SC ST Internal reservation: ಒಳ ಮೀಸಲಾತಿ ಜಾರಿಗೆ ಸಚಿವ ಪ್ರಭು ಚವ್ಹಾಣ್ ವಿರೋಧ

ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ. ಇದನ್ನು ವಿಪಕ್ಷಗಳು ಟೀಕಿಸಿದ್ದವು. ಈ ನಡುವೆ ಒಳ ಮೀಸಲಾತಿ ಜಾರಿಗೆ ಬೊಮ್ಮಾಯಿ ಸಚಿವ ಸಂಪುದಲ್ಲೇ ವಿರೋಧ ವ್ಯಕ್ತವಾಗಲು ಆರಂಭವಾಗಿದೆ.

SC ST Internal reservation: ಒಳ ಮೀಸಲಾತಿ ಜಾರಿಗೆ ಸಚಿವ ಪ್ರಭು ಚವ್ಹಾಣ್ ವಿರೋಧ
ಒಳಮೀಸಲಾತಿ ಜಾರಿಗೆ ಸಿಎಂ ಬೊಮ್ಮಾಯಿ ಸಂಪುಟದ ಸಚಿವರಿಂದಲೇ ವಿರೋಧ, ಕಾನೂನು ಸಚಿವ ಮಾಧುಸ್ವಾಮಿಗೆ ಪತ್ರ ಬರೆದ ಪ್ರಭು ಚವ್ಹಾಣ್
Follow us
Rakesh Nayak Manchi
|

Updated on:Mar 27, 2023 | 12:20 PM

ಬೆಂಗಳೂರು: ವಿಧಾನಸಭೆ ಚುನಾವಣೆಗೂ (Karnataka Assembly Election 2023) ಮುನ್ನ ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ (Internal Reservation For SC And ST) ಪ್ರಕಟಿಸಿದೆ. ಇದು ಚುನಾವಣಾ ಗಿಮಿಕ್‌ ಎಂದು ವಿಪಕ್ಷಗಳು ಟೀಕಿಸಿದ್ದವು. ಈ ನಡುವೆ ಬೊಮ್ಮಾಯಿ (Basavaraj Bommai) ಸಚಿವ ಸಂಪುದಲ್ಲೇ ಒಳ ಮೀಸಲಾತಿ ಜಾರಿಗೆ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಒಳಮೀಸಲಾತಿ ನೀಡುವುದನ್ನು ಆಕ್ಷೇಪಿಸಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ (J C Madhu swamy) ಅವರಿಗೆ ಸಚಿವ ಪ್ರಭು ಚವ್ಹಾಣ್ ಅವರು ಪತ್ರ ಬರೆದಿದ್ದು, ನ್ಯಾ. ಸದಾಶಿವ ಆಯೋಗ ವರದಿ ಮತ್ತು 2004ರ ಇ.ವಿ.ಚಿನ್ನಯ್ಯ ಪ್ರಕರಣದ ತೀರ್ಪನ್ನು ಉನ್ನತ ಪೀಠವನ್ನು ರಚಿಸಿ ಪರಾಮರ್ಶಿಸಬೇಕು ಎಂದು ಆಗ್ರಹ ಮಾಡಿದ ಮಾಡಿದ್ದಾರೆ.

ಸಚಿವ ಪ್ರಭು ಚೌಹಾಣ್ ಪತ್ರದ ಸಾರಾಂಶ: ನ್ಯಾ. ಸದಾಶಿವ ಆಯೋಗ ವರದಿ ಮತ್ತು 2004ರ ಇ.ವಿ.ಚಿನ್ನಯ್ಯ ಪ್ರಕರಣದ ತೀರ್ಪನ್ನು ಉನ್ನತ ಪೀಠವನ್ನು ರಚಿಸಿ ಪರಾಮರ್ಶಿಸಬೇಕು. ಹೆಚ್ ಎನ್ ನಾಗಮೋಹನ್ ದಾಸ್ ಆಯೋಗವು ಒಳಮೀಸಲಾತಿ ಬಗ್ಗೆ ಇರುವ ಕಾನೂನಿನ ತೊಡಕುಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ವೈಜ್ಞಾನಿಕವಾಗಿ ಒಳಜಾತಿಗಳ ವರ್ಗೀಕರಣ ಮಾಡಬೇಕು ಮತ್ತು ಆದ್ಯತೆಯ ಮೇಲೆ ಮೀಸಲಾತಿ ನೀಡಬೇಕು ಎಂದು ಕಾನೂನು ಸಚಿವರಿಗೆ ಪ್ರಭು ಚವ್ಹಾಣ್ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಒಳ ಮೀಸಲಾತಿ ಜಾರಿಗೆ ಆಳವಾದ ಅಧ್ಯಯನದ ಅಗತ್ಯವಿದೆ. ಇಂತಹ ಅಧ್ಯಯನದ ವರದಿಯ ಮೇಲೆ ಸರ್ಕಾರವು ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳು ನಿವಾರಣೆ ಆದ ನಂತರ ಮತ್ತು ಸಮುದಾಯಗಳ ಹಿಂದುಳಿದಿರುವಿಕೆಯ ವಸ್ತು ನಿಷ್ಠ ಮತ್ತು ವೈಜ್ಞಾನಿಕ ಅಧ್ಯಯನದ ವರದಿ ಪಡೆದ ನಂತರವಷ್ಟೇ ವರ್ಗೀಕರಣದ ಬಗ್ಗೆ ಚರ್ಚಿಸಬಹುದು. ಸಮುದಾಯುಗಳ ಸಬಲೀಕರಣದ ಕಾರ್ಯಕ್ರಮಗಳನ್ನು ರೂಪಿಸಿದ ಬಳಿಕ ಜಾರಿ ಮಾಡಬಹುದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದಿದ್ದಾರೆ.

ಇದನ್ನೂ ಓದಿ: ಒಳ ಮೀಸಲಾತಿ ಚುನಾವಣಾ ಗಿಮಿಕ್‌ ಅಲ್ಲದೇ ಬೇರೆ ಏನೂ ಇಲ್ಲ: ಡಾ ಜಿ ಪರಮೇಶ್ವರ್‌

ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಮಾರ್ಚ್ 24ರಂದು ಪ್ರಕಟಿಸಿದೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಸಿಎಂ ಬೊಮ್ಮಾಯಿ, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದಿದ್ದರು. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

ಸರ್ಕಾರದ ಒಳ ಮೀಸಲಾತಿ ಜಾರಿಗೆ ಪರ ವಿರೋಧಗಳು ವ್ಯಕ್ತವಾಗಿವೆ. ಸಂಪುಟ ಸಭೆ ಇಂದು ಕ್ರಾಂತಿಕಾರಿ ನಿಲುವು ತೆಗೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರೆ, 2ಸಿ ಅಡಿ ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ನೀಡಿದ್ದನ್ನು ಸ್ವಾಗತಿಸುವೆ ಎಂದು ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥಶ್ರೀ ಹೇಳಿದ್ದರು. ಎಲ್ಲರಿಗೂ ನ್ಯಾಯ ಕೊಡುವ ರೀತಿಯಲ್ಲಿ ಬೊಮ್ಮಾಯಿ ಸರ್ಕಾರ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ ಅಂತ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

ಒಳ ಮೀಸಲಾತಿ ಜಾರಿ ಬಗ್ಗೆ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಹಲವು ವರ್ಷಗಳಿಂದಲೂ ಒಳ ಮೀಸಲಾತಿ ಬಗ್ಗೆ ಬೇಡಿಕೆ ಇತ್ತು. 4 ವರ್ಷದಿಂದ ನಿರ್ಧಾರ ಕೈಗೊಂಡಿರಲಿಲ್ಲ. ಜಾರಿಯಾಗದಿರಲಿ ಅಂತಾ ಕೊನೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಇದು ಚುನಾವಣಾ ಗಿಮಿಕ್‌ ಅಲ್ಲದೇ ಬೇರೆ ಏನೂ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದರು. ಒಳ ಮೀಸಲಾತಿ ಬೇಡಿಕೆ ನಮ್ಮ ಸರ್ಕಾರ, ಸಮ್ಮಿಶ್ರ ಸರ್ಕಾರ, ಈಗಿನ ಸರ್ಕಾರದ ಆರಂಭದಲ್ಲೂ‌ ಇತ್ತು. ಒಳಮೀಸಲಾತಿಯ ಸದಾಶಿವ ಆಯೋಗದ ವರದಿ ಸರ್ಕಾರದಲ್ಲಿ ಇದ್ದದ್ದು ನಿಜ. ಇದನ್ನ ನಾನು ಸ್ವಾಗತಿಸಿದ್ರೂ ಇದೊಂದು ಚುನಾವಣಾ ಗಿಮಿಕ್​ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Mon, 27 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ