ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಲಾಕರ್ ರಹಸ್ಯ ಬಯಲು: ಇಡಿಗೆ ಸಿಕ್ತು 44 ಕೆಜಿ ಚಿನ್ನ
ಕ್ಯಾಸಿನೋ ಬ್ಯುಸಿನೆಸ್, ಆನ್ಲೈನ್, ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಉದ್ಯಮಿ ವೀರೇಂದ್ರ ಪಪ್ಪಿಯ ಸಾಮ್ರಾಜ್ಯ ನೋಡಿ ಇಡಿ ಅಧಿಕಾರಿಗಳು ಶಾಕ್ ಆಗಿದ್ದರು. ಇದೀಗ ಮತ್ತೊಮ್ಮೆ ಶಾಕ್ ಆಗಿದ್ದಾರೆ. ಬ್ಯಾಂಕ್ನ 2 ಲಾಕರ್ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಸೀಜ್ ಮಾಡಿದ್ದಾರೆ.

ಬೆಂಗಳೂರು, ಅಕ್ಟೋಬರ್ 09: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ (Betting racket Case) ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನ (Veerendra Pappi) ಈಗಾಗಲೇ ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಆ ಮೂಲಕ ಈವರೆಗೆ 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ
ಅಕ್ರಮ ಆನ್ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್ನ 2 ಲಾಕರ್ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನ ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್: ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂ. ಜಪ್ತಿ
ಇತ್ತೀಚೆಗೆ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಂಶಯದಡಿ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ನಡೆದಿತ್ತು. ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಬಂಧನ: ಇಡಿ ಅಧಿಕಾರಿಗಳಿಗೆ ಕೋರ್ಟ್ ತರಾಟೆ, ಇಲ್ಲಿದೆ ವಾದ ಪ್ರತಿವಾದ
ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿದ್ದ ಪಪ್ಪಿಯನ್ನ ಕೊಲ್ಕತ್ತಾ ಇಡಿ ಅಧಿಕಾರಿಗಳ ಮೂಲಕ ಬಂಧಿಸಿ, ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದರು. ಬಳಿಕ ಕೋರಮಂಗಲದ ಜಡ್ಜ್ ನಿವಾಸದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 35 ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶರು 5 ದಿನಗಳ ಕಾಲ ವೀರೇಂದ್ರ ಪಪ್ಪಿಯನ್ನ ಇಡಿ ಕಸ್ಟಡಿಗೆ ನೀಡಿ ಆದೇಶಿಸಿತ್ತು. ಆಗಸ್ಟ್ 28 ರವರೆಗೆ ಇಡಿಯಿಂದ ವೀರೇಂದ್ರ ಪಪ್ಪಿ ವಿಚಾರಣೆ ನಡೆದಿತ್ತು. ಆಗಸ್ಟ್ 28 ರಂದು ಪಪ್ಪಿ ಪರ ವಕೀಲರು ಬೇಲ್ಗೆ ಅರ್ಜಿ ಸಲ್ಲಿಸಿದ್ದರು.
ವರದಿ: ಪ್ರದೀಪ್ ಚಿಕ್ಕಾಟಿ, ಕ್ರೈಂ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




