AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Mar 02, 2023 | 10:03 PM

Share

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್‌ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದಾರೆ. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ್ ಪ್ರಶಾಂತ್ ಕಚೇರಿ ಕಲೆಕ್ಷನ್​ ಸೆಂಟರ್​ ಆಗಿರುವ ಶಂಕೆ ವ್ಯಕ್ತವಾಗಿದೆ.

ಟಿವಿ9 ಗೆ ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ 

TV9 ಗೆ ಚನ್ನಗಿರಿ ಶಾಸಕ ಮತ್ತು ಕೆಎಸ್​ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ನೀಡಿದ್ದು, ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರ ನಾನು ಈಗಷ್ಟೇ ಟಿವಿಯಲ್ಲಿ ನೋಡುತ್ತಿದ್ದೇನೆ. ಏನು ವಿಷಯ ಅಂತಾ ಇನ್ನೂ ಗೊತ್ತಿಲ್ಲ. ಕ್ಷೇತ್ರದಿಂದ ಈಗ ಬೆಂಗಳೂರಿಗೆ ಬರುತ್ತಿದ್ದೇನೆ. ನಾಳೆ ಬೆಂಗಳೂರಿನಲ್ಲಿ ಸಿಗುತ್ತೇನೆ ಎಂದು ಹೇಳಿದರು.

ಹಣದ ಬ್ಯಾಗ್​ಗಳು ಪತ್ತೆ

2008ರಲ್ಲಿ ತಂದೆ ಆದಾಯ ಕೇವಲ 1.2 ಲಕ್ಷ ರೂಪಾಯಿ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿ ಕೆಎಎಸ್‌ನಲ್ಲಿ ತೇರ್ಗಡೆ ಆಗಿದ್ದ  ಮಾಡಾಳ್ ಪ್ರಶಾಂತ್​​ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ. ಮಾಡಾಳ್ ವಿರೂಪಾಕ್ಷಪ್ಪಗೆ ಮೂವರು ಗಂಡು ಮಕ್ಕಳಿದ್ದು, ಮೂವರು ಗಂಡು ಮಕ್ಕಳ ಪೈಕಿ ಪ್ರಶಾಂತ್​ ಎರಡನೇ ಪುತ್ರ. ಈ ಹಿಂದೆ ನಡೆದಿರುವ KSDLನ ಟೆಂಡರನಲ್ಲೂ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿರುವ ಎಲ್ಲ ಹಣವನ್ನು  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

40 ಲಕ್ಷದ ಹೊರತಾಗಿ ಬೇರೆ ಬೇರೆ ಹಣದ ಬ್ಯಾಗ್​ಗಳು ಪತ್ತೆಯಾಗಿವೆ. ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಗೆ ಶಾಸಕ ಮಾಡಳ್ ವಿರೂಪಾಕ್ಷಪ್ಪ ಆಗಾಗ ಬರುತ್ತಿದ್ದರು. ಕ್ರೆಸೆಂಟ್ ರಸ್ತೆಯ ಬಿಲ್ಡಿಂಗ್​ವೊಂದರ ಮೊದಲ ಮಹಡಿಯಲ್ಲಿ ಕಚೇರಿಯಿದ್ದು, ಟೆಂಡರ್ ಪ್ರಕ್ರಿಯೆ ಡೀಲ್ ಸ್ಪಾಟ್ ಆಗಿದೆ. ಕೆಲ ಸಿಬ್ಬಂದಿಗಳೊಂದಿಗೆ ಪ್ರಶಾಂತ್ ಕಚೇರಿ ನಡೆಸುತ್ತಿದ್ದಾರೆ.

ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್​ ಪ್ರತಿಕ್ರಿಯೆ

ಈ ಕುರಿತಾಗಿ ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್​ ಪ್ರತಿಕ್ರಿಯೆ ನೀಡಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಟೆಂಡರ್​ನಲ್ಲಿ ಭಾಗಿಯಾಗಿದ್ದ ಗುತ್ತಿಗೆದಾರನಿಂದ ₹40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಶಾಂತ್​ ಬಲೆಗೆ ಬಿದ್ದಿದ್ದಾರೆ. ಕೆಎಸ್​ಡಿಎಲ್​ ಟೆಂಡರ್​ ಸಂಬಂಧ ಖಾಸಗಿ ವ್ಯಕ್ತಿ ಇಂದು ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ FIR ದಾಖಲಿಸಿ ದಾಳಿ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:19 pm, Thu, 2 March 23

Follow Us