AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Katti Obituary: 6 ಪಕ್ಷದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ

Umesh Katti: ಬೆಳಗಾವಿಯ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ, ವಿಭಿನ್ನವಾದ ರಾಜಕೀಯ ಪಥದಲ್ಲಿ ಸಾಗಿ ಸುದ್ದಿ ಮಾಡಿದ್ದರು.

Umesh Katti Obituary: 6 ಪಕ್ಷದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ
Umesh Katti
TV9 Web
| Updated By: ನಯನಾ ರಾಜೀವ್|

Updated on:Sep 07, 2022 | 12:20 AM

Share

ಬೆಳಗಾವಿಯ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ, ವಿಭಿನ್ನವಾದ ರಾಜಕೀಯ ಪಥದಲ್ಲಿ ಸಾಗಿ ಸುದ್ದಿ ಮಾಡಿದ್ದರು. ಉಮೇಶ್ ಕತ್ತಿಯವರ ತಂದೆ ವಿಶ್ವನಾಥ್ ಕತ್ತಿಯ ಅಕಾಲಿಕ ನಿಧನದಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿತ್ತು, 1985ರಲ್ಲಿ ಉಮೇಶ್​ ಕತ್ತಿಯರವು, ಜನತಾ ಪಕ್ಷದಿಂದ ಶಾಸಕರಾಗಿ ವಿಧಾನಸಭಾ ಮೆಟ್ಟಿಲನ್ನು ಮೊದಲ ಬಾರಿಗೆ ಹತ್ತಿದರು.

ಅಂದಿನಿಂದ ಇಲ್ಲಿಯವರೆಗೆ 2004ರಲ್ಲಿ ಹೊರತಾಗಿ ಇನ್ಯಾವುದೇ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನೇ ಕಂಡಿಲ್ಲ. ಹೀಗಾಗಿ ದಾಖಲೆಯ 8 ಬಾರಿ ಶಾಸಕರಾಗಿದ್ದ ಹೆಮ್ಮೆ ಅವರದ್ದು.

ಜನತಾ ಪಕ್ಷದಿಂದ ರಾಜಕೀಯ ಆರಂಭಿಸಿದ್ದ ಉಮೇಶ್ ಕತ್ತಿ, ಭಾರತೀಯ ಜನತಾ ಪಕ್ಷದ ಮೂಲಕ ತಮ್ಮ ರಾಜಕೀಯ ಕೊನೆಗೊಳಿಸಿದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. 1989ರಲ್ಲಿ ಜನತಾದಳದಿಂದ ಜಯಭೇರಿ ಬಾರಿಸಿದ್ದರು.

ಮುಂದಿನ ಚುನಾವಣೆ ಅಂದರೆ 1994ರಲ್ಲೂ ಉಮೇಶ್​ ಕತ್ತಿ, ಜನತಾದಳದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿ, ಎಚ್​ಡಿ ದೇವೇಗೌಡರ ಸಚಿವ ಸಂಪುಟದಲ್ಲಿ ಸಕ್ಕರೆ ಸಚಿವರಾಗಿ ಕೆಲಸ ಮಾಡಿದರು.

ನಂತರ ಜೆಎಚ್​ ಪಟೇಲ್ ಸರ್ಕಾರದಲ್ಲೂ ಪ್ರಭಾವಿ ಲೋಕೋಪಯೋಗಿ ಖಾತೆಯನ್ನು ನಿಭಾಯಿಸಿದರು. 1999ರ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡರಿಂದ ದೂರ ಸರಿದ ಉಮೇಶ್ ಕತ್ತಿ, ಜೆಡಿಯುನೊಂದಿಗೆ ಗುರುತಿಸಿಕೊಂಡು, ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದರು.

ಆದರೆ ನಂತರದ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ ಚಿಹ್ನೆಯಲ್ಲಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರು. ಆ ಚುನಾವಣೆಯಲ್ಲಿ ಕತ್ತಿ ಮೊದಲ ಸೋಲಿನ ರುಚಿ ಕಂಡರು, ಇದು ಅವರ ಕೊನೆಯ ಸೋಲು ಆಗಿತ್ತು.

ನಂತರ 2008ರಲ್ಲಿ ಮತ್ತೆ ಜೆಡಿಎಸ್​ಗೆ ಬಂದು ಹುಕ್ಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಆದರೆ ಚುನಾವಣೆ ಬಳಿಕ ನಡೆದ ಆಪರೇಷನ್ ಕಮಲದ ಭಾಗವಾಗಿ ಕತ್ತಿ ಬಿಜೆಪಿ ಸೇರಿದರು.

ನಂತರ ನಡೆದ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಗೆಲುವು ಸಾಧಿಸಿ, ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಬಂಧೀಖಾನೆ, ಕೃಷಿ ಸಚಿವರಾಗಿ ಕೆಲಸ ಮಾಡಿದರು.

ನಂತರದ 2013-2018ರ ವಿಧಾನಸಭಾ ಚುನಾವಣೆಯಲ್ಲಿಯೂ ಉಮೇಶ್ ಕತ್ತಿ ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ ನಿರಾಯಾಸವಾಗಿ ಗೆದ್ದುಬಂದರು. ನಂತರ ಇತ್ತೀಚಿನ ಯಡಿಯೂರಪ್ಪ ಸರ್ಕಾರದಲ್ಲಿಯೂ ಉಮೇಶ್ ಕತ್ತಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಈಗ ಹಾಲಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಹಾಗೂ ಅರಣ್ಯ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಪ್ರತ್ಯೇಕ ರಾಜ್ಯದ ಕನಸು ಕಂಡಿದ್ದ ಕತ್ತಿ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್ ಕತ್ತಿ ಸ್ಪಷ್ಟ ನಿಲುವು ಹೊಂದಿದ್ದರು, ಪಕ್ಷದ ಆದೇಶ ಹಾಗೂ ನಿಲುವಿನ ವಿರುದ್ಧವಾಗಿ ಆಗಾಗ ಧ್ವನಿ ಎತ್ತುತ್ತಲೇ ಇದ್ದರು. ಭವಿಷ್ಯದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ, ಆ ರಾಜ್ಯಕ್ಕೆ ನಾನೇ ಮೊದಲ ಮುಖ್ಯಮಂತ್ರಿಯಾಗುತ್ತೇನೆ ಎಂದು ಆಗಾಗ ಮಾಧ್ಯಮದೆದುರು ಹೇಳಿಕೆ ನೀಡುತ್ತಿದ್ದರು, ಇದಲ್ಲದೇ ಅಖಂಡ ಕರ್ನಾಟಕಕ್ಕೂ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡು್ತತಿದ್ದರು.

Published On - 12:12 am, Wed, 7 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?