ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯ ಮನೆಯೊಂದರಲ್ಲಿ ಭಯಾನಕ ಘಟನೆ ನಡೆದಿದೆ. ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಘಟನೆಯಲ್ಲಿ ವೃದ್ಧೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಮನೆಗೆ ನುಗ್ಗಿ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಎಗರಿಸಿದ ಖದೀಮ
ಘಟನೆ ನಡೆದ ಸ್ಥಳ
Follow us
| Edited By: Ayesha Banu

Updated on: Nov 20, 2023 | 12:55 PM

ಆನೇಕಲ್, ನ.20: ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿದ ಕಿರಾತಕ ವೃದ್ದೆಯ ಕತ್ತುಕೊಯ್ದು ಚಿನ್ನದ ಸರ ಕದ್ದೊಯ್ದ (Gold Chain) ಭಯಾನಕ ಘಟನೆ ಆನೇಕಲ್​ನಲ್ಲಿ (Anekal) ನಡೆದಿದೆ. ವೃದ್ದೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಿಂದ ಇಡೀ ಆನೇಕಲ್​ನಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ರಸ್ತೆಯಲ್ಲಿ ಘಟನೆ ನಡೆದಿದೆ.

ವೃದ್ದೆ ಅಕ್ಕಯ್ಯಮ್ಮ ಹಾಗೂ ಪತಿ ನಾರಾಯಾಣಾಚಾರಿ ಇಬ್ಬರೂ ಕಾಲು, ಕೈ ಉಳುಕಿದೆ ಮಂತ್ರ ಹಾಕುತ್ತಿದ್ದರು. ಹೀಗಾಗಿ ಮಂತ್ರ ಹಾಕಿಸಿಕೊಳ್ಳುವ ನೆಪದಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಅಕ್ಕಯ್ಯಮ್ಮ ಎಂಬ ವೃದ್ದೆಯ ಕತ್ತು ಕೊಯ್ದು ಚಿನ್ನದ ಸರ ಎಗರಿಸಿದ್ದಾನೆ.

ಕಳೆದ ಶನಿವಾರ ವೃದ್ದರ ಮನೆಗೆ ಉಳುಕು ಮಂತ್ರ ಹಾಕಿ ಎಂದು ಬಂದಿದ್ದ ಕಳ್ಳ ಕಾಲು ಉಳುಕಿದೆ ಎಂದು ಮಂತ್ರ ಹಾಕಿಸಿಕೊಂಡು 50 ರೂಪಾಯಿ ಕೊಟ್ಟು ಹೋಗಿದ್ದ. ಮತ್ತೆ ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಮನೆಗೆ ಬಂದು ನೀವು ಮಂತ್ರ ಹಾಕಿದ್ದಕ್ಕೆ ನಮ್ಮ ಮಗು ಸಾವಿಗೀಡಾಗಿದೆ ಎಂದು ಬೆದರಿಸಿದ್ದ. ಏಕಾಏಕಿ ಮನೆಯ ಬಾಗಿಲು ಹಾಕಿ ಮನೆಯಲ್ಲಿನ ಒಡವೆ ಕೊಡಿ ಎಂದು ಬೆದರಿಕೆ ಹಾಕಿದ್ದ. ವೃದ್ದೆ ಸರ ನೀಡಲು ನಿರಾಕರಿಸುತ್ತಿದ್ದಂತೆ ಮನೆಯಲ್ಲಿದ್ದ ಚಾಕುವಿನಿಂದ ಕತ್ತು ಕೊಯ್ದು ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಕುಡಗೋಲಿನ ಸಮೇತವಾಗಿ ಹೊಂಚು ಹಾಕಿ ಬಂದಿದ್ದ ಕಳ್ಳ‌ ಸರ ಕದ್ದಿದ್ದು ಪತ್ನಿಯ ಮೇಲಿನ ಹಲ್ಲೆ ತಡೆಯಲು ಮುಂದಾದ ವೃದ್ಧನ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ವೃದ್ಧ ನಾರಾಯಣಾಚಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾರಾಯಣಾಚಾರಿ ಅವರು ಕೂಗಾಡಿಕೊಂಡಿದ್ದು ಚೀರಾಟ ಕೇಳಿ ಅಕ್ಕಪಕ್ಕದ ಮನೆಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧೆಯನ್ನು ಆನೇಕಲ್ ಪಟ್ಟಣದ ವಿಜಯ್ ನರ್ಸಿಂಗ್ ಹೋಂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು