ಬೆಂಗಳೂರು: ದೆಹಲಿಗೆ ಹೋಗಿ ಬಂದಾಗಿನಿಂದ ಮೌನ ತಾಳಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಅಧಿಕಾರದಿಂದ ಇಳಿಯುವ ಸುಳಿವನ್ನು ನೀಡಿದ್ದಾರೆ. ಇದೇ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗಳು ಗರಿಗೆದರಿವೆ. ಸಿಎಂ ಯಡಿಯೂರಪ್ಪ ರಾಜೀನಾಮೆ ಸುಳಿವು ವಿಚಾರಕ್ಕೆ ಸಂಬಂಧಿಸಿ ಟಿವಿ9ಗೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಹೈಕಮಾಂಡ್ ಒಂದು ಒಳ್ಳೆಯ ನಿರ್ಧಾರಕ್ಕೆ ಬಂದಿದೆ. ಪಕ್ಷ ಬೆಳೆಯಲು ಎಲ್ಲರೂ ಕೂಡ ಕಷ್ಟಪಟ್ಟಿದ್ದಾರೆ. ನಮಗೆ ಯಾವುದೇ ಸೂಕ್ತ ಸ್ಥಾನಮಾನ ಸಿಗಲಿಲ್ಲ. ಬಳ್ಳಾರಿಯಲ್ಲಿ ಇರುವ ಎಲ್ಲರಿಗೂ ನೋವಾಗಿತ್ತು. 2008ರಲ್ಲಿ ನಮ್ಮನ್ನ ಬಳಸಿಕೊಂಡಿದ್ದರು, ನಂತ್ರ ಕೈಬಿಟ್ರು ಎಂದು ಹೇಳಿದ್ರು.
ನಮ್ಮ ಸಹೋದರರನ್ನ ಬಳಸಿಕೊಂಡ್ರು. ನಾವು ಹೋದ್ರೆ ನಮಗೆ ಒಂದು ಸಹಿಯನ್ನೂ ಮಾಡುವುದಿಲ್ಲ. ಕಾಲಚಕ್ರ ಯಾವಾಗಲೂ ತಿರುಗುತ್ತಲೇ ಇರುತ್ತದೆ. ರಾಮುಲು ಅವರಿಗೆ ಸೂಕ್ತ ಸ್ಥಾನಮಾನ ಸಿಗುವ ಸಾಧ್ಯತೆ ಇದೆ. ಏನೇ ಆದರೂ ಕೂಡ ಒಳ್ಳೆಯದೇ ಆಗುತ್ತದೆ ಎಂದು ಟಿವಿ9ಗೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಮೊದಲ ಸಲ ರಾಜೀನಾಮೆ ಸುಳಿವು ನೀಡಿದ ಸಿಎಂ ಬಿಎಸ್‌ವೈ?
ಇನ್ನು ಹೋಮದ ಬಳಿಕ ಬೆಂಗಳೂರಿನಲ್ಲಿ ಸಿಎಂ ರಾಜೀನಾಮೇ ಬಗ್ಗೆ ಮೌನ ಮುರಿದಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಆ ತೀರ್ಮಾನ ನನ್ನದು. ಜು.25ರಂದು ಹೈಕಮಾಂಡ್ ನೀಡುವ ಸೂಚನೆಯಂತೆ ಕೆಲಸ ಮಾಡುತ್ತೇನೆ. ಜುಲೈ 26ರಿಂದ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.
ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರವನ್ನು ಕೊಟ್ಟಿದ್ದಾರೆ. ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಸಂಕಲ್ಪ ನನ್ನದು. ಪಕ್ಷದ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳದೆ ನನಗೆ ಉತ್ತಮ ರೀತಿಯಲ್ಲಿ ಸಹಕಾರವನ್ನು ಕೊಡಬೇಕು. ನನ್ನ ಪರ ಹೇಳಿಕೆ, ಪ್ರತಿಭಟನೆ ಮಾಡದಂತೆ ಮನವಿ ಮಾಡುವೆ. ಮಠಾಧೀಶರು ನನಗೆ ಅಭೂತಪೂರ್ವ ಬೆಂಬಲ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 26ರಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ರು.
ಇದನ್ನೂ ಓದಿ: ಸಿಎಲ್ಪಿ ಸಭೆಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆಯೇ ಚರ್ಚೆ: ‘ಸಿಎಂ ಯಡಿಯೂರಪ್ಪ ಬದಲಾದರೆ ಅದನ್ನು ನಾವು ಪೂರಕವಾಗಿ ಬಳಸಿಕೊಳ್ಳಬೇಕು’