ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ (Umesh Katti) ಹೃದಯಾಘಾತದಿಂದ ನಿಧನರಾಗಿದ್ದು, ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ. ” ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
ಗಣ್ಯರ ಸಂತಾಪ
ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ ಸಂತಾಪ
ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದ ಗೌಡ ಟ್ವೀಟ್ ಮಾಡಿ “ರಾಜ್ಯಸರ್ಕಾರದ ಹಿರಿಯ ಸಚಿವರು, ನನ್ನ ಆಪ್ತರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಜ್ಯಸರ್ಕಾರದ ಹಿರಿಯ ಸಚಿವರು, ನನ್ನ ಆಪ್ತರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥನೆ. pic.twitter.com/GhDAER4ssq
— Sadananda Gowda (@DVSadanandGowda) September 6, 2022
ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸಂತಾಪ
“ಹಿರಿಯ ಸಂಪುಟ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ದುಃಖ ತಂದಿದೆ. ರಾಜಕೀಯ ಹಾಗೂ ಜನಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದ ನಾಯಕರನ್ನು ಕಳೆದುಕೊಂಡು ನಾಡು ಇಂದು ಬರಿದಾಗಿದೆ. ಭಗವಂತ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ” ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಸಂತಾಪ
“ಅರಣ್ಯ ಸಚಿವರು, ಹಿರಿಯ ನಾಯಕರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು. ಸಚಿವ ಸಂಪುಟದ ಹಿರಿಯ ಮಿತ್ರನನ್ನು ಕಳೆದುಕೊಂಡು ಶೋಕತಪ್ತನಾಗಿದ್ದೇನೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ಅವರ ಕುಟುಂಬವರ್ಗ ಹಾಗೂ ಹಿತೈಷಿಗಳಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಸದ್ಗತಿ ” ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ
”ಪಕ್ಷದ ಹಿರಿಯ ನಾಯಕರು, ರಾಜ್ಯ ಸಚಿವರಾದ ಮಾನ್ಯ ಶ್ರೀ ಉಮೇಶ್ ಕತ್ತಿಯವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಸದ್ಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.
ಇಂಧನ ಸಚಿವ ವಿ.ಸುನಿಲ್ ಕುಮಾರ್ ಸಂತಾಪ
ಪಕ್ಷದ ಹಿರಿಯ ನಾಯಕರು ಹಾಗು
ಸಚಿವ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ, ಖೇದ ಉಂಟು ಮಾಡಿದೆ. ಅನುಭವಿ ರಾಜಕಾರಿಣಿ ಉಮೇಶ್ ಕತ್ತಿಯವರ ಸೇವೆಯನ್ನು ನಾಡು ಸದಾ ಸ್ಮರಿಸಲಿದೆ. ಅವರ ಕುಟುಂಬಕ್ಕೆತೀವ್ರ ಸಂತಾಪ ಸೂಚಿಸುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಆಪ್ತರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/1gjIE9EdXS— Sunil Kumar Karkala (@karkalasunil) September 6, 2022
“ಪಕ್ಷದ ಹಿರಿಯ ನಾಯಕರು ಹಾಗು ಸಚಿವ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ, ಖೇದ ಉಂಟು ಮಾಡಿದೆ. ಅನುಭವಿ ರಾಜಕಾರಿಣಿ ಉಮೇಶ್ ಕತ್ತಿಯವರ ಸೇವೆಯನ್ನು ನಾಡು ಸದಾ ಸ್ಮರಿಸಲಿದೆ. ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತಾ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಆಪ್ತರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.
Published On - 12:13 am, Wed, 7 September 22