ಎಸ್ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಪ್ರಕರಣ; ತನಿಖೆಯನ್ನು ಸಿಸಿಬಿಗೆ ವಹಿಸಿ ಕಮಲ್ ಪಂತ್ ಆದೇಶ
ಪ್ರಕರಣ ಸಂಬಂಧ ಒಂದಿಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ಹಾಗಾಗಿ ನಾನು ಏನೂ ಹೇಳಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರು: ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತನಿಖೆಯನ್ನು ಸಿಸಿಬಿಗೆ ವಹಿಸಿ ಆದೇಶಿಸಿದ್ದಾರೆ. ಡಿಸೆಂಬರ್ 27 ರಂದು ಸೈಬರ್ ಕ್ರೈಂನಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸಿಸಿಬಿಗೆ ವಹಿಸಲಾಗಿದೆ.
ಸಚಿವ ಎಸ್.ಟಿ. ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಕೇಸ್ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಸಂಬಂಧ ಒಂದಿಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ, ಹಾಗಾಗಿ ನಾನು ಏನೂ ಹೇಳಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ವಿಚಾರವಾಗಿ ಕೂಡ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ವಲ್ಪ ವಯಸ್ಸಾದವರು. ಸಿದ್ದರಾಮಯ್ಯರನ್ನ ಪಾದಯಾತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸಿದ್ದರಾಮಯ್ಯರ ಆರೋಗ್ಯದ ಬಗ್ಗೆ ಸರ್ಕಾರಕ್ಕೂ ಆತಂಕವಿರುತ್ತೆ. ನಾವು ಪಾದಯಾತ್ರೆ ಮಾಡಬೇಡಿ ಎಂದು ಅವರಿಗೆ ಹೇಳಿದ್ವಿ. ಆದರೆ ತೊಡೆತಟ್ಟಿ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ. ಜನಸಾಮಾನ್ಯರಿಗೆ ಬೇರೆ ಜನಪ್ರತಿನಿಧಿಗಳಿಗೆ ಬೇರೆ ಕಾನೂನಿಲ್ಲ. ಎಲ್ಲರಿಗೂ ಒಂದೇ ಕಾನೂನು ಅನ್ವಯ ಆಗುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ. ಪಿಎಗೆ ಕಳಿಸಿ ಬೆದರಿಕೆ ಹಾಕಿದ್ದಾಗಿ ನಿಶಾಂತ್ ದೂರು ನೀಡಿದ್ದಾರೆ. 1 ಕೋಟಿ ನೀಡದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸೈಬರ್ ಕ್ರೈಂ ಪೊಲೀಸರಿಗೆ ಎಸ್.ಟಿ.ಸೋಮಶೇಖರ್ ಪುತ್ರ ದೂರು ನೀಡಿದ್ದಾರೆ.
ಇನ್ನು ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಹುಲ್ ಭಟ್ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ 5 ದಿನ ಸಿಸಿಬಿ ವಶಕ್ಕೆ ಪಡೆಯಲಾಗಿದೆ. ದುಬೈನಿಂದ ವಾಪಸಾದ ಬಳಿಕ ರಾಹುಲ್ ಭಟ್ ವಶಕ್ಕೆ ಪಡೆದಿದ್ದು ಮತ್ತೋರ್ವ ಆರೋಪಿ ಶಾಸಕರ ಪುತ್ರಿಗಾಗಿ ಹುಡುಕಾಟ ನಡೆಯುತ್ತಿದೆ.
ಇದನ್ನೂ ಓದಿ: ಎಸ್ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್ ಪ್ರಕರಣ; ಶಾಸಕರಿಂದ ವಿವರಣೆ ಪಡೆದ ಸಿಸಿಬಿ
ಇದನ್ನೂ ಓದಿ: ಸಚಿವ S.T.ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್‌ಮೇಲ್; ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ
Published On - 7:24 pm, Sun, 9 January 22