ಯಡಿಯೂರಪ್ಪ ಬಿಟ್ಟುಕೊಟ್ಟರೆ ನನಗೂ ಸಿಎಂ ಆಗುವ ಆಸೆಯಿದೆ: ಸಚಿವ ಎಂಟಿಬಿ ನಾಗರಾಜ್
ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ ನಂತರ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಮಾತಾಡಬೇಕು. ಆದರೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಯುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಆಸೆಯಿದೆ. ಆದರೆ ಈಗಿನ್ನೂ ಚುನಾವಣೆ ನಡೆದಿಲ್ಲ: ಸಚಿವ ಎಂಟಿಬಿ ನಾಗರಾಜ್
ದೇವನಹಳ್ಳಿ: ನನಗೂ ಸಿಎಂ ಆಗಬೇಕು ಎಂಬ ಆಸೆಯಿದೆ ಎಂದು ಎಂಬ ಮನದಿಚ್ಛೆ ವ್ಯಕ್ತಪಡಿಸಿದ್ದಾರೆ ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್. ರಾಜಕೀಯದಲ್ಲಿ ಎಲ್ಲರಿಗೂ ಸಿಎಂ ಆಗುವ ಆಸೆ ಇದ್ದೇ ಇದೆ. ಅದೇ ರೀತಿ ಮುಖ್ಯಮಂತ್ರಿ ಪದವಿಗೆ ಏರುವ ಆಸೆ ಸಹಜವಾಗಿ ನನಗೂ ಇದೆ. ಸಿಎಂ ಹುದ್ದೆಯನ್ನು ಯಡಿಯೂರಪ್ಪ ಅವರು ಬಿಟ್ಟುಕೊಟ್ಟರೇ ನನಗೂ ಸಿಎಂ ಆಗೋ ಆಸೆ ಇದೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ತೀವ್ರ ಮುನ್ನೆಲೆಗೆ ಬಂದ ವಿಷಯದ ಕುರಿತು ಅವರು ವ್ಯಂಗ್ಯವಾಗಿಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ ನಂತರ ಮುಂದಿನ ಸಿಎಂ ಅಭ್ಯರ್ಥಿಯ ಬಗ್ಗೆ ಮಾತಾಡಬೇಕು. ಆದರೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಯುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಆಸೆಯಿದೆ. ಆದರೆ ಈಗಿನ್ನೂ ಚುನಾವಣೆ ನಡೆದಿಲ್ಲ, ಶಾಸಕರು ಆಯ್ಕೆಯಾಗಿಲ್ಲ. ಬಹುಮತವೂ ಇಲ್ಲ. ಅದಕ್ಕೂ ಮುಂಚೆ ಸಿಎಂ ಪದವಿಗಾಗಿ ಕಿತ್ತಾಡುತ್ತಿದ್ದಾರೆ ಎಂದು ಅವರು ವ್ಯಾಖ್ಯಾನಿಸಿದರು.
ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ರಾಹುಲ್ ಗಾಂಧಿ ಸೂಚನೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಸೂಚನೆ ನೀಡಿದ್ದಾರೆ. ದೆಹಲಿಯನ್ನು ತಮ್ಮನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಕೆಲವು ಸೂಚನೆಗಳನ್ನು ನೀಡಿರುವ ರಾಹುಲ್ ಗಾಂಧಿ, ‘ಭವಿಷ್ಯದ ಸಿಎಂ’ ಚರ್ಚೆ ಬಿಟ್ಟು ಬಿಜೆಪಿ ವಿರುದ್ಧ ಹೋರಾಡಿ, ಬಿಜೆಪಿ ಸರ್ಕಾರದ ಬಿಕ್ಕಟ್ಟನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ವರಿಷ್ಠರೂ ಆಗಿರುವ ಸಂಸದ ರಾಹುಲ್ ಗಾಂಧಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವು ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಾಯಕರು ಜನರ ನೆರವಿಗೆ ಧಾವಿಸಿದ್ದಾರೆ. ಇಂಧನ ಬೆಲೆ ಏರಿಕೆ ಬಗ್ಗೆ ವಾರಗಳ ಕಾಲ ಪ್ರತಿಭಟನೆ ನಡೆಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಮಾಡಿರುವ ಕೆಲಸಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ಗಾಂಧಿ ಬಳಿ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾಂಗ್ರೆಸ್ ವರಿಷ್ಠ, ಸಂಸದ ರಾಹುಲ್ ಗಾಂಧಿ ಜತೆ ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚಿಸಿದ್ದೇನೆ. ಆದರೆ ಚರ್ಚಿಸಿದ ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೊವಿಡ್ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ನಿರ್ವಹಿಸುತ್ತಿರುವ ಕೆಲಸಗಳ ಬಗ್ಗೆ ವರದಿ ನೀಡಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕಾಂಗ್ರೆಸ್ ಪಕ್ಷ ಸಂಘಟನೆ ಬಗ್ಗೆಯೂ ರಾಹುಲ್ ಜತೆ ಚರ್ಚೆ ನಡೆಸಿದ್ದೇನೆ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ನಡುವೆಯೆ ತಮ್ಮ ದೆಹಲಿ ಭೇಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರನ್ನೂ ಭೇಟಿಯಾಗಿದ್ದಾರೆ.
ಇದನ್ನೂ ಓದಿ: ನಾನು ಜೈಲಿಗೆ ಹೋಗಿ ಬಂದ ಮೇಲೆ ನನ್ನ ತಂದೆ ತಾಯಿ ನನ್ನನ್ನು ಮನೆಗೆ ಸೇರಿಸಲಿಲ್ಲ: ‘ಆ ದಿನಗಳ‘ ಅನುಭವ ಬಿಚ್ಚಿಟ್ಟ ಸಚಿವ ಆರ್ ಅಶೋಕ್
ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!
(Minister MTB Nagaraj says If CM Yediyurappa gives his seat I have a desire to become CM )
Published On - 9:39 pm, Fri, 25 June 21