AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ

ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ವೇಗವರ್ಧನೆ ಬಗ್ಗೆ ಚರ್ಚಿಸಲಾಗಿದೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ಇಳಿಸುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ. ಪಾಟೀಲ್ ಸೂಚನೆ ನೀಡಿದ್ದಾರೆ.

K-RIDE ಅಧಿಕಾರಿಗಳೊಂದಿಗೆ ಸಚಿವ ಎಂಬಿ ಪಾಟೀಲ್​ ಮಹತ್ವ ಸಭೆ: ವಿಜಯಪುರ-ಬೆಂಗಳೂರು ಪ್ರಯಾಣ 10 ಗಂಟೆಗೆ ತಗ್ಗಿಸಲು ಸೂಚನೆ
K-RIDE ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ ಪಾಟೀಲ್​ ಸಭೆ
ಗಂಗಾಧರ​ ಬ. ಸಾಬೋಜಿ
|

Updated on:Apr 17, 2025 | 8:00 AM

Share

ಬೆಂಗಳೂರು, ಏಪ್ರಿಲ್​ 17: ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ (Kride) ನ ಹಿರಿಯ ಅಧಿಕಾರಿಗಳೊಂದಿಗೆ  ನಿನ್ನೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (M B Patil)​​ ಮಹತ್ವದ ಸಭೆ ಮಾಡಿದ್ದಾರೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸೂಚನೆ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್​, ರಾಜ್ಯದ ಬಹುತೇಕ ಚಾಲ್ತಿಯಲ್ಲಿರುವ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಎಲ್ಲ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಇದನ್ನೂ ಓದಿ
Image
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
Image
ಗುಡ್ ಫ್ರೈಡೇ, ವಾರಾಂತ್ಯ ರಜೆ ಹಿನ್ನೆಲೆ ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೀದರ್‌ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ

ಸಚಿವ ಎಂ.ಬಿ ಪಾಟೀಲ್​ ಟ್ವೀಟ್​

ಬೆಂಗಳೂರಿನಿಂದ ವಿಜಯಪುರ ನಡುವಿನ ರೈಲ್ವೆ ಪ್ರಯಾಣ 14-15 ಗಂಟೆಗಳಾಗುತ್ತಿದ್ದು, ಕೆಲವೊಮ್ಮೆ15-16 ಗಂಟೆ ಕೂಡ ಆಗುತ್ತಿದೆ. ಸೂಕ್ತ ಸಲಹೆಗಳನ್ನು ನೀಡಿ ಈ ಪ್ರಯಾಣವನ್ನು 10 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರಮುಖ ಯೋಜನೆಗಳ ಸ್ಥಿತಿಗತಿ ಹಾಗೂ ಸೂಚನೆಗಳು

  • ಗದಗ–ವಿಜಯಪುರ ಜೋಡಿ ಮಾರ್ಗ ಯೋಜನೆ ಕೊನೆಯ ಹಂತದಲ್ಲಿದ್ದು, ಬಾಗಲಕೋಟೆ ಸಮೀಪದ ಬಾಕಿ ಇರುವ ಭಾಗಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
  • ರೈಲ್ವೆ ವಿದ್ಯುದ್ದೀಕರಣ ಯೋಜನೆ ತ್ವರಿತಗತಿಯಲ್ಲಿ ಮುಗಿಸಲು ಸೂಸಿದ್ದು ನಂತರ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಅನುಕೂಲವಾಗಲಿದೆ.
  • ಬಾಗಲಕೋಟೆ–ಕುಡಚಿ ಮಾರ್ಗದ ಖಜ್ಜಿದೋಣಿ–ಲೋಕಾಪುರ ಭಾಗದಲ್ಲಿರುವ ತೊಡಕುಗಳನ್ನು ನಿವಾರಿಸಲು ಕ್ರಮವಹಿಸಬೇಕೆಂದು ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

  • ಧಾರವಾಡ–ಕಿತ್ತೂರು–ಬೆಳಗಾವಿ ಹೊಸ ಮಾರ್ಗ ಈಗಾಗಲೇ ಮಂಜೂರಾಗಿದ್ದು, ಮೊಮ್ಮಿಗಟ್ಟಿ ಸಮೀಪ ಮಾರ್ಗ ಬದಲಾವಣೆಗಾಗಿ ಭೂಸ್ವಾಧೀನ ವಿಳಂಬವಾಗುತ್ತಿದೆ. ಇದನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವಿಶೇಷ ಸಭೆ ಮಾಡುವುದಾಗಿ ತಿಳಿಸಿದ್ದಾರೆ.
  • ಲಿಂಗನಬಂಡಿ–ಕುಷ್ಟಗಿ, ಕುಷ್ಟಗಿ–ಜಿಮಲಾಪುರ, ತುಮಕೂರು–ದಾವಣಗೆರೆ ಮಾರ್ಗಗಳ ಪ್ರಗತಿ ಕುರಿತು ಸಮಾಲೋಚನೆ ಮಾಡಿದ್ದಾರೆ.
  • ಹುಬ್ಬಳ್ಳಿ–ಅಂಕೋಲಾ ಮಾರ್ಗದ ಮರು ಸಮೀಕ್ಷೆ ಅಂತಿಮಗೊಂಡಿದ್ದು, ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
  • ಸಭೆಯಲ್ಲಿ K-RIDE ನ ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್. ಮಂಜುಳಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Thu, 17 April 25

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ