ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ. ಜತೆಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ
ಸಚಿವೆ ಶಶಿಕಲಾ ಜೊಲ್ಲೆ
Follow us
TV9 Web
| Updated By: preethi shettigar

Updated on:Mar 23, 2022 | 6:01 PM

ಬೆಂಗಳೂರು: ರಾಜ್ಯಾದ್ಯಂತ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ ಮಾಡಲು ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ ನೀಡಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ(Temple) ಸುತ್ತೋಲೆ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಚಾಂದ್ರಮಾನ ಮತ್ತು ಸೌರಮಾನ ಯುಗಾದಿಯ(Ugadi) ದಿನಗಳಂದು ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆ ಆಚರಿಸುವಂತೆ ಸೂಚನೆ ಮುಜರಾಯಿ‌ ಸಚಿವೆ ಶಶಿಕಲಾ ಜೊಲ್ಲೆ‌ ಸೂಚನೆ (Shashikala Jolle) ನೀಡಿದ್ದಾರೆ.

ದೇವಾಲಯಗಳಲ್ಲಿ ಪಂಚಾಂಗ ಶ್ರವಣ, ಹರಿಕಥೆ, ವಿಶೇಷ ಪೂಜೆ, ಭಜನೆ, ಹರಿಕಥೆ, ಪ್ರಸಾದ ವಿತರಣೆ ಮುಂತಾದ ಕಾರ್ಯಕ್ರಮ ಹಮ್ಮಿಕೊಂಡು ಧಾರ್ಮಿಕ ದಿನವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಸೂಚನೆ ನೀಡಿದ್ದಾರೆ. ಜತೆಗೆ ಸೂಕ್ತ ಸುತ್ತೋಲೆ ಹೊರಡಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಸಚಿವೆ ಸೂಚನೆ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳಲು‌ ಕೂಡಾ ಸೂಚನೆ ನೀಡಿದ್ದಾರೆ.

ದೇವಾಲಯ ವ್ಯಾಪ್ತಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರ: ಸದನದಲ್ಲಿ ಚರ್ಚೆ ಜೋರು

ದೇವಾಲಯ ವ್ಯಾಪ್ತಿ, ಜಾತ್ರೆಗಳಲ್ಲಿ ಹಿಂದುಯೇತರರಿಗೆ ನಿರ್ಬಂಧ ವಿಧಿಸಿರುವ ಬಗ್ಗೆ ಪ್ರಸ್ತಾಪ ಮಾಡಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಬಗ್ಗೆ, ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ವಿಷಯ ಪ್ರಸ್ತಾಪ ಮಾಡಿದ್ದಾರೆ. ಬ್ಯಾನರ್ ಹಾಕಿದವರು ಹೇಡಿಗಳು, ಕ್ರೂರಿಗಳು. ಹೆಸರು ಹಾಕದೆ ಕೆಲವರು ಭಿತ್ತಿಪತ್ರಗಳನ್ನು ಅಳವಡಿಸುತ್ತಿದ್ದಾರೆ. ಸಮಸ್ಯೆ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಭಿತ್ತಿಪತ್ರ ಅಳವಡಿಸುವುದು ಪೊಲೀಸರಿಗೆ ಗೊತ್ತಿಲ್ಲವಾ? ಪೊಲೀಸರು ಕ್ರಮ ಕೈಗೊಂಡರೆ ಸಮಸ್ಯೆ ಬಗೆಹರಿಯುತ್ತೆ. ಸಮಾಜದಲ್ಲಿ ವೈಮನಸ್ಸು ಸೃಷ್ಟಿಗೆ ಅವಕಾಶ ನೀಡಬಾರದು. ಭಿತ್ತಿಪತ್ರ ಹಾಕಿದವರ ಉದ್ದೇಶವೇನೆಂದು ಬಯಲಾಗಬೇಕು. ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಹೇಳಿದ್ದಾರೆ. ಖಾದರ್ ಮಾತಿಗೆ ಆಡಳಿತ ಪಕ್ಷದ ಸದಸ್ಯರಿಂದ ವಿರೋಧ ವ್ಯಕ್ತವಾಗಿದೆ.

ಒಂದು ವರ್ಗದ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿದ್ದಾರೆ. ಇದು ಸಮಾಜಕ್ಕೆ ಆಘಾತಕಾರಿ. ಇತಿಹಾಸ ಗೊತ್ತಿಲ್ಲದವರು ಭಿತ್ತಿಪತ್ರಗಳನ್ನು ಹಾಕುತ್ತಿದ್ದಾರೆ. ಒಂದು ಸಮುದಾಯಕ್ಕೆ ಬಹಿಷ್ಕಾರ ಹಾಕುವುದು ಸರಿಯಲ್ಲ. ಮುಂದಿನ ಪೀಳಿಗೆಗೆ ಒಳ್ಳೆಯದಾಗುವುದಿಲ್ಲ. ನಮ್ಮ ಸಾಂವಿಧಾನಿಕ ಹಕ್ಕನ್ನು ನಮಗೆ ಕೊಡಿ ಎಂದು ವಿಧಾನಸಭೆಯಲ್ಲಿ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಾತಾವರಣ ಮತ್ತೆ ಕೆಡಿಸಬಾರದು. ಸಾಮರಸ್ಯ ಪರಂಪರೆ ಇತಿಹಾಸ ಇದೆ. ಅದನ್ನು ಕಾಪಾಡದಿದ್ರೆ ಮುಂದಿನ ಪೀಳಿಗೆಗೆ ಕಷ್ಟವಾಗಲಿದೆ. ಒಂದು ವರ್ಗದ ವ್ಯಾಪಾರಿಗಳು ಬರಬಾರದು ಅಂತ ಪೋಸ್ಟರ್ ಹಾಕುವುದು ಸಮಾಜಕ್ಕೆ ಆಘಾತ. ಇದು ಜಾತ್ರೆ, ಉರೂಸ್ ಸಮಯ. ಯಾವ ಸಂಘಟನೆ ಮಾಡ್ತಿದೆಯೋ ಅವರಿಗೆ ಇತಿಹಾಸ ಗೊತ್ತಿಲ್ಲ. ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ ಸ್ಥಾಪಿಸಿರೋದೇ ಮುಸ್ಲಿಂ ಜನಾಂಗ. ಜಾನಪದ ಹಾಡುಗಳಲ್ಲಿ ಮುಸ್ಲಿಮರು ಹೇಗೆ ಜೊತೆಗಿದ್ರು ಅನ್ನೋ ಇತಿಹಾಸ ಇದೆ. ನಾವು ಹಾಳು ಮಾಡಿದ್ರೆ ದ್ರೋಹವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಅಂಜನಾದ್ರಿಯೇ ಹನುಮನ ಜನ್ಮಸ್ಥಳ, ವಿವಾದದ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಸಾಧ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಕರ್ನಾಟಕದ ಮುಜರಾಯಿ ಇಲಾಖೆ ದೇಗುಲಗಳಲ್ಲಿ ಗೋಶಾಲೆ ಆರಂಭಿಸಲಾಗುವುದು; ಗೋಪೂಜೆ ಬಳಿಕ ಶಶಿಕಲಾ ಜೊಲ್ಲೆ ಹೇಳಿಕೆ

Published On - 5:50 pm, Wed, 23 March 22

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್