ಬೆಂಗಳೂರು, ಜನವರಿ 03: ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ (encroachment) ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರ ಡಿಸಿಎಫ್ ರವೀಂದ್ರಕುಮಾರ್, ಎಸಿಎಫ್ ಸುರೇಶ್ ಆರ್ಎಫ್ಒ ಗೋವಿಂದರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಅರಣ್ಯ ಇಲಾಖೆಯ 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಒತ್ತುವರಿ ತೆರವು ಮಾಡಲಾಗಿದೆ.
ಇದನ್ನೂ ಓದಿ: ಹೊಸಕೋಟೆಯಲ್ಲಿ ಬೆಳ್ಳಂ ಬೆಳಿಗ್ಗೆ ಜೆಸಿಬಿ ಘರ್ಜನೆ; ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು
ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆ ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎನ್ನುವವರು ಒತ್ತುವರಿ ಮಾಡಿಕೊಂಡು ಈ ಭೂಮಿಯನ್ನು ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅರಣ್ಯ ಭೂಮಿಯನ್ನು ಯಾರಿಗೂ ಮಂಜೂರಾತಿ ಮಾಡಲ್ಲ ಎಂದು ಅರಣ್ಯ ಇಲಾಖೆ ತಿರಸ್ಕಾರ ಮಾಡಿತ್ತು.
ಇಂದು ಬೆಂಗಳೂರು ನಗರ ಡಿಸಿಎಫ್ ರವೀಂದ್ರಕುಮಾರ್, ಎಸಿಎಫ್ ಸುರೇಶ್ ಮತ್ತು ಆರ್‌ಎಫ್ ಗೋವಿಂದರಾಜು ಇವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿ ಶೆಡ್‌ಗಳನ್ನು ನೆಲಸಮ ಮಾಡಿ ಅರಣ್ಯ ಭೂಮಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್ಎಫ್ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು
ಈ ಅರಣ್ಯ ಪ್ರದೇಶದಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ಬೆಳೆಯಲಾಗಿತ್ತು. ಇನ್ನು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಧುಸೂದನಾನಂದ ಸ್ವಾಮಿ ಎಂಬುವವರ ವಿರುದ್ಧ ಈಗಾಗಲೇ ಐದು ಪ್ರಕರಣಗಳು ದಾಖಲಾಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.