುಮೆ ಮಾಡ್ತಿದ್ದಾರೆ ಅಂತವರ ಪಟ್ಟಿ ಮಾಡಿ ಹಕ್ಕುಪತ್ರ ಕೊಡಲು ತೀರ್ಮಾನಿಸಲಾಗಿದೆ. ಹಕ್ಕುಪತ್ರ ಕೊಡುವ ಕೆಲಸವನ್ನ ಮೂರು ತಿಂಗಳೊಳಗೆ ಮುಗಿಸುವಂತೆ ಆದೇಶ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಇದಕ್ಕೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಅರಣ್ಯ ಅಧಿಕಾರಿಗಳಿಂದ ಅಕ್ರಮ ಮನೆ ಧ್ವಂಸ, ಸಚಿವರಿಗೆ ಕರೆ ಮಾಡಿ ಶಾಸಕ ಹರೀಶ್ ಪೂಂಜ ಗರಂ

ಶ್ರೀಶೈಲ ಜಗದ್ಗುರುಗಳ ಜೊತೆ ನಾನು, ಶಾಮನೂರು ಶಿವಶಂಕರಪ್ಪ, ಜಗದೀಶ್ ಶೆಟ್ಟರ್, ಹುಕ್ಕೇರಿಯವ್ರು ಎಲ್ಲಾ ಸೇರಿದ್ವಿ. ಸಹಜವಾಗಿ ಬೇರೆ ಬೇರೆ ವಿಚಾರಗಳು ಚರ್ಚೆ ಆಗಿವೆ. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಶಾಮನೂರು ಮನವೊಲಿಕೆಯಾಗಿದ್ದಾರ ಅಂತ ಅವರ ಬಳಿಯೇ ಮಾತನಾಡಿ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Tue, 10 October 23