ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
ಪಂಚಮಿತ್ರ ಪೋರ್ಟಲ್ನ್ನು ಇಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆ ಮಾಡಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಸೇವೆಯನ್ನ ಪಂಚಮಿತ್ರ ಪೋರ್ಟಲ್ ಮೂಲಕ ಪಡೆಯಬಹುದು. ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ ಸೇರಿದಂತೆ ಹಲವಾರು ಸೇವೆಗಳನ್ನು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪಡೆಯಬಹುದಾಗಿದೆ.
ಬೆಂಗಳೂರು, ಮಾರ್ಚ್ 1: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಸೇವೆಯನ್ನ ಪಂಚಮಿತ್ರ ಪೋರ್ಟಲ್ ಮೂಲಕ ಪಡೆಯಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಸೇವೆಗಳನ್ನು ಪಡೆಯಬಹುದಾಗಿದೆ. ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ ಹೀಗೆ ಸಾಕಷ್ಟು ಸೇವೆಗಳನ್ನ ಪಡೆಯಬಹುದಾಗಿದೆ.
ಪಂಚಮಿತ್ರ ಪೋರ್ಟಲ್ ಮೂಲಕ ಈ ಸೇವೆಗಳನ್ನ ಪಡೆಯಬಹುದು
ಸ್ವಾಧೀನ ಪ್ರಮಾಣಪತ್ರ
ರಸ್ತೆ, ಅಗೆವುದಾಕ್ಕಾಗಿ ಅನುಮತಿ
ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ
ನಿರಾಕ್ಷೇಪಣಾ ಪತ್ರ
MGNREGA ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ
ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು
ಇದನ್ನೂ ಓದಿ: ಲೋಕಸಭೆ ಚುನಾವಣೆ 2024: ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಕುಮಾರಸ್ವಾಮಿ ವಾಸ್ತವ್ಯ, ಪಕ್ಷದ ಶಾಸಕರೊಂದಿಗೆ ಸಭೆ
ಹೊಸ/ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿವಿಕರ
ಹೊಸ/ಅಸ್ತಿತ್ವದಲ್ಲಿರುವ ಓವರ್‌ಗೌಂಡ್ ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಗಳ ಅನುಮತಿ/ನಿಯಮಿತಗೊಳಿಸುವಿಕೆ
ನಮೂನೆ 9/11ಎ
ನಮೂನೆ 11 ಬಿ ಬಗ್ಗೆ ಮಾಹಿತಿ ಪಡೆಯಬಹುದು
ಬಿಜೆಪಿಯವರು ಎಲ್ಲವನ್ನೂ ಅನುಮಾನದಿಂದಲೇ ನೋಡುತ್ತಾರೆ
ಎಫ್ಎಸ್ಎಲ್ ವರದಿ ವಿಚಾರವಾಗಿ ಮಾತನಾಡಿದ ಅವರು, ನಾನು ಯಾವುದನ್ನೂ ನೋಡಿಲ್ಲ. ಬೆಳಗ್ಗೆ 8 ಗಂಟೆಗೆ ಮನೆ ಬಿಟ್ಟವನು ನನಗೆ ಎಫ್ಎಸ್ಎಲ್ ವಿಚಾರ ಗೊತ್ತಿಲ್ಲ. ಬಿಜೆಪಿಯವರು ಎಲ್ಲವನ್ನೂ ಅನುಮಾನದಿಂದಲೇ ನೋಡುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಉಸ್ತುವಾರಿ ಅವಧಿಯಲ್ಲಿ ಕೊಲೆ ಸುಲಿಗೆಗಳದ್ದೇ ದರ್ಬಾರು: ಬಿಜೆಪಿ ಕಿಡಿ
ಗುಲ್ಬರ್ಗ ಮರ್ಡರ್ ವಿಚಾರ ವೈಯಕ್ತಿಕ ಕಾರಣಕ್ಕೆ ಎಂದು ಮಾಹಿತಿ ಇದೆ. ರಾಜಕೀಯ ಕಾರಣ ಇಲ್ಲ ಅಂತ ಸದ್ಯಕ್ಕೆ ಮಾಹಿತಿ ಇದೆ. ಹೊಡೆದವನು ಅವನಿಗೆ ಬೇಲ್ ಕೊಡಿಸಿದ್ದನಂತೆ. ಹೊಡೆದವರು ಯಾರಪ್ಪ, ಹೊಡೆಸಿಕೊಂಡವರು ಯಾರಪ್ಪ? ಮೇಲ್ನೋಟಕ್ಕೆ ರಾಜಕೀಯ ಕಾರಣ ಇಲ್ಲ ಎಂದು ಮಾಹಿತಿ ಇದೆ. ತನಿಖೆ ನಡೆಯುತ್ತಿದೆ ಸಂಜೆಯೊಳಗೆ ಮಾಹಿತಿ ಇನ್ನಷ್ಟು ಸಿಗಬಹುದು ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.