ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆಗೆ ನೋ ಎಂಟ್ರಿ; ಶಿಕ್ಷಣ ಸಚಿವ ಬಿಸಿ ನಾಗೇಶ್
ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ.
ಬೆಂಗಳೂರು: ಹಿಜಾಬ್ (Hijab) ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ (PU Exam) ಬರೆಯಲು ಅವಕಾಶ ನೀಡಲ್ಲ ಅಂತ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಟಿವಿ9ಗೆ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ ಎಸ್ಡಿಎಮ್ಸಿ ಸೂಚನೆಗಳನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.
ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರುಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ
ಇದನ್ನೂ ಓದಿ
ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ; ಪೋಷಕರಿಂದ ಲವ್ ಜಿಹಾದ್ ಆರೋಪ
ಹಿಂದೂ ಮುಸ್ಲಿಂ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗಲಿದೆಯಾ ಕಂಟಕ? ದರ್ಗಾ ಪ್ರವೇಶಿಸುತ್ತಾಳ ದ್ರೌಪಧಿಯಮ್ಮ
Published On - 11:12 am, Thu, 7 April 22