AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್​ಬ್ಯಾಕ್ ಅರೋಪ; ಅಮಾನತಿಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆಗ್ರಹ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ 7 ರಿಂದ 8 ಪ್ರಕರಣಗಳು ಇವೆ. ಹೀಗಾಗಿ ಅವರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿದ್ದೇನೆ ಎಂದು ಶಾಸಕ ಸಾ.ರಾ. ಮಹೇಶ್ ತಿಳಿಸಿದರು.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್​ಬ್ಯಾಕ್ ಅರೋಪ; ಅಮಾನತಿಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆಗ್ರಹ
ಶಾಸಕ ಸಾ.ರಾ ಮಹೇಶ್ ಮತ್ತು ರೋಹಿಣಿ ಸಿಂಧೂರಿ
TV9 Web
| Updated By: guruganesh bhat|

Updated on:Sep 03, 2021 | 7:48 PM

Share

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರಿಸರ ಸ್ನೇಹಿ ಬ್ಯಾಗುಗಳ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದಾರೆ. 6 ಕೋಟಿ ಕಿಕ್‌ಬ್ಯಾಕ್ ಪಡೆದುಕೊಂಡಿದ್ದಾರೆ ಎಂದು ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಕಾರ್ಯದರ್ಶಿ ರವಿಕುಮಾರ್‌ ಅವರಿಗೆ ದೂರು ನೀಡಿದ್ದಾರೆ. ಪರಿಸರ ಸ್ನೇಹಿ ಬ್ಯಾಗ್ ಹಾಗೂ ಅವ್ಯವಹಾರದ ದಾಖಲೆ ಸಮೇತ ವಿಧಾನಸೌಧಕ್ಕೆ ಆಗಮಿಸಿದ್ದ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ 7 ರಿಂದ 8 ಪ್ರಕರಣಗಳು ಇವೆ. ಹೀಗಾಗಿ ಅವರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿದ್ದೇನೆ ಎಂದು ಶಾಸಕ ಸಾ.ರಾ. ಮಹೇಶ್ ತಿಳಿಸಿದರು.

ಮೈಸೂರು ಜಿಲ್ಲೆಯ ಗ್ರಾಮ ಪಂಚಾಯ್​ಗಳಿಗೆ  2 ಲಕ್ಷ, ನಗರಸಭೆಗೆ 1.5 ಲಕ್ಷ, ಒಟ್ಟಾರೆ 14 ಲಕ್ಷ ಬ್ಯಾಗ್ ಖರೀದಿ ಮಾಡಲಾಗಿದೆ. ಇದು ಸ್ಥಳೀಯ ಜನಪ್ರತಿನಿಧಿಗಳು ಸಭೆ ಕರೆದು ಕ್ರಿಯಾ ಯೋಜನೆ ಮಾಡಿ ಅಲ್ಲೇ ತೀರ್ಮಾನ ಮಾಡುವ ಯೋಜನೆಯಾಗಿತ್ತು. ನಗರ ಪಾಲಿಕೆ ಕ್ರಿಯಾ ಯೋಜನೆ ಅಂತಿಮಗೊಳಿಸಿ ಜಿಲ್ಲಾಧಿಕಾರಿಗಳಿಗೆ ಕಳಿಸುತ್ತದೆ. ಆದರೆ ರೋಹಿಣಿ ಸಿಂಧೂರಿ ಮಾರ್ಚ್‌ 4 ರಲ್ಲಿ ಸಭೆ ಕರೆದು ಜಿಲ್ಲೆ ಮತ್ತು ನಗರದ ಪ್ಲಾಸ್ಟಿಕ್ ರಹಿತ ಬ್ಯಾಗ್ ಕೊಡುತ್ತೇವೆ ಎಂದು ಹೇಳಿದ್ದರು.

ಇಂತಹ 10 ಹಾಗೂ 5 ಕೆಜಿ ಬ್ಯಾಗ್ ಎರಡಕ್ಕೂ ₹ 52 ನೀಡಿ ಖರೀದಿಸಿದ್ದಾರೆ. ಇಂತಹ ಒಂದು ಬ್ಯಾಗ್​ಗೆ ಜಿಎಸ್‌ಟಿ ಸೇರಿ 9 ರೂಪಾಯಿ ಆಗುತ್ತದೆ. ಆದರೆ 52 ರೂ.ಗೆ ಖರೀದಿ ಮಾಡಲಾಗಿದೆ. ವಾಸ್ತವ ಬೆಲೆ ಜಿಎಸ್‌ಟಿ ಸೇರಿ 12 ರೂಪಾಯಿ ಹೆಚ್ಚು ನೀಡಿ ಖರೀದಿಸಿದರೆ 8 ರೂ. ಗೆ ಸಿಗಲಿದೆ. ಒಟ್ಟು 6.18 ಕೋಟಿಗೆ ಬ್ಯಾಗ್ ಖರೀದಿ ಮಾಡಿದ್ದಾರೆ. ಎಲ್ಲರ ಅಧಿಕಾರ ಮೊಟಕುಗೊಳಿಸಿ ಖರೀದಿ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ ಕಾರಣಗಳನ್ನು ವಿವರಿಸದರು.

ಇದನ್ನೂ ಓದಿ:

Rohini Sindhuri: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು  

ಐಪಿಎಸ್ ಡಿ ರೂಪಾ ಫೇಸ್​ಬುಕ್ ಪೋಸ್ಟ್​ಗಳನ್ನು ಟ್ರೋಲ್ ಮಾಡಲು ಏಜೆನ್ಸಿಗೆ ಗುತ್ತಿಗೆ? ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಆರೋಪ

(MLA Sa Ra Mahesh urges IAS Rohini Sindhuri suspension accused she taken kickbacks0

Published On - 7:36 pm, Fri, 3 September 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?