MLA ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್; ಗೋವಿಂದಬಾಬು ಪೂಜಾರಿಗೆ ಸಿಸಿಬಿ ಬುಲಾವ್, ಹಣದ ಮೂಲ ತಿಳಿಸದಿದ್ರೆ ಸಂಕಷ್ಟ

ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಕೇಸ್ ಸಂಬಂಧ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗಲಿದೆ. ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ.

MLA ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್; ಗೋವಿಂದಬಾಬು ಪೂಜಾರಿಗೆ ಸಿಸಿಬಿ ಬುಲಾವ್, ಹಣದ ಮೂಲ ತಿಳಿಸದಿದ್ರೆ ಸಂಕಷ್ಟ
ಗೋವಿಂದ ಬಾಬು ಪೂಜಾರಿ
Follow us
| Updated By: ಆಯೇಷಾ ಬಾನು

Updated on:Sep 18, 2023 | 10:13 AM

ಬೆಂಗಳೂರು, ಸೆ.18: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಕೇಸ್ ಸಂಬಂಧ ಚೈತ್ರಾ ಕುಂದಾಪುರ(Chaitra Kundapura) ಆ್ಯಂಡ್ ಟೀಂ ಬಂಧನ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಗೋವಿಂದ ಬಾಬು ಪೂಜಾರಿಗೆ(Govinda Babu Poojary) ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ(CCB) ಪೊಲೀಸರು ಸೂಚಿಸಿದ್ದಾರೆ.  ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ ಎದುರಾಗಲಿದೆ. ಈಗಾಗಲೇ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ವಿಜಯನಗರದ ನಿವಾಸ, ಕೆಕೆ ಗೆಸ್ಟ್ ಹೌಸ್, ಗೋವಿಂದ ಬಾಬು ಪೂಜಾರಿ ಕಚೇರಿ ಸೇರಿ ಹಲವೆಡೆ ಮಹಜರು ನಡೆಸಲಾಗಿದೆ. ಸದ್ಯ ಐದು ಕೋಟಿ ಮೂಲದ ಹುಡುಕಾಟದಲ್ಲಿ ಸಿಸಿಬಿ ಇದೆ.

ಸಿಸಿಬಿ ಅಧಿಕಾರಿಗಳು ಗೋವಿಂದ ಪೂಜಾರಿಯ ಸಂಪೂರ್ಣ ಹಣದ ವಿವರ ಕಲೆ ಹಾಕುತ್ತಿದ್ದಾರೆ. ಹಣದ ಅದಾಯದ ಮೂಲದ ಬಗ್ಗೆಯೂ ಮಾಹಿತಿ ಕೇಳಿದ್ದಾರೆ. ಸಾಲ ಮಾಡಿ ಹಣ ಕೊಟ್ಟಿರುವೆ ಎಂದು ಗೋವಿಂದ ಪೂಜಾತಿ ತಿಳಿಸಿದ್ದಾರೆ. ಅದರ ಬಗ್ಗೆಯೂ ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಬ್ಯಾಂಕ್ ನಿಂದ ಆ ಸಾಲದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ನಗದು ರೂಪದಲ್ಲಿ ಹಣ ನೀಡಿರುವ ಹಿನ್ನೆಲೆ ಈ ಎಲ್ಲಾ ಮಾಹಿತಿ ನೀಡಿಬೇಕಿದೆ. ಎಲ್ಲಾ ದಾಖಲಾತಿಗಳನ್ನ ಸಲ್ಲಿಸುವಂತೆ ಸಿಸಿಬಿ ಪೊಲೀಸರು ಗೋವಿಂದ ಬಾಬುಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ ಕುಂದಾಪುರ !

ಇನ್ನು ಮತ್ತೊಂದೆಡೆ ಆರೋಪಿ ಚೈತ್ರಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸುಸ್ತು ಮತ್ತು ಬಾಯಿಯಲ್ಲಿ ನೊರೆ ಬಂದು ಫಿಡ್ಸ್ ಎಂದು ಚೈತ್ರಾ ಆಸ್ಪತ್ರೆಗೆ ಸೇರಿದ್ದಾರೆ. ಚಿಕಿತ್ಸೆ ವೇಳೆ ಫಿಡ್ಸ್ ಬಂದಿರಲಿಲ್ಲಾ ಎಂದು ವೈದ್ಯರು ದೃಢ ಪಡಿಸಿದ್ದರು. ಹಾಗೂ ಇಸಿಸಿ, ಸ್ಕ್ಯಾನ್ ಎಲ್ಲವೂ ನಾರ್ಮಲ್ ಇದೆ ಎಂದಿದ್ದರು. ಆದಾದ ಬಳಿಕ ಎದೆ ನೋವು ಕಥೆ ಹೇಳಿ ಚೈತ್ರಾ ಆಸ್ಪತ್ರೆಯಲ್ಲೇ ಆಶ್ರಯ ಪಡೆದಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಕಾರ್ಡಿಯೋಲಾಜಿ ವಿಭಾಗದಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಂಧನ ಮಾಡಿದ ದಿನದಿಂದ ಸರಿಯಾಗಿ ನಿದ್ರೆ ಮಾಡದೆ ಊಟ ಸರಿಯಾಗಿ ಮಾಡಿಲ್ಲದ ಹಿನ್ನೆಲೆ ದೇಹ ನಿತ್ರಾಣವಾಗಿ ಹೀಗಾಗಿರಬಹುದು ಎಂದು ಮಾಹಿತಿ ಸಿಕ್ಕಿದೆ.

ಇದುವರೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕ ಹಣವೆಷ್ಟು?

ಈ ಪ್ರಕರಣದಲ್ಲಿ ಇದೂವರೆಗೂ 2 ಕೋಟಿಗೂ ಹೆಚ್ಚು ಮೌಲ್ಯದ ನಗದು, ಚಿನ್ನ ಜಪ್ತಿ ಮಾಡಲಾಗಿದೆ. ಚೈತ್ರಾ ಕುಂದಾಪುರ ತನ್ನ ಸಂಬಂಧಿಕರ ಹೆಸರಲ್ಲಿ ಖಾಸಗಿ ಬ್ಯಾಂಕ್​ನಲ್ಲಿ ಇಟ್ಟಿದ್ದ 1 ಕೋಟಿ ಎಂಟು ಲಕ್ಷದ ಠೇವಣಿ ಪತ್ರ ಜಪ್ತಿ ಮಾಡಲಾಗಿದೆ. ಚೈತ್ರಾಗೆ ಸೇರಿದ್ದ ಸುಮಾರು 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ತನ್ನ ಭಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್​ನಲ್ಲಿ ಇಟ್ಟಿದ್ದ 40 ಲಕ್ಷ ಜಪ್ತಿ ಮಾಡಲಾಗಿದೆ. ಹಾಘೂ ಶ್ರೀಕಾಂತ್ ಅಕೌಂಟ್​ನಲ್ಲಿ ನಲವತ್ತೈದು ಲಕ್ಷ ಜಪ್ತಿ ಮಾಡಲಾಗಿದೆ. ಸ್ವಾಮೀಜಿ ಈಗಾಗಲೇ 50 ಲಕ್ಷ ರೂಪಾಯಿ ಗೋವಿಂದ ಪೂಜಾರಿಗೆ ಹಿಂದಿರುಗಿಸಿದ್ದು. ಸದ್ಯ ಚೈತ್ರಾ ಖರೀದಿ ಮಾಡಿದ್ದ ಕಿಯಾ ಕಾರು ವಶಕ್ಕೆ ಪಡೆಯಲಾಗಿದೆ. ಸುಮಾರು ಮೂರು ಕೋಟಿ ಮೂವತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಹಣಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Mon, 18 September 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!