ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ; ಕವನ ಬರೆದ ವಿದ್ಯಾರ್ಥಿಗಳು

| Updated By: Rakesh Nayak Manchi

Updated on: Jan 30, 2024 | 9:49 AM

ಮೂಲಭೂತ ಸೌಕರ್ಯ ನೀಡುತ್ತಿಲ್ಲ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಗ್ರಂಥಾಲಯದಲ್ಲಿ ಉತ್ತಮ ಪುಸ್ತಕಗಳಿಲ್ಲ, ಉತ್ತಮ ಹಾಸ್ಟೆಲ್ ವ್ಯವಸ್ಥೆ ಇಲ್ಲ, ಗುಣಮಟ್ಟದ ಶೌಚಾಲಯ ಸೇರಿದಂತೆ ಅನೇಕ ಸೌಕರ್ಯಗಳಿಲ್ಲ ಎಂದು ಆರೋಪ ಮಾಡಿದ್ದರು. ಇದೀಗ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು ಕವನದ ಮೂಲಕ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳಗಳು ಪತ್ತೆ; ಕವನ ಬರೆದ ವಿದ್ಯಾರ್ಥಿಗಳು
ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಮತ್ತೆ ಹುಳ ಪತ್ತೆ; ಕವನ ಬರೆದ ವಿದ್ಯಾರ್ಥಿಗಳು
Follow us on

ಬೆಂಗಳೂರು, ಜ.30: ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಹಾಸ್ಟೆಲ್ ಊಟದಲ್ಲಿ ಹುಳ ಪತ್ತೆಯಾಗಿದೆ. ಈ ಬಾರಿ ವಿದ್ಯಾರ್ಥಿಗಳು “ಕಟ್ಟುಪಾಡು ಬದಲಾಗದು” ಎಂಬ ಶೀರ್ಷಿಕೆಯಡಿ ಕವನದ ಮೂಲಕ ಹಾಸ್ಟೆಲ್ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದು, ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಕವನದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಸತಿ ಶಾಲೆ ಪಕ್ಕದಲ್ಲೇ ಕಸ ವಿಲೇವಾರಿ ಘಟಕ; ಮೂಗು ಮುಚ್ಚಿ ಪಾಠ ಕೇಳುವ ಸ್ಥಿತಿ, ಪುರಸಭೆ ವಿರುದ್ಧ ಪೋಷಕರ ಆಕ್ರೋಶ

ಇದೇ ಹಾಸ್ಟೆಲ್​ನಲ್ಲಿ 2023ರ ನವೆಂಬರ್ ತಿಂಗಳಲ್ಲಿ ಊಟದಲ್ಲಿ ಹುಳಗಳು ಪತ್ತೆಯಾಗಿದ್ದವು. ಕಳಪೆ ಆಹಾರ ನೀಡುತ್ತಿರುವುದರಿಂದ ಕೆರಳಿದ ವಿದ್ಯಾರ್ಥಿಗಳು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ. ಊಟ, ನೀರು ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಮಾಡುತ್ತಿದ್ದು, ಉತ್ತಮ ಊಟ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ದಬ್ಬಾಳಿಕೆ ಮಾಡುತ್ತಾರೆ. ಗೊತ್ತಿಲ್ಲದೆ ಊಟದಲ್ಲಿ ಹುಳಗಳು ತಿಂದು ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂತಹ ಆಹಾರ ತಿಂದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ