AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಇಬ್ಬರಲ್ಲ, ಮೂವರು! ಸಿಸಿಟಿವಿ ದೃಶ್ಯದಿಂದ ಬಯಲಾದ ಸತ್ಯ

ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಎಸಿಪಿ ಮೈಕೊಲೇಔಟ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಗಳ ಪತ್ತೆಗಾಗಿ ತಲಾಶ್ ಆರಂಭವಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು ಒಂದು ಸಿಸಿಟಿವಿಯಲ್ಲಿ ಮೂರು ನಿಮಿಷದ ದೃಶ್ಯ ಸೆರೆಯಾಗಿದೆ. 

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದವರು ಇಬ್ಬರಲ್ಲ, ಮೂವರು! ಸಿಸಿಟಿವಿ ದೃಶ್ಯದಿಂದ ಬಯಲಾದ ಸತ್ಯ
ಸುಟ್ಟು ಕರಕಲಾದ ಶಾಸಕ ಸತೀಶ್ ರೆಡ್ಡಿ ಕಾರುಗಳು
TV9 Web
| Updated By: guruganesh bhat|

Updated on:Aug 12, 2021 | 4:46 PM

Share

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಮನೆ ಆವರಣದಲಿದ್ದ ಕಾರಿಗೆ ಬೆಂಕಿ ಹಚ್ಚಿದವರು ಕೇವಲ ಇಬ್ಬರು ಮಾತ್ರಬಲ್ಲ, ಮೂವರು ಎಂಬ ಸಂಗತಿ ಬಯಲಾಗಿದೆ. ಸಿಸಿಟಿವಿ ಪರಿಶೀಲನೆ ವೇಳೆ ಈ ಸಂಗತಿ ಬೆಳಕಿಗೆ ಬಂದಿದ್ದು, ಬೆಂಕಿ ಹಚ್ಚಿದ ಬಳಿಕ ಮೂವರು ಓಡಿ ಹೋಗುವುದು ಸೆರೆಯಾಗಿದೆ. ಸದ್ಯ ತನಿಖಾ ತಂಡ ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ಮಾಡುತ್ತಿದೆ.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಇಟ್ಟ ಪ್ರಕರಣದ ಹಿಂದೆ ಒಂದು ಸಂಚು ಇದೆ. ರಾತ್ರಿ 10 ಗಂಟೆಯೊಳಗೆ ಆರೋಪಿಯನ್ನ ಬಂಧಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಘಟನೆಯ ಹಿಂದೆ ಇರುವ ಒಬ್ಬರ ಬಗ್ಗೆ ಸುಳಿವು ಸಿಕ್ಕಿದೆ. ಆದರೆ ಆತ ಆರೋಪಿಯೇ ಎಂದು ಗೊತ್ತಾಗಬೇಕಿದೆ. ಆರೋಪಿ ಪಾತಾಳದಲ್ಲೇ ಇದ್ದರೂ ನಾವು ಬಿಡುವುದಿಲ್ಲ. ರಾತ್ರಿ 10 ಗಂಟೆಯೊಳಗೆ ಬಂಧಿಸಲಾಗುವುದು. ಮೂವರು ಸೇರಿಕೊಂಡು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. 200ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯಗಳು ಲಭ್ಯವಾಗಿದೆ. ಪೊಲೀಸರು ಸಿಸಿ ಕ್ಯಾಮರಾ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಆರೋಪಿ ಎಲ್ಲೇ ಇದ್ದರೂ 10 ಗಂಟೆಯೊಳಗೆ ಅರೆಸ್ಟ್ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಎಸಿಪಿ ಮೈಕೊಲೇಔಟ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಗಳ ಪತ್ತೆಗಾಗಿ ತಲಾಶ್ ಆರಂಭವಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು ಒಂದು ಸಿಸಿಟಿವಿಯಲ್ಲಿ ಮೂರು ನಿಮಿಷದ ದೃಶ್ಯ ಸೆರೆಯಾಗಿದೆ.

1:23ರ ಸುಮಾರಿಗೆ ಎಂಟ್ರಿ ಕೊಟ್ಟ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ನಲ್ಲಿ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ 1:26ರಷ್ಟರೊಳಗೆ ಕೆಲಸ ಮುಗಿಸಿ  ಪರಾರಿಯಾಗಿದ್ದಾರೆ. ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ. 3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಘಟನೆಗೆ ಅಸಲಿ ಕಾರಣ ಏನು ಎಂಬ ನಿಟ್ಟಿನಲ್ಲಿ ರಾಜಕೀಯ ಕಾರಣನಾ, ಶಿವಮೂರ್ತಿ ವಿಚಾರಕ್ಕಾ? ಯಾವ ಕಾರಣದಿಂದ ದಾಳಿಯಾಗಿದೆ ಎಂದು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ:  

ನಾನು ಹಿಂದೂ ಪರವಾಗಿ ಮಾತನಾಡಿದ್ದೇ ಕೃತ್ಯಕ್ಕೆ ಕಾರಣವಾಯ್ತಾ? ಅನುಮಾನ ಹೊರ ಹಾಕಿದ ಶಾಸಕ ಸತೀಶ್ ರೆಡ್ಡಿ

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ: ಚುರುಕುಗೊಂಡ ಪೊಲೀಸ್ ತನಿಖೆ

(MLA Sathish Reddy car fires not only two man but three man shows CCTV scene)

Published On - 4:37 pm, Thu, 12 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ