Kota Shrinivas Poojari: ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಪಾಸಿಟಿವ್
ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೊವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ (Kota Shrinivas Poojari) ಕೊರೊನಾ ಸೋಂಕು ದೃಢವಾಗಿದೆ. ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೊವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ (Coronavirus) ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ (Tweet) ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ಗೆ ಕೊರೊನಾ ಪಾಸಿಟಿವ್
ಕಳೆದ ಒಂದು ವಾರದಿಂದ ಮೈಸೂರು ಜಿಲ್ಲೆಯ ವಿವಿಧ ಆಸ್ಪತ್ರೆಗೆ ಭೇಟಿ ನೀಡಿದ್ದ ಡಾ. ಬಗಾದಿ ಗೌತಮ್ ಅವರಿಗೆ ಕೂಡ ಕೊರೊನಾ ಸೋಂಕು ದೃಢವಾಗಿದೆ. ಹಲವು ಕಾರ್ಯಕ್ರಮಗಳಲ್ಲೂ ಡಿಸಿ ಡಾ. ಬಗಾದಿ ಗೌತಮ್ ಭಾಗಿಯಾಗಿದ್ದರು. ತಮ್ಮ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ.#COVID19
— Kota Shrinivas Poojari (@KotasBJP) January 17, 2022
ಶಿವಮೊಗ್ಗ: ಕಾಲೇಜಿನ 11 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ಸರ್ಕಾರಿ ಪದವಿ ಕಾಲೇಜಿನ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ಇನ್ನು ಸರ್ಕಾರಿ ಪಿಯು ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಆಗಿದೆ. ಹೀಗಾಗಿ ಎರಡೂ ಕಾಲೇಜುಗಳಿಗೆ ಜನವರಿ 22ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕು ದಂಡಾಧಿಕಾರಿ ವಿ. ರಾಜೀವ ಎರಡು ಕಾಲೇಜ್ ಅನ್ನು ಕಾಂಟೈನ್ಮೆಂಟ್ ಜೋನ್ ಮಾಡಿ ಆದೇಶ ಹೊರಡಿಸಿದ್ದಾರೆ.
ನಿಯಮ ಉಲ್ಲಂಘನೆ ಹಿನ್ನೆಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಬನಶಂಕರಿ ದೇವಸ್ಥಾನದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ಎರಡು ದೂರುಗಳು ದಾಖಲು ಮಾಡಲಾಗಿದೆ. ಸರ್ಕಾರ, ಜಿಲ್ಲಾಡಳಿತ, ತಾಲೂಕಾ ಆಡಳಿತದ ಜೊತೆ ಸಹಕಾರ ನೀಡದೇ ನಿಯಮ ಉಲ್ಲಂಘನೆ ಹಿನ್ನೆಲೆ ದೂರು ದಾಖಲಿಸಲಾಗಿದೆ. ಬಾದಾಮಿ ಬನಶಂಕರಿ ದೇವಸ್ಥಾನದ ಟ್ರಸ್ಟಿಗಳು, ಗದಗ ಜಿಲ್ಲೆಯ ಮಾಡಲಗೇರಿ ಗ್ರಾಮದ ಹಿರಿಯರ ವಿರುದ್ಧ ದೂರು ದಾಖಲು ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್
Published On - 7:54 pm, Mon, 17 January 22