
ಬೆಂಗಳೂರು: ನಿನ್ನೆ ರಾತ್ರಿ 9ಗಂಟೆ ವೇಳೆಗೆ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಒಡೆತನದ ಐಷಾರಾಮಿ ಕಾರು ಅಪಘಾತವಾಗಿದೆ. ಬೆಂಗಳೂರಿನ ಯಲಹಂಕ ಫ್ಲೈಓವರ್ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಅಪಘಾತಕ್ಕೀಡಾಗಿದೆ.
ಫಾರೂಖ್ ಒಡೆತನದ MH 02 FF 5555 ನಂಬರಿನ ಐಷಾರಾಮಿ ಫೆರಾರಿ ಪೋರ್ಟೋಫಿನೋ ಕಾರು ನಿಯಂತ್ರಣ ತಪ್ಪಿ ಮೊದಲಿಗೆ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಚಲಾಯಿಸುತ್ತಿದ್ದವರು ಯಾರು ಎಂಬ ಬಗ್ಗೆ ಇನ್ನೂ ಪೊಲೀಸರು ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಹೆಚ್ಚಾಗಿ ಈ ಕಾರನ್ನು ಫಾರೂಖ್ ಪುತ್ರಿ ಬಳಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆ ಬಳಿಕ ಪರಸ್ಪರ ರಾಜಿಯೊಂದಿಗೆ 2 ಕಾರಿನ ಚಾಲಕರು ವಾಪಾಸಾಗಿದ್ದಾರೆ. ಅಪಘಾತವಾದ ಕಾರಿನ ನೊಂದಣಿ ಪ್ರಕ್ರಿಯೆ ಅಪೂರ್ಣವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ರಾತ್ರಿ ಮತ್ತೊಂದು ಶಾಸಕರ ಕಾರ್ ಅಪಘಾತ
Published On - 7:10 am, Mon, 6 September 21