ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವ: ಭೂಕಂಪದ ಮುನ್ಸೂಚನೆ ಅಲ್ಲ ಭಯಪಡಬೇಡಿ ಎಂದು ಆರ್ ಅಶೋಕ್ ಪ್ರಕಟಣೆ
ಆರ್ ಅಶೋಕ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Nov 26, 2021 | 6:30 PM

ಬೆಂಗಳೂರು: ಕರ್ನಾಟಕ ರಾಜಧಾನಿಯಲ್ಲಿ ಭೂಮಿ ಕಂಪಿಸಿದ ಅನುಭವ ವಿಚಾರವಾಗಿ ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಯಾರೂ ಭಯಪಡಬೇಡಿ, ಇದು ಸಣ್ಣ ಪ್ರಮಾಣದ ಕಂಪನ. ಹೆಮ್ಮಿಗೆಪುರ, ಕಗ್ಗಲೀಪುರ, ಕೆಂಗೇರಿ, ಆರ್.ಆರ್. ನಗರ, ಮುಂತಾದ ಕಡೆ ಶಬ್ದ, ಸಣ್ಣ ಪ್ರಮಾಣದ ಕಂಪನವಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರ, ತಜ್ಞರ ವರದಿ ಪಡೆದಿದ್ದು ಇದು ಭೂಕಂಪದ ಮುನ್ಸೂಚನೆ ಅಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ನಾನು ಅಧಿಕಾರಿಗಳು, ತಜ್ಞರ ಜೊತೆ ಸಂಪರ್ಕದಲ್ಲಿದ್ದೇನೆ. ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಸಚಿವ ಆರ್. ಅಶೋಕ್ ಈ ಸಂಬಂಧ ಮನವಿ ಮಾಡಿಕೊಂಡಿದ್ದಾರೆ.

ಭೂಮಿ ಕಂಪಿಸಿದ ಅನುಭವ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲ ಸಲ ಲಘುವಾಗಿ ಕಂಪಿಸಿದ ಅನುಭವವಾಗಿದ್ದು, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ.

ಮಂಡ್ಯದಲ್ಲಿಯೂ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. 11.50ರ ಸುಮಾರಿಗೆ ಮೊದಲ ಬಾರಿಗೆ ಜೋರು ಶಬ್ದ ಕೇಳಿ ಬಂದಿದೆ. 10-15 ನಿಮಿಷ ಅಂತರದಲ್ಲಿ 2 ಬಾರಿ ಕೇಳಿಬಂದ ಶಬ್ದ ಕೇಳಿ ಬಂದಿದೆ. ಕೆಲ ಕಾಲ ಭೂಕಂಪನದ ಅನುಭವವಾಗಿದ್ದು, ಶಬ್ಧಕ್ಕೆ ಮನೆ, ಕಚೇರಿ ಕಟ್ಟಡಗಳ ಕಿಟಕಿಗಳು, ವಸ್ತುಗಳು ನಲುಗಿವೆ. ಈ ಹಿಂದೆ ಕೆಆರ್‌ಎಸ್, ಪಾಂಡವಪುರ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಶಬ್ಧ ಕೇಳಿಬಂದಿತ್ತು. ಇದೀಗ ಮಂಡ್ಯ ನಗರದಲ್ಲಿ ಭಾರೀ ಶಬ್ದ ಕೇಳಿ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭೂಮಿ ಕಂಪಿಸಿದ ಅನುಭವದ ಬಗ್ಗೆ ಟಿವಿ9 ಜತೆ ಅಭಿಪ್ರಾಯ ಹಂಚಿಕೊಂಡ ಹೆಮ್ಮಿಗೆಪುರ ನಿವಾಸಿ

ಇದನ್ನೂ ಓದಿ: Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

Published On - 6:29 pm, Fri, 26 November 21

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು