AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್‌ಐ ಮೇಲೆ ಪುತ್ರಿ ಕಪಾಳಮೋಕ್ಷ ಪ್ರಕರಣ: ಮಗಳ ಪರವಾಗಿ ಬಹಿರಂಗ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಮಂಡ್ಯದ ಶ್ರೀರಂಗಪಟ್ಟಣ ದೇವಸ್ಥಾನದಲ್ಲಿ ಮಹಿಳಾ ಪಿಎಸ್‌ಐ ಮೇಲೆ ಶಾಸಕ ಬಿ. ಸುರೇಶ್‌ಗೌಡರ ಪುತ್ರಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಶಾಸಕರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಕಾನೂನು ಶಿಕ್ಷೆಗೆ ಒಳಪಡಲು ಸಿದ್ಧ ಎಂದಿದ್ದು, ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ವಿಐಪಿ ಪ್ರೋಟೋಕಾಲ್ ರದ್ದುಗೊಳಿಸಲು ಆಗ್ರಹಿಸಿದ್ದಾರೆ. ದೇವರ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.

ಪಿಎಸ್‌ಐ ಮೇಲೆ ಪುತ್ರಿ ಕಪಾಳಮೋಕ್ಷ ಪ್ರಕರಣ: ಮಗಳ ಪರವಾಗಿ ಬಹಿರಂಗ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 14, 2026 | 12:14 PM

Share

ಮಂಡ್ಯ, ಆ.14: ಶ್ರೀರಂಗಪಟ್ಟಣದ ಆರತಿ ಉಕ್ಕಡ ದೇವಸ್ಥಾನದಲ್ಲಿ ಕರ್ತವ್ಯನಿರತ ಮಹಿಳಾ ಪಿಎಸ್‌ಐ ಮೇಲೆ ಶಾಸಕರ ಪುತ್ರಿ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರು ತಮ್ಮ ಮಗಳ ಪರವಾಗಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

“ಯಾರೇ ಆಗಿರಲಿ ತಪ್ಪು ಮಾಡಿದ್ದರೆ ಕಾನೂನಿನಂತೆ ಶಿಕ್ಷೆಯಾಗಲಿ, ನಾವು ಸಾರ್ವಜನಿಕ ಜೀವನದಲ್ಲಿರುವಾಗ ತಾಳ್ಮೆ ಕಳೆದುಕೊಳ್ಳಬಾರದು” ಎಂದು ಸುರೇಶ್‌ಗೌಡ ಅವರು ಹೇಳಿದ್ದಾರೆ. “ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಚಿಕ್ಕ ಮಕ್ಕಳನ್ನು ಕರೆದುಕೊಂಡು ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗಿ ಸರತಿ ಸಾಲಿನಲ್ಲಿ ನಿಂತಿದ್ದಳು. ಒಳಗೆ ಬಿಡುವಂತೆ ಪಿಎಸ್‌ಐ ಅವರಿಗೆ ಕೇಳಿದಾಗ, ಅದೇ ಸಮಯದಲ್ಲಿ ಇನ್ನೊಬ್ಬರನ್ನು ಬಿಟ್ಟಿದ್ದಕ್ಕೆ ಮಾತಿಗೆ ಮಾತು ಬೆಳೆದು ವಾಗ್ವಾದವಾಗಿದೆ.” ಎಂದು ಹೇಳಿದರು.

“ನನ್ನ ಮಗಳು ಕಪಾಳಕ್ಕೆ ಹೊಡೆದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಬಹಳ ಒತ್ತಡದಲ್ಲಿರುತ್ತಾರೆ. ಸಾರ್ವಜನಿಕ ಜೀವನದಲ್ಲಿರುವ ನಾವುಗಳು ಅಹಂಕಾರ ಪಡಬಾರದು ಹಾಗೂ ತಾಳ್ಮೆ ಕಳೆದುಕೊಳ್ಳಬಾರದಿತ್ತು. ಮಗಳ ಪರವಾಗಿ ನಾನು ಕ್ಷಮೆ ಕೇಳುತ್ತೇನೆ. “ಯಾರೇ ಆಗಿರಲಿ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಕಾನೂನು ಏನಿದೆ ಅದನ್ನು ನಾವು ಎದುರಿಸುತ್ತೇವೆ. ನನ್ನ ಮಗಳು ನೀಡಿದ್ದ ದೂರನ್ನು ಹಿಂಪಡೆಯಬೇಕಿತ್ತು. ನಾವು ಮತ್ತು ನಮ್ಮ ಕುಟುಂಬದವರೆಲ್ಲರೂ ದೈವಭಕ್ತರು, ಹೀಗೆ ಆಗಬಾರದಿತ್ತು.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದ ಆರತಿ ಉಕ್ಕಡದಲ್ಲಿ ಶಾಸಕ ಸುರೇಶ್‌ಗೌಡ ಪುತ್ರಿ ದರ್ಪ: ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಐಶ್ವರ್ಯ

“ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ವಿಐಪಿ ಪ್ರೋಟೋಕಾಲ್ ವ್ಯವಸ್ಥೆಯನ್ನು ತೆಗೆದುಹಾಕಬೇಕು. ದೇವರ ಮುಂದೆ ನಾವೆಲ್ಲರೂ ಸಮಾನರು. ಈ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ, ಅನಗತ್ಯವಾಗಿ ಬೆಳೆಸಬೇಡಿ” ಎಂದು ಮಾಧ್ಯಮಗಳು ಹಾಗೂ ಸಾರ್ವಜನಿಕರಲ್ಲಿ ಶಾಸಕರು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಹೊಸ ಪಾರ್ಕಿಂಗ್ ಪಾಲಿಸಿಗೆ ಆರ್. ಅಶೋಕ್ ಕೆಂಡಾಮಂಡಲ
ಬೆಂಗಳೂರಿನ ಹೊಸ ಪಾರ್ಕಿಂಗ್ ಪಾಲಿಸಿಗೆ ಆರ್. ಅಶೋಕ್ ಕೆಂಡಾಮಂಡಲ
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್