AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಚಕ್ರ ತಿರುಗುತ್ತಲೇ ಇರುತ್ತದೆ, ರಾಮುಲು ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ -ಶಾಸಕ ಸೋಮಶೇಖರ್ ರೆಡ್ಡಿ

ಕಾಲಚಕ್ರ ಯಾವಾಗಲೂ ತಿರುಗುತ್ತಲೇ ಇರುತ್ತದೆ. ರಾಮುಲು ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ. ಏನೇ ಆದರೂ ಕೂಡ ಒಳ್ಳೆಯದೇ ಆಗುತ್ತದೆ ಎಂದು ಟಿವಿ9ಗೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಕಾಲಚಕ್ರ ತಿರುಗುತ್ತಲೇ ಇರುತ್ತದೆ, ರಾಮುಲು ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ -ಶಾಸಕ ಸೋಮಶೇಖರ್ ರೆಡ್ಡಿ
ಶಾಸಕ ಸೋಮಶೇಖರ್ ರೆಡ್ಡಿ
TV9 Web
| Edited By: ಆಯೇಷಾ ಬಾನು|

Updated on: Jul 22, 2021 | 12:36 PM

Share

ಬೆಂಗಳೂರು: ದೆಹಲಿಗೆ ಹೋಗಿ ಬಂದಾಗಿನಿಂದ ಮೌನ ತಾಳಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಅಧಿಕಾರದಿಂದ ಇಳಿಯುವ ಸುಳಿವನ್ನು ನೀಡಿದ್ದಾರೆ. ಇದೇ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗಳು ಗರಿಗೆದರಿವೆ. ಸಿಎಂ ಯಡಿಯೂರಪ್ಪ ರಾಜೀನಾಮೆ ಸುಳಿವು ವಿಚಾರಕ್ಕೆ ಸಂಬಂಧಿಸಿ ಟಿವಿ9ಗೆ ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಹೈಕಮಾಂಡ್ ಒಂದು ಒಳ್ಳೆಯ ನಿರ್ಧಾರಕ್ಕೆ ಬಂದಿದೆ. ಪಕ್ಷ ಬೆಳೆಯಲು ಎಲ್ಲರೂ ಕೂಡ ಕಷ್ಟಪಟ್ಟಿದ್ದಾರೆ. ನಮಗೆ ಯಾವುದೇ ಸೂಕ್ತ ಸ್ಥಾನಮಾನ ಸಿಗಲಿಲ್ಲ. ಬಳ್ಳಾರಿಯಲ್ಲಿ ಇರುವ ಎಲ್ಲರಿಗೂ ನೋವಾಗಿತ್ತು. 2008ರಲ್ಲಿ ನಮ್ಮನ್ನ ಬಳಸಿಕೊಂಡಿದ್ದರು, ನಂತ್ರ ಕೈಬಿಟ್ರು ಎಂದು ಹೇಳಿದ್ರು.

ನಮ್ಮ ಸಹೋದರರನ್ನ ಬಳಸಿಕೊಂಡ್ರು. ನಾವು ಹೋದ್ರೆ ನಮಗೆ ಒಂದು ಸಹಿಯನ್ನೂ ಮಾಡುವುದಿಲ್ಲ. ಕಾಲಚಕ್ರ ಯಾವಾಗಲೂ ತಿರುಗುತ್ತಲೇ ಇರುತ್ತದೆ. ರಾಮುಲು ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ. ಏನೇ ಆದರೂ ಕೂಡ ಒಳ್ಳೆಯದೇ ಆಗುತ್ತದೆ ಎಂದು ಟಿವಿ9ಗೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಮೊದಲ ಸಲ ರಾಜೀನಾಮೆ ಸುಳಿವು ನೀಡಿದ ಸಿಎಂ ಬಿಎಸ್‌ವೈ? ಇನ್ನು ಹೋಮದ ಬಳಿಕ ಬೆಂಗಳೂರಿನಲ್ಲಿ ಸಿಎಂ ರಾಜೀನಾಮೇ ಬಗ್ಗೆ ಮೌನ ಮುರಿದಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಆ ತೀರ್ಮಾನ ನನ್ನದು. ಜು.25ರಂದು ಹೈಕಮಾಂಡ್ ನೀಡುವ ಸೂಚನೆಯಂತೆ ಕೆಲಸ ಮಾಡುತ್ತೇನೆ. ಜುಲೈ 26ರಿಂದ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.

ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರವನ್ನು ಕೊಟ್ಟಿದ್ದಾರೆ. ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಸಂಕಲ್ಪ ನನ್ನದು. ಪಕ್ಷದ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೆ ನನಗೆ ಉತ್ತಮ ರೀತಿಯಲ್ಲಿ ಸಹಕಾರವನ್ನು ಕೊಡಬೇಕು. ನನ್ನ ಪರ ಹೇಳಿಕೆ, ಪ್ರತಿಭಟನೆ ಮಾಡದಂತೆ ಮನವಿ ಮಾಡುವೆ. ಮಠಾಧೀಶರು ನನಗೆ ಅಭೂತಪೂರ್ವ ಬೆಂಬಲ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 26ರಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ರು.

ಇದನ್ನೂ ಓದಿ: ಸಿಎಲ್​ಪಿ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೇ ಚರ್ಚೆ: ‘ಸಿಎಂ ಯಡಿಯೂರಪ್ಪ ಬದಲಾದರೆ ಅದನ್ನು ನಾವು ಪೂರಕವಾಗಿ ಬಳಸಿಕೊಳ್ಳಬೇಕು’

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ