ಆರ್ಎಸ್ಎಸ್ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ, ಶಾಸಕ ಎಂಪಿ ರೇಣುಕಾಚಾರ್ಯ ಕಿಡಿ
ಇಂದು ಅಖಂಡ ಭಾರತ ಆಗಲು ಕಾರಣ ಆರ್ಎಸ್ಎಸ್. ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದರೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.
ಬೆಂಗಳೂರು: ಆರ್ಎಸ್ಎಸ್ ಕಾರ್ಯಕರ್ತರ (RSS Activist) ಮೇಲಿನ ಹಲ್ಲೆ ಖಂಡನೆ. ಮುಸ್ಲಿಂ ಗೂಂಡಾಗಳು ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಣದಲ್ಲಿ ನಡೆದಿದ್ದ ಘಟನೆ ಬಗ್ಗೆ ವಿಧಾನಸೌಧದಲ್ಲಿ ಅವರು ಮಾತನಾಡಿದರು. ಇಂದು ಅಖಂಡ ಭಾರತ ಆಗಲು ಕಾರಣ ಆರ್ಎಸ್ಎಸ್. ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್ ಬೆಂಬಲ ನೀಡಿದರೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು. ಅದೇ ರೀತಿಯಾಗಿ ಆರ್ಎಸ್ಎಸ್ಗೆ ನಿಂದಿಸಿದ ಕುರಿತ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿ ಪೊಲೀಸರಿಂದ ವೈರಲ್ ವಿಡಿಯೋ ಪರಿಶೀಲನೆ ಮಾಡಿದ್ದು, ಕಳೆದ ಭಾನುವಾರ ನಡೆದಿದ್ದ ಈದ್ ಮಿಲಾದ್ ಮೆರವಣಿಗೆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ರಾಜಕೀಯದಲ್ಲಿ ರಾಹುಲ್ ಗಾಂಧಿ ಬಚ್ಚಾನೇ: ಶಾಸಕ ರೇಣುಕಾಚಾರ್ಯ ವಾಗ್ದಾಳಿ
ರಾಹುಲ್ ಗಾಂಧಿ ಬಚ್ಚಾ ಎಂದು ಬಿಎಸ್ವೈ ಹೇಳಿದ್ದು ಸರಿ ಇದೆ. ರಾಜಕೀಯದಲ್ಲಿ ರಾಹುಲ್ ಗಾಂಧಿ ಬಚ್ಚಾನೇ ಎಂದು ರೇಣುಕಾಚಾರ್ಯ ಹೇಳಿದರು. ಪ್ರಬುದ್ಧತೆ ಇಲ್ಲದ ರಾಹುಲ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಒಂದಿನ ಸಿದ್ದರಾಮಯ್ಯ, ಮತ್ತೊಂದು ದಿನ ಡಿ.ಕೆ.ಶಿವಕುಮಾರ್. ರಾಹುಲ್ ಗಾಂಧಿ ಪ್ರತಿ ದಿನ ಒಬ್ಬೊಬ್ಬರನ್ನು ಓಡಿಸುತ್ತಾರೆ ಎಂದು ಬೆಂಗಳೂರಿನಲ್ಲಿ ರೇಣುಕಾಚಾರ್ಯ ವಾಗ್ದಾಳಿ ಮಾಡಿದರು.
ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು
ಪ್ರಕರಣ ಹಿನ್ನೆಲೆ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಈಗಾಗಲೇ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆ ಮಾಡಿ ಪರಾರಿಯಾದ ಇನ್ನು ಕೆಲವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ವಿಡಿಯೋ ಆಧಾರದ ಮೇಲೆ ಒಂದಷ್ಟು ಜನರನ್ನು ಹುಡುಕಲಾಗ್ತಿದೆ. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಇನ್ನುಳಿದ ಆರೋಪಿಗಳನ್ನು ಶೀಘ್ರವೇ ಬಂಧನ ಮಾಡಲಾಗುವುದು ಎಂದು ಹೇಳಿದರು.
ಘಟನೆ ಹಿನ್ನೆಲೆ:
ಅನ್ಯಕೋಮಿನ ಯುವಕರ ಗುಂಪಿನಿಂದ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ. RSS ಪಥಸಂಚಲನದ ಮಾರ್ಗ ವೀಕ್ಷಣೆಗೆ ತೆರಳಿದ್ದಾಗ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪಟ್ಟಣದಲ್ಲಿ ನಡಿಯುತ್ತಿರುವ ಪ್ರಶಿಕ್ಷಾ ವರ್ಗಕ್ಕೆ ಕಾರ್ಯಕರ್ತ ಬಂದಿದ್ದ ಎನ್ನಲಾಗಿದೆ. ಘಟನೆ ವೇಳೆ ಓರ್ವ ಆರ್ಎಸ್ಎಸ್ ಕಾರ್ಯಕರ್ತನ ತಲೆಗೆ ಗಾಯವಾಗಿದ್ದು, ಮೂರು-ನಾಲ್ಕು ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ರಟ್ಟೀಹಳ್ಳಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಕುರಿತಾಗಿ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, 10 ಜನರನ್ನು ಬಂಧಿಸಲಾಗಿದೆ ಎಂದು ಹಾವೇರಿ ಎಸ್ಪಿ ಹನುಮಂತರಾಯ ಮಾಹಿತಿ ನೀಡಿದರು. ನಿನ್ನೆ ರಾತ್ರಿ ನಡೆದ ಗಲಾಟೆಯ ವಿಡಿಯೋ ವೈರಲ್ ಆಗಿತ್ತು. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಟ್ಟೀಹಳ್ಳಿ ಪಟ್ಟಣದಲ್ಲಿ ಭದ್ರತೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:39 pm, Wed, 12 October 22