SCST ಮೀಸಲು ಮೊತ್ತ ದುರುಪಯೋಗ, ಹಣ ವಾಪಸ್ ಕೊಡುವವರೆಗೂ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ

ಎಸ್‍ಸಿ, ಎಸ್‍ಟಿ ಮೀಸಲು ಮೊತ್ತದಿಂದ 11,144 ಕೋಟಿ ರೂ. ದುರುಪಯೋಗ ವಿರುದ್ಧ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಪ್ರಾರಂಭಿಸಿ. ಹಣ ವಾಪಸ್ ಕೊಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಎಚ್ಚರಿಕೆ ನೀಡಿದ್ದಾರೆ. ಎಸ್‍ಸಿ ಎಸ್‍ಟಿ ಜನಾಂಗದ ಶಿಕ್ಷಣ, ಆರೋಗ್ಯ, ಕಲ್ಯಾಣಕ್ಕಾಗಿ ಈ ಹಣವನ್ನು ಬಳಸಬೇಕಿದೆ. ಸರಕಾರದ ಮನಸ್ಸಿಗೆ ಬಂದಂತೆ ಬಳಸಲು ಅಲ್ಲ ಎಂದು ಅವರು ಆಕ್ಷೇಪಿಸಿದರು.

SCST ಮೀಸಲು ಮೊತ್ತ ದುರುಪಯೋಗ, ಹಣ ವಾಪಸ್ ಕೊಡುವವರೆಗೂ ಹೋರಾಟ: ಗೋವಿಂದ ಕಾರಜೋಳ ಎಚ್ಚರಿಕೆ
ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 11, 2023 | 4:29 PM

ಬೆಂಗಳೂರು, ಸೆಪ್ಟೆಂಬರ್​ 11: ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಆಡಳಿತ ಮಾಡುವ ಪ್ರತಿಜ್ಞೆ ಸ್ವೀಕರಿಸುವ ಮನಸ್ಸು ನಮ್ಮದಾಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ (Govind Karjol) ಅವರು ಕರೆ ನೀಡಿದರು. ‘ಸಿಟಿಜನ್ ಫಾರ್ ಸೋಶಿಯಲ್ ಜಸ್ಟೀಸ್ – ಬೆಂಗಳೂರು’ ಇವರ ನೇತೃತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಇಂದು ನಡೆದ “ಎಸ್‍ಸಿ, ಎಸ್‍ಟಿ ಮೀಸಲು ಹಣ ಮುಳುಗಿಸುತ್ತಿರುವ ರಾಜ್ಯ ಸರ್ಕಾರ” ಎಂಬ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿ ಮೀಸಲು ಮೊತ್ತದಿಂದ 11,144 ಕೋಟಿ ರೂ. ದುರುಪಯೋಗ ವಿರುದ್ಧ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಪ್ರಾರಂಭಿಸಿ ಎಂದು ಮನವಿ ಮಾಡಿದರು. ಹಣ ವಾಪಸ್ ಕೊಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಡೋಂಗಿ ಮಾತು, ಸುಳ್ಳು ಭರವಸೆ ಮೂಲಕ ಮೋಸ ಮಾಡಲು ಸಿದ್ದರಾಮಯ್ಯರವರು ಮುಂದಾಗಿದ್ದಾರೆ. ಎಸ್‍ಸಿ ಎಸ್‍ಟಿ ಜನಾಂಗದ ಶಿಕ್ಷಣ, ಆರೋಗ್ಯ, ಕಲ್ಯಾಣಕ್ಕಾಗಿ ಈ ಹಣವನ್ನು ಬಳಸಬೇಕಿದೆ. ಸರಕಾರದ ಮನಸ್ಸಿಗೆ ಬಂದಂತೆ ಬಳಸಲು ಅಲ್ಲ ಎಂದು ಅವರು ಆಕ್ಷೇಪಿಸಿದರು. ಈ ಜನಾಂಗದಲ್ಲಿ ಹುಟ್ಟಿದ ಮಲ್ಲಿಕಾರ್ಜುನ ಖರ್ಗೆಯವರು ಇದನ್ನು ಸಹಿಸಿಕೊಂಡದ್ದು ಹೇಗೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಮತಬ್ಯಾಂಕ್ ರಾಜಕಾರಣಕ್ಕೆ ಅವರೂ ಜೋತುಬಿದ್ದರೇ ಎಂದು ಕೇಳಿದರು. ಬಿಜೆಪಿ ಸರಕಾರದ ಸಾಧನೆಗಳನ್ನು ಅವರು ವಿವರಿಸಿದರು. ಎಸ್‍ಸಿ, ಎಸ್‍ಟಿ ಜನಾಂಗವು ಗೌರವಯುತವಾಗಿ ಬಾಳಲು ನಾವು ಶ್ರಮಿಸಿದ್ದೇವೆ. ಇವರಂತೆ ಸುಳ್ಳು ಹೇಳಿಲ್ಲ ಎಂದು ಟೀಕಿಸಿದರು. ನೀರಾವರಿ, ಪಿಡಬ್ಲ್ಯುಡಿ ಇಲಾಖೆ ಸಚಿವನಾದಾಗ ಮೀಸಲು ಹಣವನ್ನು ಹಾಸ್ಟೆಲ್‍ಗಳ ನಿರ್ಮಾಣಕ್ಕೆ ಬಳಸಿದ್ದೇವೆ. ವಸತಿಯುತ ಶಾಲೆ ನಿರ್ಮಾಣಕ್ಕೆ ನೀರಾವರಿ ಇಲಾಖೆಯಿಂದ 500 ಕೋಟಿ ನೀಡಿದ್ದೇನೆ.

ನೀರಾವರಿ ಇಲಾಖೆಯಲ್ಲಿ ಗಂಗಾ ಕಲ್ಯಾಣ ಯೋಜನೆ ಪ್ರಾರಂಭವಾದುದೇ ನಮ್ಮ ಸರಕಾರ ಇದ್ದಾಗ ಎಂದು ವಿವರಿಸಿದರು. ಎಸ್‍ಸಿ,ಎಸ್‍ಟಿ ಯುವಕರನೇಕರು ಇಂಜಿನಿಯರ್, ಪದವೀಧರ ಆಗಿದ್ದಾರೆ. ಅವರು ಕೈಗಾರಿಕೆ ಪ್ರಾರಂಭಿಸಲು ಶೇ 50 ಸಬ್ಸಿಡಿಯಲ್ಲಿ ಕೆಐಎಡಿಬಿಯಿಂದ ನಿವೇಶನ ಕೊಡಲಾಗುತ್ತಿತ್ತು. ಅದನ್ನು ಶೇ 75ಕ್ಕೆ ಏರಿಸಲಾಗಿದೆ. ಇದರಿಂದ ಸಾವಿರಾರು ಜನರು ನಿವೇಶನ ಪಡೆಯುವಂತಾಗಿದೆ. ಇದು ನಮ್ಮ ಸಾಧನೆ ಸಿದ್ದರಾಮಯ್ಯನವರೇ ಎಂದು ಗಮನ ಸೆಳೆದರು.

60 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಎಸ್‍ಸಿ, ಎಸ್‍ಟಿ ಸಮಾಜಕ್ಕೆ ನಿರಂತರ ಮೋಸ ಮಾಡುತ್ತಲೇ ಬಂತು. ಬಡತನ ನಿರ್ಮೂಲನೆ ಮಾಡುವುದಾಗಿ ಹೇಳುತ್ತಲೇ ಬಂದ ಇಂದಿರಾ ಗಾಂಧಿಯವರು ಬಸವರಿಗೆ ಮೋಸ ಮಾಡುತ್ತ ಬಂದರು ಎಂದರಲ್ಲದೆ, ಈ ಚುನಾವಣೆಯಲ್ಲಿ ನಾವು ಸೋತರೆ ಆಕಾಶ ಕೆಳಗೆ ಬಿದ್ದಿಲ್ಲ. ಪ್ರಳಯ ಆಗಿಲ್ಲ. ನಮಗೆ ಮುಂದೆ ಅವಕಾಶ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಕ್ಕಿಗೆ ಗಂಟೆ ಕಟ್ಟುವ ಕೆಲಸ ನಾವು ಮಾಡಬೇಕಿದೆ: ಕೋಟ ಶ್ರೀನಿವಾಸ ಪೂಜಾರಿ

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮೀಸಲಿಟ್ಟ ಹಣದ ದುರ್ಬಳಕೆ ಆಗಿದೆ. ಸಂಬಂಧಿತರ ಕಿವಿಹಿಂಡಿ ಅದನ್ನು ಬಡವರಿಗೆ ಕೊಡಿಸುವುದು ಹೇಗೆ ಎಂಬ ಚರ್ಚೆ ನಮ್ಮದು ಎಂದರು. ಬೆಕ್ಕಿಗೆ ಗಂಟೆ ಕಟ್ಟುವ ಕೆಲಸವನ್ನು ನಾವು ಮುಂದಾಗಬೇಕಿದೆ ಎಂದು ತಿಳಿಸಿದರು. ಆ ನೆಲೆಯಲ್ಲಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮುಂದುವರೆಸಬೇಕಿದೆ. ಜನರ ಪರವಾಗಿ ಇರುವವರಾದ ನಾವು ದರ ವಿರುದ್ಧ ಹೋರಾಟಕ್ಕೆ ಧುಮುಕಲೇ ಬೇಕಿದೆ ಎಂದು ಅಭಿಪ್ರಾಯಪಟ್ಟರು. ಸುಳ್ಳು ಭರವಸೆ, ಗ್ಯಾರಂಟಿಗಳಿಂದ ಈ ಸರಕಾರ ರಚಿಸಲಾಗಿದೆ ಎಂದು ಅವರು ಟೀಕಿಸಿದರು.

ನ್ಯಾಯಕ್ಕಾಗಿ ಹೋರಾಟ ಮಾಡಿ ಹಕ್ಕುಗಳನ್ನು ಪಡೆಯೋಣ: ಬಿ. ಶ್ರೀರಾಮುಲು

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾತನಾಡಿ, ಪರಿಶಿಷ್ಟ ಜಾತಿ- ವರ್ಗಕ್ಕೆ ಮೀಸಲಿಟ್ಟ ಹಣದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಬೇರೆ ಬೇರೆ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಡಾ.ಬಾಬಾ ಸಾಹೇಬ ಅಂಬೇಡ್ಕರರ ವಿಚಾರಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ನಾವು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಒಳ್ಳೆಯ ಕೆಲಸಗಳನ್ನು ಮರೆತುಬಿಡುತ್ತೇವೆ. ಬಿಜೆಪಿ ಸರಕಾರ ಮಾಡಿದ ಒಳ್ಳೆಯ ವಿಚಾರ ಮರೆತುಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸ್ಟಾಲಿನ್ ವಿರುದ್ಧ ಟೀಕೆ ಮಾಡಲಾಗದೆ ನಮ್ಮ ವಿರುದ್ಧ ಟೀಕೆ; ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ವಾಗ್ದಾಳಿ

ಮೀಸಲಾತಿ ವಿಚಾರದಲ್ಲಿ ಸಾಮಾಜಿಕ ನ್ಯಾಯವನ್ನು ಬಿಜೆಪಿ ಸರಕಾರ ನೀಡಿತ್ತು ಎಂದು ನೆನಪಿಸಿದರು. ಜಾತಿ ಪ್ರಮಾಣಪತ್ರದ ವಿಚಾರದಲ್ಲೂ ಇವತ್ತು ಸಾಕಷ್ಟು ಗೊಂದಲಗಳು ನಡೆದಿವೆ. ನ್ಯಾಯಕ್ಕಾಗಿ ಹೋರಾಟ ಮಾಡಿ ಹಕ್ಕುಗಳನ್ನು ಪಡೆಯೋಣ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಗೋಸುಂಬೆತನವನ್ನು ಜನರಿಗೆ ತಿಳಿಸಬೇಕಾಗಿದೆ: ಎನ್. ಮಹೇಶ್

ಮಾಜಿ ಶಾಸಕ ಎನ್. ಮಹೇಶ್ ಅವರು ಮಾತನಾಡಿ, ಶೇ 80ರಷ್ಟು ಎಸ್‍ಸಿ, ಎಸ್‍ಟಿಗಳು ಬಿಪಿಎಲ್ ರೇಖೆ ಕೆಳಗಿದ್ದಾರೆ. ತಿಂಗಳ ಆದಾಯ ಗಳಿಸುವ ಆಸ್ತಿ ನಮ್ಮಲ್ಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ತಿಳಿಸಿದರು. ಸ್ಪೆಷಲ್ ಕಾಂಪೋನೆಂಟ್ ಪ್ಲಾನನ್ನು ಗ್ಯಾರಂಟಿಗಳಿಗೆ ಬಳಸುವುದು ಮೋಸ, ದ್ರೋಹ ಮತ್ತು ಅನ್ಯಾಯ ಎಂದು ಅವರು ಆಕ್ಷೇಪಿಸಿದರು.

ಉದ್ಯೋಗ ಕೊಡುವುದು, ಉತ್ತಮ ಶಿಕ್ಷಣ, ಭೂಮಿ ಕೊಡುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿಲ್ಲ. ಇದನ್ನು ಜನರ ಬಳಿಗೆ ಒಯ್ಯುವುದು ಅನಿವಾರ್ಯ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷದ ಗೋಸುಂಬೆತನವನ್ನು ಜನರಿಗೆ ತಿಳಿಸಬೇಕಾಗಿದೆ ಎಂದು ನುಡಿದರು. ಕಾಂಗ್ರೆಸ್ ಮತಬ್ಯಾಂಕಿಗೆ ಇದನ್ನು ತಿಳಿಹೇಳಬೇಕಿದೆ ಎಂದು ತಿಳಿಸಿದರು.

ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರಾಸ್ತಾವಿಕ ಮಾತನಾಡಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕೋಲಾರದ ಸಂಸದ ಮುನಿಸ್ವಾಮಿ ಮಾಜಿ ಶಾಸಕ ಪಿ.ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಶಂಕರಪ್ಪ, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು ಈ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:28 pm, Mon, 11 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ