Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದ ರವಿಯನ್ನು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರ
Follow us
|

Updated on:May 25, 2023 | 7:25 AM

ಬೆಂಗಳೂರು: ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ(Congress Worker Murder). ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿ ಎಸ್ಕೇಪ್ ಅಗಿದ್ದಾರೆ. CMH​ ಬಾರ್ ಬಳಿಯಿಂದ ರವಿಯನ್ನು ಅಟ್ಟಾಡಿಸಿಕೊಂಡು ಹಳ್ಳಿರುಚಿ ಹೊಟೇಲ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ(Murder).

ಏರಿಯಾದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಹರಿದು ದರ್ಪ

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ. ಬಳಿಕ ರವಿ ಮನೆ ಮುಂದೆ ಬಂದು ಕಾದು ಕುಳಿತಿದ್ದರು. ಮೇ 24ರಂದು ಕಾಂಗ್ರೆಸ್ ಮುಖಂಡ ಹಾಗೂ ಫೈನಾನ್ಷಿಯರ್ ಕೃಷ್ಣ ಮೂರ್ತಿ ಹುಟ್ಟುಹಬ್ಬ ಇತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ನೂರಾರು ಕಾರ್ಯಕರ್ತರು ಆಗಮಿಸಿದ್ದರು. ಇದೇ ಹುಟ್ಟುಹಬ್ಬಕ್ಕೆ ಹಾಜರಾಗಲು ರವಿ ಖುಷಿ ಖುಷಿಯಿಂದ ಮನೆಯಿಂದ ಆಚೆ ಬಂದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಕೊಚ್ಚಿ ಕೊಲೆ ಮಾಡಿ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ಇನ್ನು ಕುರಿ, ಮೇಕೆ ಸಾಕಾಣಿಕೆ ಮಾಡಿಕೊಂಡಿದ್ದ ರವಿ ಮೇಲೆ ಈ ಹಿಂದೆಯೂ ಕೂಡ ಹಲವು ಕೇಸ್ ಗಳಿವೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: BJP ಕಾರ್ಯಕರ್ತನ ಮೇಲೆ ಕೈ ಮುಖಂಡರಿಂದ ಹಲ್ಲೆ ಆರೋಪ: ಐಸಿಯುನಲ್ಲಿ ಚಿಕಿತ್ಸೆ</a

ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು: ಭಜರಂಗದಳ (Bajrang Dal) ಮತ್ತು ಬಿಜೆಪಿ (BJP) ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ದಾಳಿ ನಡೆಸಿದವರು ಕಾಂಗ್ರೆಸ್ (Congress) ಕಾರ್ಯಕರ್ತರು ಎಂಬ ಆರೋಪ ಕೇಳಿಬಂದಿದೆ. ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಈ ದಾಳಿ ನಡೆದಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ ಜಂಕ್ಷನ್​ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಯುವಕರ ಮೇಲೆ ತಂಡವೊಂದು ದಾಳಿ ನಡೆಸಿದೆ. ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್​​ಗೆ ಡಿಕ್ಕಿ ಹೊಡೆಸಿ ನಂತರ ತಲವಾರಿನಿಂದ ಹಲ್ಲೆ ನಡೆಸಿದೆ. ಮಹೇಂದ್ರ ಹಾಗೂ ಪ್ರಶಾಂತ್ ನಾಯ್ಕ್ ಅವರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Thu, 25 May 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ