AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ

ಸಚಿವ ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಭಾರಿ ಪ್ರತಿಭಟನೆ ನಡೆಯುತ್ತಿರುವಾಗಲೇ, ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ವಿಧಾನ ಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯೇ ಈ ಸಚಿವಾಲಯವನ್ನು ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ
ಸಚಿವ ನಾಗೇಂದ್ರ Image Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on:Aug 21, 2026 | 3:23 PM

Share

ಮುಖ್ಯಾಂಶಗಳು

  • ಸಚಿವ ನಾಗೇಂದ್ರ ವಿರುದ್ಧ ಸದನದ ಒಳ-ಹೊರಗೆ ಬಿಜೆಪಿ ಭಾರಿ ಪ್ರತಿಭಟನೆ.
  • ಯೋಜನೆ ಮತ್ತು ಸಾಂಖ್ಯಿಕ ಖಾತೆ ಜೊತೆಗೆ ಕಲ್ಯಾಣ ಕರ್ನಾಟಕ ಸಚಿವಾಲಯದ ಹೊಣೆ.
  • ಹೊಸ ಸಚಿವಾಲಯದ ಅಧೀನದಲ್ಲಿ KKRDB ಕಾರ್ಯನಿರ್ವಹಣೆ, 16 ಹುದ್ದೆಗಳ ಮೀಸಲು.

ಬೆಂಗಳೂರು, ಆಗಸ್ಟ್ 21: ಸಚಿವ ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಒಳಗೆ ಮತ್ತು ಹೊರಗೆ ಭಾರಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರಿಗೆ ಮತ್ತೊಂದು ಮಹತ್ವದ ಜವಾಬ್ದಾರಿಯನ್ನು ವಹಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನಿರ್ವಹಿಸುತ್ತಿರುವ ನಾಗೇಂದ್ರ ಅವರಿಗೆ, ಇದೀಗ ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ’ದ ಹೊಣೆಯನ್ನೂ ನೀಡಲಾಗಿದೆ.

ಸಚಿವ ನಾಗೇಂದ್ರ ಸ್ಪಷ್ಟನೆ

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವ ನಾಗೇಂದ್ರ, ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. 2025ರಲ್ಲಿ ರಚನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯಕ್ಕೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರೇ ಮುಖ್ಯಸ್ಥರಾಗಿರುತ್ತಾರೆ ಎಂದು ತಿಳಿಸಿದ್ದಾರೆ. ಈ ಸಚಿವಾಲಯದ ಅಧೀನದಲ್ಲಿಯೇ ಪ್ರಮುಖವಾದ ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ (KKRDB) ಕಾರ್ಯನಿರ್ವಹಿಸಲಿದ್ದು, ಈ ಹೊಸ ಸಚಿವಾಲಯದ ಸುಗಮ ಕಾರ್ಯಾಚರಣೆಗಾಗಿ ಸರ್ಕಾರ ಒಟ್ಟು 16 ಹುದ್ದೆಗಳನ್ನು ಮೀಸಲಿಟ್ಟಿದೆ.

ಒಂದು ಕಡೆ ನಾಗೇಂದ್ರ ಅವರ ವಿರುದ್ಧ ವಿರೋಧ ಪಕ್ಷದ ನಾಯಕರು ತೀವ್ರ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದು ಕಡೆ ಸರ್ಕಾರ ಅವರಿಗೆ ಈ ಮಹತ್ವದ ಖಾತೆಯನ್ನು ನೀಡಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಕಪ್ಪು ಟೀ-ಶರ್ಟ್ ಧರಿಸಿ ಬಿಜೆಪಿ-ಜೆಡಿಎಸ್ ಧರಣಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಶಾಸಕರ ಭವನದ ವಾಲ್ಮೀಕಿ ಪ್ರತಿಮೆ ಬಳಿ ಕಪ್ಪು ಟೀ-ಶರ್ಟ್ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ ಶಾಸಕರು ನಾಗೇಂದ್ರ ರಾಜೀನಾಮೆಗೆ ಆಗ್ರಹಿಸುವ ಬರಹಗಳಿದ್ದ ಟೀ-ಶರ್ಟ್ ಧರಿಸಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಟೀ ಶರ್ಟ್​​ ಧರಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

‘ರಾಜೀನಾಮೆ ಕೊಡುವ ಹೋರಾಟ ನಿಲ್ಲಲ್ಲ’:ಆರ್. ಅಶೋಕ್

ಕಳೆದ 5 ದಿನಗಳಿಂದ ಸದನದಲ್ಲಿ ಹೋರಾಟ ನಡೆಸಲಾಗುತ್ತಿದ್ದು, ದಲಿತರ ಹಣ ಲೂಟಿ ಮಾಡಿದವರನ್ನು ಸರ್ಕಾರ ತಕ್ಷಣ ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ನಾಗೇಂದ್ರ ಬದಲಿಗೆ ಕಾಂಗ್ರೆಸ್‌ನ ಬೇರೆ ದಲಿತ ಶಾಸಕರಿಗೆ ಸಚಿವ ಸ್ಥಾನ ನೀಡಲಿ ಎಂದಿರುವ ಅವರು, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಜೊತೆಗೂಡಿ ಸದನದ ಒಳಗೆ ಹಾಗೂ ಹೊರಗೆ ಜಂಟಿ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Fri, 21 August 26

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!