AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪಣ್ಣ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು: ಗುತ್ತಿಗೆದಾರರ ಸಂಘದ ಮೇಲೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುವೆ -ಸಚಿವ ಮುನಿರತ್ನ

ಕೆಂಪಣ್ಣ ನನ್ನ ವಿರುದ್ಧ ಆರೋಪ ಮಾಡಿರುವುದು ನೋವಾಗಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದ ಮೇಲೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ನಿರ್ಧಾರ ಮಾಡಿದ್ದೇನೆ.

ಕೆಂಪಣ್ಣ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು: ಗುತ್ತಿಗೆದಾರರ ಸಂಘದ ಮೇಲೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುವೆ -ಸಚಿವ ಮುನಿರತ್ನ
ಸಚಿವ ಮುನಿರತ್ನ
TV9 Web
| Updated By: ಆಯೇಷಾ ಬಾನು|

Updated on:Aug 25, 2022 | 2:56 PM

Share

ಬೆಂಗಳೂರು: ಕೆಂಪಣ್ಣರಿಂದ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಕಮಿಷನ್ ಆರೋಪಕ್ಕೆ ಸಂಬಂಧಿಸಿ ಸಚಿವ ಮುನಿರತ್ನ ತಮ್ಮ ಮೇಲಿನ ಆರೋಪ ಸತ್ಯಕ್ಕೆ ದೂರವಾದದು ಎಂದು ಪ್ರತಿಕ್ರಿಯಿಸಿದ್ದಾರೆ. ಗುತ್ತಿಗೆದಾರರ ಸಂಘಟ ಅಧ್ಯಕ್ಷರು ಒಂದು ಆರೋಪ ಮಾಡಿದ್ದಾರೆ. ಕಳೆದ 14 ತಿಂಗಳಿಂದ ಕೆಂಪಣ್ಣ ಮಾಡುತ್ತಿರುವ ಆರೋಪ ಯಾವುದೇ ದಾಖಲೆ ಕೊಡದೆ ಪ್ರಧಾನ ಮಂತ್ರಿಗಳಿಗೂ ಪತ್ರ ಬರೆದಿದ್ದಾರೆ. ವಿರೋಧ ಪಕ್ಷದ ನಾಯಕರ ಮನೆಗೆ ಭೇಟಿ ನೀಡಿ ನಂತರ ಮಾಧ್ಯಮ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಎಂದು ಸಚಿವ ಮುನಿರತ್ನ ಕೆಂಪಣ್ಣ ವಿರುದ್ಧ ಗುಡುಗಿದ್ದಾರೆ.

ಕೋಲಾರದಲ್ಲಿ ಪ್ರಗತಿ ಪರಿಶೀಲನೆ ಸಭೆ ಮಾಡಿ ರಸ್ತೆ ಹಾಳಾಗಿರುವ ಬಗ್ಗೆ ನಾನೇ ರಸ್ತೆ ವೀಕ್ಷಣೆ ಮಾಡುತ್ತೇನೆ ಎಂದು ಹೇಳಿದ್ದೆ. ರಸ್ತೆ ಗುಣಮಟ್ಟ ಪರಿಶೀಲನೆ ಮಾಡುವ ಯಂತ್ರ ನಮ್ಮ ಬಳಿ‌ ಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಹೇಳಿದ್ದೆ. ಅಷ್ಟರಲ್ಲಿ ಗುಣಮಟ್ಟ ಆ ಮೇಲೆ ಪರಿಶೀಲನೆ ಮಾಡಿ ಎಂದು ಹೇಳಿ ಪ್ರತಿಭಟನೆ ಮಾಡಿದ್ರು. ಗುತ್ತಿಗೆದಾರ ಸಂಘ ಕಳೆದ 40 ವರ್ಷಗಳಿಂದ ನೋಡುತ್ತಿದ್ದೇನೆ. ಅದಕ್ಕೆ ಸಾಕಷ್ಟು ಮಹತ್ವ ಇದೆ ಎಂದರು.

ನೀವು ದಾಖಲೆ ಕೊಡಿ ನ್ಯಾಯಾಂಗ ತನಿಖೆಗೆ ಕೊಡುತ್ತೇವೆ. ಸಿದ್ದರಾಮಯ್ಯ ಮೇಲೆ ಹತ್ತು ಸಂಘಗಳು ಆರೋಪ ಮಾಡಿದರೆ, ಯಾವ ತನಿಖೆಗೆ ಕೊಡಬೇಕು. ಯಾವುದೇ ದಾಖಲೆ ಇಲ್ಲ ಅಂದರೆ ಬೇರೆಯವರ ಮೇಲೆ ತೇಜೋವಧೆ ಮಾಡುವುದು ಸರಿಯಲ್ಲ. ಮೋದಿ ಆರೋಪ ಮಾಡಿದಾಗ ಕಾಂಗ್ರೆಸ್ ಮೊಕದ್ದಮೆ ಹೂಡಬೇಕಿತ್ತು. ಸಿದ್ದರಾಮಯ್ಯ ಮನೆಯ ಹಿಂದಿನ ಬಾಗಿಲಿನಿಂದ ಬಂದಿಲ್ಲ ಅವರ ಈ ಆರೋಪದ ಹಿಂದೆ ಕಾಂಗ್ರೆಸ್ ಇದೆ ಎಂದರು.

ಕೆಂಪಣ್ಣ ನನ್ನ ವಿರುದ್ಧ ಆರೋಪ ಮಾಡಿರುವುದು ನೋವಾಗಿದೆ

ಇನ್ನು ಇದೇ ವೇಳೆ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಕೆಂಪಣ್ಣ ಅವರ ಆರೋಪದಿಂದ ನೋವಾಗಿದೆ ಎಂದರು. ಕೆಂಪಣ್ಣ ನನ್ನ ವಿರುದ್ಧ ಆರೋಪ ಮಾಡಿರುವುದು ನೋವಾಗಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದ ಮೇಲೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲು ನಿರ್ಧಾರ ಮಾಡಿದ್ದೇನೆ. ಸಂಘದ ಎಲ್ಲರ ಮೇಲೂ ಮಾನನಷ್ಟ ಮೊಕದ್ದಮೆ ದಾಖಲಿಸುವೆ. ಎಲ್ಲಾ ಸಚಿವರು ಭ್ರಷ್ಟರು ಅಂತ ಕೆಂಪಣ್ಣ ಆರೋಪಿಸಿದ್ದಾರೆ. 7 ದಿನದೊಳಗೆ ಲೋಕಾಯುಕ್ತರಿಗೆ ದೂರು ನೀಡಬೇಕು. ದೂರು ನೀಡಿಲ್ಲ ಅಂದರೆ ಕೆಂಪಣ್ಣ ಕ್ಷಮೆ ಕೇಳಬೇಕು. ಇಲ್ಲವಾದರೆ ಕೆಂಪಣ್ಣ ಸೇರಿ ಎಲ್ಲ ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ, ಕ್ರಿಮಿನಲ್ ಕೇಸ್ ದಾಖಲಿಸುತ್ತೇನೆ ಎಂದು ಸಚಿವ ಮುನಿರತ್ನ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮೇಲೆ 40 ಪರ್ಸೆಂಟ್ ಆರೋಪ ಮಾಡುತ್ತಾರೆ.

ಈ ಸಂಘಕ್ಕೆ ಯಾವುದೇ ಚುನಾವಣೆ ಇಲ್ಲ. ಸಂಘದ ಅಧ್ಯಕ್ಷರು ಆಗಬೇಕು ಅಂದ್ರೆ ಹಲವಾರು ವಿಚಾರಗಳ ಬಗ್ಗೆ ಗೊತ್ತಿರಬೇಕು. ಕೆಂಪಣ್ಣ ಗುತ್ತಿಗೆ ಮಾಡಿ ಎಷ್ಟು ವರ್ಷ ಆಗಿದೆ ಗೊತ್ತಿಲ್ಲ. ಈ ಸಂಘವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಕೆಲಸ ಆಗುತ್ತಿದೆ. 40% ಯಾರು ಕೇಳುತ್ತಿದ್ದಾರೆ, ಯಾರಿಗೆ ಕೊಡುತ್ತಿದ್ದಾರೆ ಯಾವುದು ಗೊತ್ತಿಲ್ಲ. ವಿರೋಧ ಪಕ್ಷದವರ ಜೊತೆ ಸೇರಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಸಿಎಂ ದೂರು ಕೊಟ್ಟಾಗ ಯಾರ್ಯಾರು ಇದ್ದಾರೆ ಎಂಥ ನೇರವಾಗಿ ಆರೋಪ ಮಾಡಿ ಅದನ್ನು ಪ್ರಧಾನಿಗಳಿಗೆ ಕೊಡಿ. ಯಾರೆ ಗುಣಮಟ್ಟ ಪರಿಶೀಲನೆ ಮಾಡಲಿ ಎಂದು ಸಂಘ ಹೇಳಬೇಕು. ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಅವರ ಸ್ಥಾನಕ್ಕೆ ಇದು ಗೌರವ ತರಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್​ನವರು ಅಧಿಕಾರದಲ್ಲಿದ್ದಾಗ ಎಲ್ಲ ತನಿಖೆ ಮಾಡಿಸಿದ್ರಾ?

ಇನ್ನು ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿದ್ದು ಕೆಂಪಣ್ಣ ಆರೋಪ ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದಿದ್ದಾರೆ. ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ಹೋಗಿ ದೂರು ನೀಡಲಿ. ಇದು ರಾಜಕೀಯ ಪ್ರೇರಿತ ಆರೋಪ. ಇದು ಎಲ್ಲ ಪಕ್ಷದಲ್ಲೂ ಇದೆ ಎಂದು ಕೆಂಪಣ್ಣ ಹೇಳುತ್ತಾರೆ. ಹಿಂದಿನ ಸರ್ಕಾರದಲ್ಲೂ ಭ್ರಷ್ಟಾಚಾರ ಇತ್ತು ಎಂದು ಹೇಳ್ತಾರೆ. ಆವಾಗ ಏನು ಕಣ್ಣಿಗೆ ಎಣ್ಣೆ ಹಾಕಿಕೊಂಡು ಕುಳಿತಿದ್ರಾ. ಯಾವ ಪ್ರಕರಣ ತನಿಖೆಗೆ ಕೊಡಬೇಕು ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್​ನವರು ಅಧಿಕಾರದಲ್ಲಿದ್ದಾಗ ಎಲ್ಲ ತನಿಖೆ ಮಾಡಿಸಿದ್ರಾ? ಕೆಂಪಣ್ಣ ಭೇಟಿ ವೇಳೆ ನಿಮ್ಮಲ್ಲಿರುವ ಪುರಾವೆ ಕೊಡಿ ಅಂದೆ ಆದರೆ ಯಾವುದೇ ದಾಖಲೆಯನ್ನು ನೀಡಿಲ್ಲ ಎಂದರು ಎಂದು ಸಿಎಂ ಸುದ್ದಿಗೋಷ್ಠಿಯಲ್ಲಿ ಕೆಂಪಣ್ಣ ವಿರುದ್ಧ ಗರಂ ಆದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ? ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಅಂತಾ ಹೇಳುತ್ತಿದ್ದಾರೆ. ಹಾಗಾದರೆ ಇಷ್ಟು ದಿನ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಇದ್ರಾ? ಕಾಂಗ್ರೆಸ್​ನವರು ಸುಮ್ನೆ ರಾಜಕೀಯ ಆರೋಪ ಮಾಡ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Published On - 2:41 pm, Thu, 25 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ