ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಸ್ಆರ್ ವಿಶ್ವನಾಥ್ (SR Vishwanath), ಚುನಾವಣಾ ನಿವೃತ್ತಿ ಹೇಳಿಕೆಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಪುತ್ರ ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟರೂ ಸಮಸ್ಯೆಯಿಲ್ಲ. ಬಿಎಸ್ವೈಗಾಗಿ ರಾಜ್ಯದ ಯಾವುದೇ ಕ್ಷೇತ್ರವನ್ನಾದರೂ ಬಿಟ್ಟುಕೊಡಲು ಸಿದ್ಧ. ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಬಿಎಸ್ವೈ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ. ಬಿಎಸ್ವೈ ಚುನಾವಣಾ ನಿವೃತ್ತಿ ವಿಚಾರ ನನ್ನಲ್ಲಿ ಉತ್ಸಾಹ ಕಡಿಮೆ ಆಗಿದೆ ಎಂದರು.
ಯಡಿಯೂರಪ್ಪನವರು ಶ್ರೀಕೃಷ್ಣ, ಭೀಷ್ಮನ ರೀತಿ ನಮ್ಮ ಜೊತೆ ಇರಬೇಕು. ಬಿಎಸ್ವೈ ತಮ್ಮ ಹೇಳಿಕೆ ಹಿಂಪಡೆದು ನನಗೆ ಬರ್ತ್ಡೇ ಗಿಫ್ಟ್ ನೀಡಬೇಕು ಎಂದು ಬೆಂಗಳೂರಿನ ಯಲಹಂಕದಲ್ಲಿ ಶಾಸಕ ಎಸ್ಆರ್ ವಿಶ್ವನಾಥ್ ಹೇಳಿದ್ದಾರೆ.
ರೆಸಾರ್ಟ್ನಲ್ಲಿ ಅದ್ಧೂರಿ ಹುಟ್ಟುಹಬ್ಬ ಆಚರಣೆ:
ಯಲಹಂಕದ ಖಾಸಗಿ ರೆಸಾರ್ಟ್ನಲ್ಲಿ ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಅದ್ಧೂರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಿದ್ದರು. ಹಾಗೇ, ವಿ.ಸೋಮಣ್ಣ, ಕೆ.ಗೋಪಾಲಯ್ಯ ಸೇರಿದಂತೆ ಹಲವು ಸಚಿವರು ಶಾಸಕರಿಗೆ ಶುಭ ಕೋರಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಪ್ರಯೋಗಾಲಯದಲ್ಲಿನ ಹೊಸ ಪ್ರಯೋಗಗಳಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯ ಅಪಾಯದಲ್ಲಿದೆ: ರಾಹುಲ್ ಗಾಂಧಿ
ಸಿಎಂ ಹುದ್ದೆಗಾಗಿ ಕಚ್ಚಾಟ ಶುರುವಾಗಿದೆ- ಯಡಿಯೂರಪ್ಪ:
ಎಸ್ಆರ್ ವಿಶ್ವನಾಥ್ ಶೀಘ್ರ ಸಚಿವ ಸಂಪುಟ ಸೇರಬೇಕು. ಸಿಎಂ ಬಸವರಾಜ ಬೊಮ್ಮಾಯಿಗೆ ಒತ್ತಾಯ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. ವಿಶ್ವನಾಥ್ಗೆ ಮುಂದೆ ಒಳ್ಳೆಯ ಕಾಲ ಬರಲಿದೆ. 150ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ನಲ್ಲಿ ಈಗಾಗಲೇ ಸಿಎಂ ಹುದ್ದೆಗಾಗಿ ಕಚ್ಚಾಟ ಶುರುವಾಗಿದೆ. ಯಾವುದೇ ಕಾರಣಕ್ಕೂ ಅವರನ್ನು ಅಧಿಕಾರಕ್ಕೆ ಬರಲು ಬಿಡಲ್ಲ ಎಂದರು.
ಇದನ್ನೂ ಓದಿ: ಒಕ್ಕಲಿಗರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ; ಶಿವಕುಮಾರ್, ಜಮೀರ್ಗೆ ಒಳ್ಳೆಯದಾಗಲ್ಲ ಎಂದ ಸಚಿವ ಆರ್ ಅಶೋಕ್
Published On - 4:00 pm, Sun, 24 July 22