ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸೇರಿ ಪಕ್ಷದ ಪ್ರಮುಖರು ಭಾಗಿ; ಸಚಿವ ಪ್ರಹ್ಲಾದ್ ಜೋಶಿ ಕಿಡಿ

|

Updated on: Jul 28, 2024 | 9:19 PM

ಮೋದಿ ಸರ್ಕಾರದ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು 14 ತಿಂಗಳಲ್ಲಿ ಇಷ್ಟೊಂದು ಭ್ರಷ್ಟಾಚಾರ ನಡೆದಿದ್ದು, ಕಾಂಗ್ರೆಸ್ ಭ್ರಷ್ಟಾಚಾರದ ಜನಕ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು. ಜೊತೆಗೆ ಸಿಎಂ ಮೊದಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸೇರಿ ಪಕ್ಷದ ಪ್ರಮುಖರು ಭಾಗಿ; ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಪ್ರಹ್ಲಾದ್ ಜೋಶಿ
Follow us on

ಬೆಂಗಳೂರು, ಜು.28: ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸೇರಿ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi)ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮುಡಾ ಹಗರಣದ ಕುರಿತು ಮಾತನಾಡಿದ ಅವರು, ‘ಇದು ಅತಿ ದೊಡ್ಡ ಹಗರಣ, ಎರಡು ದೊಡ್ಡ ಹಗರಣ ನಡೆದಿದೆ ಎನ್ನಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಫಲಾನುಭವಿಗಳನ್ನ ಮುಚ್ಚಿಡಲು ನೀತಿ ಆಯೋಗ ಸಭೆಗೆ ಗೈರು

ಜೊತೆಗೆ ಇಲ್ಲಿನ ಹಣವನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ಹಣ ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಆದೇಶದ ಬಗ್ಗೆ ಸಂಪೂರ್ಣ ತಿಳುವಳಿಕೆಯಿಂದ ಈ ರೀತಿ ಮಾಡಲಾಗಿದೆ ಎನ್ನಲಾಗಿತ್ತು. ರಾಹುಲ್ ಗಾಂಧಿಗೂ ಇದರ ಸಂಪೂರ್ಣ ಅರಿವಿದೆ. ಕಾಂಗ್ರೆಸ್ ಭ್ರಷ್ಟಾಚಾರದ ಫಲಾನುಭವಿಗಳನ್ನ ಮುಚ್ಚಿಡಲು ನೀತಿ ಆಯೋಗದ ಸಭೆಗೂ ಗೈರಾಗಿದೆ ಎಂದಿದ್ದಾರೆ. ಸಿಎಂ ಮೊದಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಡಿಕೆಶಿ ಟ್ರಬಲ್‌ ಶೂಟರ್ ಆಗಿದ್ದರೇ ದೇಶಾದ್ಯಂತ ಕಾಂಗ್ರೆಸ್​​ಗೆ ಆಗಿರುವ ಟ್ರಬಲ್ ಶೂಟ್​ ಮಾಡಲಿ: ಪ್ರಹ್ಲಾದ್ ಜೋಶಿ ಲೇವಡಿ

ಕಾಂಗ್ರೆಸ್ ಭ್ರಷ್ಟಾಚಾರದ ಜನಕ ಎಂದ ಪ್ರಹ್ಲಾದ್ ಜೋಶಿ

ಮೋದಿ ಸರ್ಕಾರದ ಭ್ರಷ್ಟಾಚಾರ ರಹಿತ ಆಡಳಿತ ಮಾಡುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು 14 ತಿಂಗಳಲ್ಲಿ ಇಷ್ಟೊಂದು ಭ್ರಷ್ಟಾಚಾರ ನಡೆದಿದ್ದು, 100 ಪ್ರತಿಶತ ಭ್ರಷ್ಟಾಚಾರದ ಸಿಎಂ ಎಂದು ಕಿಡಿಕಾರಿದರು. ಇನ್ನು ಕಾಂಗ್ರೆಸ್ ಭ್ರಷ್ಟಾಚಾರದ ಜನಕ, ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮುಂದುವರೆಸುತ್ತೇವೆ. ಈ ಸರ್ಕಾರದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾತ್ರವೂ ಇದೆ. ಜನಜಾಗೃತಿಗಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತೆವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ