Bengaluru Rains: ನೊಟೀಸ್ ಇಲ್ಲದೆ ರಾಜಕಾಲುವೆ ಒತ್ತುವರಿ ತೆರವು; ಸಚಿವ ಆರ್ ಅಶೋಕ್

R Ashok: ಕರ್ನಾಟಕದಲ್ಲಿ ಮಳೆ ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ₹ 8 ಸಾವಿರ ಕೋಟಿ ಹಣ ಬಿಡುಗಡೆಯಾಗಿದೆ ಎಂದು ಆರ್ ಅಶೋಕ್ ಹೇಳಿದರು.

Bengaluru Rains: ನೊಟೀಸ್ ಇಲ್ಲದೆ ರಾಜಕಾಲುವೆ ಒತ್ತುವರಿ ತೆರವು; ಸಚಿವ ಆರ್ ಅಶೋಕ್
ಸಚಿವ ಆರ್ ಅಶೋಕ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 01, 2022 | 7:42 AM

ಬೆಂಗಳೂರು: ನಗರದಲ್ಲಿ ಮಳೆಯಿಂದ (Bengaluru Rains) ಆಗಿರುವ ಅನಾಹುತದ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಕಳೆದ ಬಾರಿ ಮಳೆಯಿಂದ ಸಮಸ್ಯೆ ಎದುರಿಸಿದ್ದ ಪ್ರದೇಶಗಳಲ್ಲಿ ರಿಪೇರಿ ಕಾಮಗಾರಿ ನಡೆದಿದೆ. ಇಂಥ ಸ್ಥಳಗಳಲ್ಲಿ ಹೊಸ ಕಾಲುವೆಗಳನ್ನು ನಿರ್ಮಿಸಿ ನೀರು ಹೊರಹೋಗಲು ವ್ಯವಸ್ಥೆ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashok) ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸುತ್ತೇವೆ. ಇಂಥ ಒತ್ತುವರಿ ತೆರವುಗೊಳಿಸಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ನೊಟೀಸ್ ಸಹ ಕೊಡುವ ಅಗತ್ಯವಿಲ್ಲ. ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಯಾವುದೇ ಒತ್ತಡಕ್ಕೆ ಮಣಿಯದೆ ತೆರವು ಮಾಡುವಂತೆ ಸೂಚಿಸಿದ್ದೇವೆ. ಭಾರಿ ಮಳೆಯಿಂದ ಎಲ್ಲ ಕರೆ ಕಟ್ಟೆಗಳು ಭರ್ತಿಯಾಗಿವೆ ಎಂದು ಅವರು ಹೇಳಿದರು.

ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದ್ದರೆ ಪರಿಹಾರ ನೀಡಲಾಗುವುದು. ಹೊಲ-ಗದ್ದೆಗಳ ಬೆಳೆಹಾನಿಗೂ ಪರಿಹಾರ ನೀಡಲಾಗುವುದು. ಸೆ.3ರಂದು ಹಾಸನ, ತುಮಕೂರು, ಮಂಗಳೂರು ಭಾಗದಲ್ಲಿ ಪ್ರವಾಸ ಮಾಡಲಿದ್ದೇನೆ ಎಂದು ಹೇಳಿದರು. ಮಹದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಅನಾಹುತಗಳು ಸಂಭವಿಸಿವೆ. ಹೊಸ ಕಾಲುವೆಗಳ ನಿರ್ಮಾಣ ಮಾಡಿ ನೀರು ಆಚೆ ಹೋಗಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಬಹುತೇಕ ಎಲ್ಲ ಕೆರೆಗಳೂ ತುಂಬಿವೆ ಎಂದು ಹೇಳಿದರು.

ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ₹ 8 ಸಾವಿರ ಕೋಟಿ ಹಣ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಬೇಸಿಗೆಯೇ ಇರಲಿಲ್ಲ ಎನ್ನುವಂತೆ ಮಳೆ ಬರುತ್ತಿದೆ. ಇದು ಸಂಕಷ್ಟ ಪರಿಸ್ಥಿತಿ. ರಾಜ್ಯದ ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.

ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ; ಸಿಎಂ ಬಸವರಾಜ ಬೊಮ್ಮಾಯಿ

ಮಳೆಯಿಂದಾಗಿ ಬೆಂಗಳೂರಿನಲ್ಲಿ (Bengaluru Rain) ಅಪಾರ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ 122ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿದೆ. ಕಂದಾಯ ಸಚಿವರು ಪರಿಶೀಲಿಸಿ, ಸಂತ್ರಸ್ತರಿಗೆ ಪರಿಹಾರ ನೀಡಲಿದ್ದಾರೆ. ಮಹದೇವಪುರ, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಹಾನಿಯ ಪ್ರಮಾಣ ಹೆಚ್ಚು ಎಂದು ಹೇಳಿದರು.

ನಗರದ ಹಲವೆಡೆ ಮುಖ್ಯ ಕಾಲುವೆಗಳು ಮುಚ್ಚಿಕೊಂಡಿವೆ. ಕೆಲವೆಡೆ ಕಾಲುವೆಗಳ ಅಗಲ ಕಡಿಮೆಯಿರುವುದರಿಂದ ತೊಂದರೆಯಾಗುತ್ತಿದೆ. ನೀರು ಹರಿಯಲು ಇರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಸೂಚನೆ ನೀಡಿದ್ದೇನೆ. ಹೊರ ವರ್ತುಲ ರಸ್ತೆಯಲ್ಲಿ ನಿಂತಿರುವ ನೀರನ್ನು ಸಮರ್ಪಕವಾಗಿ ಹರಿಸಲು ಸೂಚನೆ ನೀಡಿದ್ದೇನೆ. ಮಳೆ ನೀರು ಸಾಗಿಸುವ ಚರಂಡಿಗಳನ್ನು ಪರಸ್ಪರ ಸಂಬಂಧ ಕಲ್ಪಿಸದಿರುವ ಕಾರಣ ಲೇಔಟ್​ಗಳಲ್ಲಿ ನೀರು ನಿಂತಿದೆ ಎಂದು ಹೇಳಿದರು.

Published On - 7:41 am, Thu, 1 September 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ