ಬೆಂಗಳೂರು: ಅರಣ್ಯ ಭೂಮಿ ಬದಲಾವಣೆ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಆದೇಶದಂತೆ 2006ರಲ್ಲೇ ಅರಣ್ಯ ಎಂದು ವರ್ಗೀಕರಣವಾಗಿದ್ದ ನೂರಾರು ಕೋಟಿ ರೂ. ಬೆಲೆಬಾಳುವ 17 ಎಕರೆ 34 ಗುಂಟೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿ ಎಂದು ಮ್ಯುಟೇಷನ್ ಮಾಡಿದ್ದ ಉಪ ಜಿಲ್ಲಾಧಿಕಾರಿ ಡಾ.ಎಂ.ಜಿ. ಶಿವಣ್ಣ ವಿರುದ್ಧ ಅರಣ್ಯ ಸಚಿವರ ಸೂಚನೆಯ ಮೇರೆಗೆ ಇಲಾಖೆ ಎಫ್.ಐ.ಆರ್. ದಾಖಲು ಮಾಡಿದೆ.

ಬೆಂಗಳೂರು: ಅರಣ್ಯ ಭೂಮಿ ಬದಲಾವಣೆ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ
ಅರಣ್ಯ ಸಚಿವ ಈಶ್ವರ್​ ಖಂಡ್ರೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 18, 2023 | 7:26 PM

ಬೆಂಗಳೂರು, ಅ.18: ಬೆಂಗಳೂರು(Bengaluru) ನಗರ ಜಿಲ್ಲಾಧಿಕಾರಿಗಳ ಆದೇಶದಂತೆ 2006ರಲ್ಲೇ ಅರಣ್ಯ ಎಂದು ವರ್ಗೀಕರಣವಾಗಿದ್ದ ನೂರಾರು ಕೋಟಿ ರೂ. ಬೆಲೆಬಾಳುವ 17 ಎಕರೆ 34 ಗುಂಟೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿ ಎಂದು ಮ್ಯುಟೇಷನ್ ಮಾಡಿದ್ದ ಉಪ ಜಿಲ್ಲಾಧಿಕಾರಿ ಡಾ.ಎಂ.ಜಿ. ಶಿವಣ್ಣ ವಿರುದ್ಧ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ(Eshwar B Khandre)ಅವರ ಸೂಚನೆಯ ಮೇರೆಗೆ ಇಲಾಖೆ ಎಫ್.ಐ.ಆರ್. ದಾಖಲು ಮಾಡಿದೆ. ಹೌದು, ಉತ್ತರ ಬೆಂಗಳೂರಿನ ಭಾರತೀಯ ನಗರದ ಬಳಿ ಸುಮಾರು 500 ಕೋಟಿ ರೂ. ಮಾರುಕಟ್ಟೆ ಮೌಲ್ಯದ 17 ಎಕರೆ 34 ಗುಂಟೆ ಅರಣ್ಯ ಭೂಮಿಯನ್ನು ಉಪ ವಿಭಾಗಾಧಿಕಾರಿಯಾಗಿದ್ದ ಶಿವಣ್ಣ ಏಕಪಕ್ಷೀಯವಾಗಿ ಕಂದಾಯ ಭೂಮಿ ಎಂದು ತಿದ್ದುಪಡಿ ಮಾಡಿದ್ದು, ಈ ಭೂಮಿಯನ್ನು ಒತ್ತುವರಿ ಮಾಡಿ, ಆ ಜಮೀನಿನ ಮೇಲೆ ಹಕ್ಕು ಸ್ಥಾಪಿಸಲು ಪ್ರಯತ್ನಿಸಿದವರಿಗೆ ಅನುಕೂಲ ಮಾಡಿಕೊಡುವ ಸಂಚನ್ನು ಅರಣ್ಯ ಇಲಾಖೆ ಇತ್ತೀಚೆಗೆ ಪತ್ತೆ ಹಚ್ಚಿತ್ತು.

ಈ ವಿಷಯವನ್ನು ಅರಣ್ಯ ಸಚಿವರಾದ ಈಶ್ವರ್ ಬಿ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದರು. ಬಳಿಕ ಅರಣ್ಯ ಭೂಮಿಯನ್ನು ಸರ್ಕಾರಿ ಜಮೀನು ಎಂದು ತಿದ್ದುಪಡಿ ಮಾಡಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಜಾಗೃತ ದಳಕ್ಕೆ ಕಟ್ಟು ನಿಟ್ಟಿನ ಆದೇಶ ನೀಡಿದ್ದರು. ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ತನಿಖೆ ಕೈಗೊಂಡ ಅರಣ್ಯ ಇಲಾಖೆಯ ಬೆಂಗಳೂರು, ಯಲಹಂಕ ವಲಯದ ಗಸ್ತು ಶಾಖೆ, ಬೆಂಗಳೂರು ಪೂರ್ವ ತಾಲೂಕು, ಕೆ.ಆರ್. ಪುರಂ ಹೋಬಳಿ ಕೊತ್ತನೂರು ಗ್ರಾಮದ ಸರ್ವೆ ನಂ.47ರಲ್ಲಿ ಸುಮಾರು 18 ಎಕರೆ ಅರಣ್ಯ ಭೂಮಿಯನ್ನು ಹೊಸದಾಗಿ ಅತಿಕ್ರಮಣ ಮಾಡಲು ಅನುವು ಮಾಡಿಕೊಡಲು ಜಿಲ್ಲಾಧಿಕಾರಿಗಳ ಆದೇಶವನ್ನೇ ಬದಲಾಯಿಸಿದ ಹಿನ್ನಲೆ ಬೆಂಗಳೂರು ಪೂರ್ವ ತಹಶೀಲ್ದಾರ್ ಅಜಿತ್ ಕುಮಾರ್ ರೈ ಮತ್ತು ಉಪ ವಿಭಾಗಾಧಿಕಾರಿ ಡಾ. ಎಂ.ಜಿ. ಶಿವಣ್ಣ ವಿರುದ್ಧ ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 33, 104 ಮತ್ತು 104 ಸಿ ಅಡಿಯಲ್ಲಿ ಎಫ್.ಐ.ಆರ್. ದಾಖಲಿಸಿದ್ದಾರೆ.

ಇದನ್ನೂ ಓದಿ:18 ವರ್ಷದ ನಂತರ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ, ಒಂದೇ ದಿನದಲ್ಲಿ 120 ಎಕರೆ ಅರಣ್ಯ ಭೂಮಿ ಸರ್ಕಾರಕ್ಕೆ ವಾಪಸ್​!

ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣ

ಇನ್ನು ಸದರಿ 17 ಎಕರೆ 34 ಗುಂಟೆ ಜಮೀನನ್ನು ಅರಣ್ಯ ಇಲಾಖೆ ಎಂದು ಜಿಲ್ಲಾಧಿಕಾರಿಯವರು ಘೋಷಿಸಿದ ನಂತರ ಸಂಸ್ಥೆಯೊಂದು ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿತ್ತು. ಹೀಗಾಗಿ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಈ ಪ್ರದೇಶದ ಜಂಟಿ ಸರ್ವೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ, ಇದು ಅರಣ್ಯ ಭೂಮಿ ಎಂಬ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದವು. ಸುಪ್ರೀಂಕೋರ್ಟ್ 2017ರ ಮಾರ್ಚ್​ನಲ್ಲಿ ಅರ್ಜಿ ವಿಲೇವಾರಿ ಮಾಡಿತ್ತು.

ಆದಾಗ್ಯೂ 2023ರಲ್ಲಿ ಕೆಲವು ಭೂ ಕಬಳಿಕೆದಾರರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಆರ್.ಟಿ.ಸಿ.ಯಲ್ಲಿ ಅರಣ್ಯ ಭೂಮಿ ಎಂದಿದ್ದನ್ನು ಸರ್ಕಾರ ಎಂದು ಏಕಪಕ್ಷೀಯವಾಗಿ ಎಂ.ಜಿ. ಶಿವಣ್ಣ ಅವರೇ ಕಾನೂನಿನ ವಿರುದ್ಧ ಪರಿವರ್ತನೆ ಮಾಡಿದ್ದರು. ಇದು ಸರ್ಕಾರಿ ಅಧಿಕಾರಿ ಎಸಗಿರುವ ನಂಬಿಕೆ ದ್ರೋಹ ಮತ್ತು ಕರ್ತವ್ಯ ಲೋಪದ ಜೊತೆಗೆ ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಪ್ರಮಾಣಪತ್ರದ ಉಲ್ಲಂಘನೆಯೂ ಆಗಿದ್ದು, ಕಂದಾಯ ಇಲಾಖೆಯೇ  2018 ಸೆಪ್ಟಂಬರ್​ 3 ರಂದು ಹೊರಡಿಸಿರುವ ಸುತ್ತೋಲೆ ಸಂಖ್ಯೆ ಆರ್.ಡಿ. 219 ಟಿಆರ್.ಎಂ. 2018ರಂತೆ ಅರಣ್ಯಾಧಿಕಾರಿಗಳ ಅಭಿಪ್ರಾಯವನ್ನು ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಫ್.ಐ.ಆರ್. ದಾಖಲಿಸುವಂತಹ ಕಠಿಣ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ:Shivamogga News: 1980 ರಿಂದ ಇಲ್ಲಿಯವರೆಗೆ ಅರಣ್ಯ ಭೂಮಿ ಒತ್ತುವರಿ, ಒಟ್ಟು 2815 ಎಫ್​ಐಆರ್

ಅರಣ್ಯ ಭೂಮಿ ಕಬಳಿಕೆದಾರರಿಗೆ ಎಚ್ಚರಿಕೆ ಗಂಟೆ

ಹೌದು, ಅರಣ್ಯ ಭೂಮಿಯನ್ನು ಕಂದಾಯ ಭೂಮಿ ಎಂದು ಪರಿವರ್ತಿಸಿ, ಅಕ್ರಮವಾಗಿ ಭೂ ಮಂಜೂರಾತಿ ಮಾಡಿಕೊಡುತ್ತಿರುವ ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಜೊತೆಗೆ ಅರಣ್ಯ ಭೂಮಿ ಒತ್ತುವರಿ ಮಾಡಿರುವವರಿಗೆ ನಡುಕ ಹುಟ್ಟಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಈ ದಿಟ್ಟ ಕ್ರಮಕ್ಕೆ ಪರಿಸರವಾದಿಗಳು, ಪರಿಸರ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 pm, Wed, 18 October 23

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ