Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಾಚಾರ: ನಾಲ್ವರು ಅಪರಿಚಿತರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲು

ಆರೋಪಿಗಳು ಹಾಗೂ ಬಾಲಕಿ ಕಳೆದ ಎರಡು ವರ್ಷಗಳಿಂದ ಪರಿಚಿತರು ಎನ್ನಲಾಗುತ್ತಿದೆ. ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ನಾಲ್ವರು ಅಪರಿಚಿತರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 08, 2022 | 2:46 PM

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ (rape) ವಾಗಿದೆ ಎಂದು ನಾಲ್ವರು ಅಪರಿಚಿತರ ವಿರುದ್ಧ ಬೆಂಗಳೂರಿನ ಬ್ಯಾಟರಾಯನಪುರ ಠಾಣೆಗೆ ಪೋಷಕರಿಂದ ದೂರು ನೀಡಲಾಗಿದೆ. ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಹಾಗೂ ಬಾಲಕಿ ಕಳೆದ ಎರಡು ವರ್ಷಗಳಿಂದ ಪರಿಚಿತರು ಎನ್ನಲಾಗುತ್ತಿದೆ. ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯಾಚರಣೆ ಆರಂಭವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒನ್ ಸೈಡ್ ಪ್ರೀತಿಯ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ತಾನು  ಪ್ರೀತಿಸುತ್ತಿದ್ದ ಯುವತಿಯ ಪ್ರಿಯಕರನನ್ನು ಹಲ್ಲೆ ಮಾಡಲು ಹೋಗಿ ರಸ್ತೆಯಲ್ಲಿ ಸಿಕ್ಕ ಅಪರಿಚಿತನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಮಾಗಡಿರೋಡ್​ನ ಬಾರ್ ಬಳಿ ಮಂಜೇಶ್ ಹಾಗೂ ಆತನ ಗ್ಯಾಂಗ್ ಹುಚ್ಚಾಟಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಆಸ್ಪತ್ರೆ ಸೇರುವಂತಾಗಿದೆ. ನಡುರಸ್ತೆಯಲ್ಲಿ ಭೀಕರವಾಗಿ ಹಲ್ಲೆ ನಡೆದಿದ್ದು ಸಿಸಿಟಿವಿಯಲ್ಲಿ ಘಟನೆ ದೃಶ್ಯ ಸೆರೆಯಾಗಿದೆ.

ಹಲ್ಲೆ ಮಾಡಿದ ಮಂಜೇಶ್ ಗೆ ಯುವತಿಯೋರ್ವಳ ಮೇಲೆ ಪ್ರೀತಿಯಾಗಿತ್ತು. ಆದ್ರೆ ಆ ಯುವತಿಗೆ ನಿತೀನ್ ಎಂಬಾತನ ಮೇಲೆ ಪ್ರೀತಿಯಾಗಿತ್ತು. ಹೀಗಾಗಿ ತಾನು ಇಷ್ಟ ಪಟ್ಟ ಯುವತಿಯ ಪ್ರಿಯಕರನ ಮೇಲೆ ಕೋಪಗೊಂಡಿದ್ದ ಮಂಜೇಶ್, ಆತನನ್ನು ಮಾತನಾಡಿಸುವ ನೆಪದಲ್ಲಿ ಕರೆದು ಹಲ್ಲೆ ಮಾಡಲು ತಂತ್ರ ಮಾಡಿದ್ದ. ಈ ವೇಳೆ ನಿತಿನ್ ತನ್ನ ಸಹೋದರನ ಜೊತೆ ಬರೋದಾಗಿ ಹೇಳಿದ್ದ. ಈ ವೇಳೆ ಮಂಜೇಶ್ ಅಂಡ್ ಗ್ಯಾಂಗ್ ನಿತಿನ್ ಎಂದು ಭಾವಿಸಿ ಹಲ್ಲೆ ನಡೆಸಿದ್ದಾರೆ. ಸದ್ಯ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಕೊಟಗಾ ಗ್ರಾಮದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಚಂದನಕೇರಾ ಗ್ರಾಮದ ಮೋಹನ್ (20) ಕೊಲೆಯಾದ ಯುವಕ. ಕುಡಿದ ಮತ್ತಿನಲ್ಲಿ ಸ್ನೇಹಿತರಿಂದಲೇ ಮೋಹನ್ ಬರ್ಬರ ಹತ್ಯೆ ಮಾಡಲಾಗಿದೆ. ಆನಂದ ಮತ್ತು ಭೀಮಾ ಎಂಬುವರಿಂದ ಮೋಹನ್ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ಮೋಹನ್‌ನ ಆರೋಪಿಗಳು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ದೇವನಹಳ್ಳಿ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆರತಿ (34) ಅನುಮಾನಾಸ್ಪದವಾಗಿ ಸಾವನ್ನಪಿದ ಗೃಹಿಣಿ. ಮಹಿಳೆಯ ಪೋಷಕರಿಂದ ಗಂಡನಿಂದಲೆ ಕೊಲೆ ಆರೋಪ ಮಾಡಲಾಗಿದೆ. ಕಳೆದ 15 ವರ್ಷಗಳಿಂದೆ ಚೇತನ್ ಎಂಬಾತನ ಜೊತೆ ಮದುವೆಯಾಗಿದ್ದ ಆರತಿ, ಅಂತರ್ ಜಾತಿ ವಿವಾಹ ಆಗಿ ಪ್ರತ್ಯೇಕವಾಗಿ ವಾಸವಿದ್ದರು. ಸಿಂಗನಾಯಕನಹಳ್ಳಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗಂಡ ಚೇತನ್ ಆರತಿಯನ್ನ ಕೊಲೆ ಮಾಡಿ‌ ನೇಣು ಬಿಗಿದಿರೋ ಆರೋಪ ಮಾಡಿದ್ದಾರೆ. ದಂಪತಿಗಳಿಗೆ 11 ವರ್ಷದ ಗಂಡು ಮಗುವಿದೆ. ಕಾಲುಗಳು ಮಂಚದ ಮೇಲೆ ಬಿಟ್ಟು ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹವಿದೆ. ಆರತಿ‌ ಮನೆಯವರು ಹಣ, ವರದಕ್ಷಿಣೆ ನೀಡಿಲ್ಲ ಅಂತಾ ಗಂಡನೇ ಕೊಲೆ ಮಾಡಿರೋ ಆರೋಪಿಸಿದ್ದಾರೆ. ರಾಜಾನುಕುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮುರುಘಾಮಠದಲ್ಲಿ ಕಳ್ಳತನ

ಚಿತ್ರದುರ್ಗದ ಮುರುಘಾಮಠದಲ್ಲಿ ಕಳ್ಳತನ ನಡೆದಿದೆ. ಮಠದ ರಾಜಾಂಗಣದ ಗೋಡೆಗೆ ಹಾಕಿದ್ದ 47 ಫೋಟೋಗಳನ್ನು ಕಳವು ಮಾಡಲಾಗಿದೆ. ವಿವಿಧ ಗಣ್ಯರ ಜೊತೆ ಮುರುಘಾಶ್ರೀ ಇರುವ ಫೋಟೋಗಳು, ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ ಜೊತೆಗಿರುವ ಫೋಟೋ, ಹಲವು ಸಿಎಂಗಳ ಜೊತೆ ಮುರುಘಾಶ್ರೀ ತೆಗೆಸಿಕೊಂಡಿದ್ದ ಫೋಟೋ, ಮಠದ ಗೋಡೆಗೆ ಹಾಕಿದ್ದ ಇತರೆ ಫೋಟೋಗಳು ಕಳ್ಳತನವಾಗಿವೆ. ಅಕ್ಟೋಬರ್ 5ರ ಮಧ್ಯರಾತ್ರಿ ಫೋಟೋ ಕದ್ದೊಯ್ದ ಇಬ್ಬರು ವ್ಯಕ್ತಿಗಳ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:44 pm, Sat, 8 October 22

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್