Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ, ಬೆಚ್ಚಿಬಿದ್ದ ಮಕ್ಕಳು

ಕಾರಿಗೆ ಸೈಡ್ ಬಿಡಲಿಲ್ಲವೆಂದು ಕೋಪಗೊಂಡ ಕಾರು ಚಾಲಕ ಹಾಗೂ ಆತನ ಸ್ನೇಹಿತರು ಮಕ್ಕಳಿದ್ದ ಶಾಲಾ ಬಸ್​ಗೆ ಅಡ್ಡಗಟ್ಟಿ ಚಾಲಕನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಬಸ್​ನ ಕಿಟಕಿ ಗಾಜುಗಳನ್ನು ಹೊಡೆದು ರಂಪಾ ಮಾಡಿದ್ದಾರೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳಿಗೆ ಬಲೆ ಬೀಸಲಾಗಿದೆ.

ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ, ಬೆಚ್ಚಿಬಿದ್ದ ಮಕ್ಕಳು
ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ
Follow us
ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on:Sep 17, 2024 | 12:27 PM

ಬೆಂಗಳೂರು, ಸೆ.17: ಸಿಲಿಕಾನ್ ಸಿಟಿಯಲ್ಲಿ ಪ್ರತಿ ದಿನ ಒಂದಿಲ್ಲೊಂದು ರೋಡ್ ರೇಂಜ್ ಪ್ರಕರಣಗಳು (Road Rage Case) ವರದಿಯಾಗುತ್ತಿವೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಮಾರಗೊಂಡನಹಳ್ಳಿ ಬಳಿ ಶಾಲಾ ಮಕ್ಕಳಿದ್ದ ಬಸ್ (School Bus) ಚಾಲಕನನ್ನ ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಿನ್ನೆ ಸಂಜೆ 3.45ರ ಸುಮಾರಿಗೆ ಮಕ್ಕಳನ್ನ ಡ್ರಾಪ್ ಮಾಡಿಲು ಶಾಲೆಯಿಂದ ಹೊರಟಿದ್ದ ಶಾಲಾ ಬಸ್​ಗೆ ಸ್ಕಾರ್ಪಿಯೊ ಕಾರಿನಿಂದ ಅಡ್ಡಕಟ್ಟಿ ನಾಲ್ಕೈದು ಯುವಕರು ಬಸ್​ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಟಿರ್ಮಿಶ್​​ ಶಾಲೆಗೆ ಸೇರಿದ ಶಾಲಾ ಬಸ್ ಮೇಲೆ ಸೋಮವಾರ ಮಧ್ಯಾಹ್ನ ವ್ಯಕ್ತಿಗಳ ಗುಂಪು ದಾಳಿ ಮಾಡಿ ಚಾಲಕ ಜೇಮ್ಸ್ ಧೋನ್ ಎಂಬುವವನ ಮೇಲೆ ಹಲ್ಲೆ ನಡೆಸಲಾಗಿದೆ. ಇನ್ನು ಈ ಘಟನೆಗೆ ಕಾರಣ ಸೈಡ್ ಬಿಡದಿರುವುದು. ಕಿಡಿಗೇಡಿಗಳ ಕಾರಿಗೆ ಸೈಡ್​ ಕೊಡದಿದ್ದಕ್ಕೆ ಶಾಲಾ ಬಸ್ ಅಡ್ಡಹಾಕಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಡಬಲ್​ ಡೆಕ್ಕರ್​ ಫ್ಲೈ​ ಓವರ್ ಸುತ್ತಮುತ್ತಲಿನ ನಿವಾಸಿಗಳಿಗೆ ಟ್ರಾಫಿಕ್​ ಕಿರಿ ಕಿರಿ

ಕಿಡಿಗೇಡಿಗಳು ಚಾಲಕನ ಮೇಲೆ ಹಲ್ಲೆ ನಡೆಸಿದ್ದೇಕೆ?

ಶಾಲಾ ವಾಹನದ ಹಿಂದೆ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಈ ವೇಳೆ ದಾರಿ ಬಿಡುವಂತೆ ಕಾರು ಚಾಲಕ ಒಂದೇ ಸಮನೆ ಹಾರ್ನ್ ಮಾಡಿದ್ದ. ಆಗ ಶಾಲಾ ವಾಹನದ ಚಾಲಕ ದಾರಿ ಬಿಡದೆ ಬಸ್ ಚಲಾಯಿಸಿದ್ದಾನೆ. ಇದಕ್ಕೆ ಕೋಪಗೊಂಡ ಕಾರು ಚಾಲಕ ಶಾಲಾ ವಾಹನವನ್ನ ಅಡ್ಡಗಟ್ಟಿ ಚಾಲಕನನ್ನ ಕೆಳಗಿಳಿಸಿ ಹಲ್ಲೆ ನಡೆಸಿದ್ದಾನೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ನಾಲ್ಕೈದು ಮಂದಿ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಲೋಹದ ವಸ್ತುವನ್ನು ಬಳಸಿ ಬಸ್​ ಕಿಟಕಿಯನ್ನು ಒಡೆದು ಬಲವಂತವಾಗಿ ಬಸ್ಸಿನೊಳಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಶಾಲಾ ಬಸ್​ನಲ್ಲಿದ್ದ ಮಕ್ಕಳು ಹೆದರಿ ಕಿರುಚಾಡಿಕೊಂಡಿದ್ದಾರೆ. ಸದ್ಯ ಚಾಲಕ ಜೇಮ್ಸ್ ಧೋನ್ ಅವರು ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಅದೃಷ್ಟವಶಾತ್, ಘಟನೆಯಲ್ಲಿ ಮಕ್ಕಳಿಗೆ ಯಾವುದೇ ಹಾನಿಯಾಗಿಲ್ಲ, ಆದರೆ ಹಠಾತ್ ದಾಳಿಯಿಂದ ಮಕ್ಕಳು ಹೆದರಿದ್ದಾರೆ.

112ಕ್ಕೆ ಕರೆ ಮಾಡಲು ಪೊಲೀಸ್ ಆಯುಕ್ತರ ಸಲಹೆ

ಇನ್ನು ಘಟನೆ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ರೋಡ್ ರೇಜ್ ಕೇಸ್​ಗಳ ಬಗ್ಗೆ ಜನರು ಎಚ್ಚರವಹಿಸಬೇಕು ಎಂದರು. ಎಲ್ಲರೂ ಸಂಚಾರಿ ನಿಯಮಗಳನ್ನ ಫಾಲೋ ಮಾಡಬೇಕು. ಸಣ್ಣ ಪುಟ್ಟ ಮಾತುಕತೆ ಶುರುವಾದ್ರೂ ಎಚ್ಚರವಹಿಸಬೇಕು. ಬೇರೆಯವರಿಗೆ ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಒಂದು ವೇಳೆ ತೊಂದ್ರೆ ಆದರೆ 112ಕ್ಕೆ ಕರೆ ಮಾಡಬೇಕು. ಇತ್ತೀಚೆಗೆ ಆಗಿರೋ ಪ್ರಕರಣಗಳನ್ನ ಪತ್ತೆ ಮಾಡಲಾಗಿದೆ. ಒಂದಷ್ಟು ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:25 pm, Tue, 17 September 24

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ