ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಧ್ವಂಸ, ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರಿನಲ್ಲಿ ಗಣೇಶ ಮೂರ್ತಿಯನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಗಣೇಶ ಮೂರ್ತಿಗೆ ಸುತ್ತಿಗೆಯಿಂದ ಹೊಡೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಗಣೇಶ ಮೂರ್ತಿ( ganesh idol) ಧ್ವಂಸಗೊಳಿಸಿದ ಘಟನೆ ಭಾನುವಾರ ತಡರಾತ್ರಿ ಬೆಂಗಳೂರಿನ(Bengaluru) ವರ್ತೂರು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಜೂರು ಹೊಸಹಳ್ಳಿ ಮುಖ್ಯರಸ್ತೆಯಲ್ಲಿ ಇರುವ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಧ್ವಂಸ ಮಾಡಿದ್ದಾರೆ. ಸುತ್ತಿಗೆಯಿಂದ ಗಣೇಶ ಮೂರ್ತಿಯ ಕುತ್ತಿಗೆ ಭಾಗಕ್ಕೆ ಹೊಡೆದು ಧ್ವಂಸ ಮಾಡಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಸದ್ಯ  ಗಣೇಶ ಮೂರ್ತಿಯನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿದೆ.  ಈ ಬಗ್ಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಭಾನುವಾರ ತಡರಾತ್ರಿ ಹನ್ನೆರಡು ಗಂಟೆಗೆ ಕಿಡಿಗೇಡಿಯೊಬ್ಬ ಗುಂಜೂರು ಹೊಸಹಳ್ಳಿ ಮುಖ್ಯ ರಸ್ತೆಯಲ್ಲಿರುವ ಗಣೇಶ ವಿಗ್ರಹಕ್ಕೆ ಸುತ್ತಿಗೆಯಿಂದ ಹೊಡೆದು ಹಾನಿಗೊಳಿಸಿದ್ದಾನೆ. 9 ಬಾರಿ ಸುತ್ತಿಗೆಯಿಂದ ಹೊಡೆದು ಮೂರ್ತಿಯ ಮುಖವನ್ನು ವಿರೂಪಗಳಿಸಿದ್ದಾನೆ. ಇದೀಗ ಸಿಸಿ ಟಿವಿಯ ವಿಡಿಯೋ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರವಾಗಿದೆ.

ಗಣೇಶ ಮೂರ್ತಿ ಧ್ವಂಸಗೊಳಿಸಿರುವ ಸಿಸಿ ಟಿವಿ ದೃಶ್ಯ

 

 

 

Published On - 1:57 pm, Mon, 29 May 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us