
ಬೆಂಗಳೂರು, ಏಪ್ರಿಲ್ 17: ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳ ವೇಗ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ (Kride) ನ ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ (M B Patil) ಮಹತ್ವದ ಸಭೆ ಮಾಡಿದ್ದಾರೆ. ಈ ವೇಳೆ ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸೂಚನೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ ಪಾಟೀಲ್, ರಾಜ್ಯದ ಬಹುತೇಕ ಚಾಲ್ತಿಯಲ್ಲಿರುವ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬಹುದಾದ ಎಲ್ಲ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಲಾಗಿದೆ.
ರಾಜ್ಯದ ಪ್ರಮುಖ ರೈಲ್ವೆ ಯೋಜನೆಗಳಿಗೆ ವೇಗ: K-RIDE ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ
ವಿಜಯಪುರ-ಬೆಂಗಳೂರು ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಸೂಚನೆಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪೆನಿ ನಿಯಮಿತ – #Kride ನ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಸೂಕ್ತ ಸಲಹೆ, ನಿರ್ದೇಶನ ನೀಡಿದೆ.
ಬೆಂಗಳೂರಿನಿಂದ ವಿಜಯಪುರ… pic.twitter.com/CUwd81zqs0
— M B Patil (@MBPatil) April 16, 2025
ಬೆಂಗಳೂರಿನಿಂದ ವಿಜಯಪುರ ನಡುವಿನ ರೈಲ್ವೆ ಪ್ರಯಾಣ 14-15 ಗಂಟೆಗಳಾಗುತ್ತಿದ್ದು, ಕೆಲವೊಮ್ಮೆ15-16 ಗಂಟೆ ಕೂಡ ಆಗುತ್ತಿದೆ. ಸೂಕ್ತ ಸಲಹೆಗಳನ್ನು ನೀಡಿ ಈ ಪ್ರಯಾಣವನ್ನು 10 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮಂಗಳೂರು-ಕೊಲ್ಲಂಗೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:55 am, Thu, 17 April 25