AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ವೀರೇಂದ್ರ ಪಪ್ಪಿ ಬಂಧನ: ಇಡಿ ದಾಳಿ ವೇಳೆ ಕೋಟ್ಯಂತರ ರೂ ನಗದು ಸೇರಿ ವಿದೇಶಿ ಕರೆನ್ಸಿ ಪತ್ತೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಿನ್ನೆ ಇಡಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತ ಎಲ್ಲೆಲ್ಲಿ ಪಪ್ಪಿಗೆ ಸಂಬಂಧಿಸಿದ ಸ್ಥಳಗಳಿದ್ದಾವೋ ಅಲ್ಲೆಲ್ಲ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದ್ದಾರೆ. ಈ ವೇಳೆ ಕೋಟ್ಯಂತರ ರೂ ನಗದು ಸೇರಿ ವಿದೇಶಿ ಕರೆನ್ಸಿಗಳು ಪತ್ತೆ ಆಗಿವೆ. ಸದ್ಯ ಅವರನ್ನು ಬಂಧಿಸಲಾಗಿದೆ.

ಶಾಸಕ ವೀರೇಂದ್ರ ಪಪ್ಪಿ ಬಂಧನ: ಇಡಿ ದಾಳಿ ವೇಳೆ ಕೋಟ್ಯಂತರ ರೂ ನಗದು ಸೇರಿ ವಿದೇಶಿ ಕರೆನ್ಸಿ ಪತ್ತೆ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಪತ್ತೆ ಆದ ಹಣ
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 23, 2025 | 2:51 PM

Share

ಬೆಂಗಳೂರು, ಆಗಸ್ಟ್​ 23: ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ (Congress MLA KC Veerendra) ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಮಾಡಿ ಇದೀಗ ಅವರನ್ನು ಬಂಧಿಸಲಾಗಿದೆ (arrest). ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ ಇಡಿ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಸಿಕ್ಕಿದ್ದೇನು?

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ನಿನ್ನೆ ಮುಂಜಾನೆ 5 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಮಧ್ಯರಾತ್ರಿ 12.45ಕ್ಕೆ ದಾಳಿ ಅಂತ್ಯಗೊಳಿಸಿದ್ದಾರೆ. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿದೆ. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇಡಿ ದಾಳಿ, ಸಿಕ್ಕಿಂನಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ?

ಇನ್ನು ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್​ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು ಮತ್ತು ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳನ್ನು ಕೆ.ಸಿ.ವೀರೇಂದ್ರ ಪಪ್ಪಿ ಹೊಂದಿದ್ದರು.

ಶಾಸಕ ಇಂದು ರಾತ್ರಿ ಬೆಂಗಳೂರಿಗೆ 

ವ್ಯವಹಾರ ಸಂಬಂಧ ಜಾಗ ಭೋಗ್ಯ ಪಡೆಯಲು ಸಿಕ್ಕಿಂನಾ ಗ್ಯಾಂಗ್ಟಕ್​ಗೆ ಹೋಗುವಾಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಬಂಧನವಾಗಿದ್ದು, ಸಿಕ್ಕಿಂ ನ್ಯಾಯಾಲಯಕ್ಕೆ ಹಾಜರು ಪಡಿಸಿ ಟ್ರಾನ್ಸಿಟ್ ವಾರೆಂಟ್ ಮೇಲೆ ಇಂದು ರಾತ್ರಿ ಬೆಂಗಳೂರಿಗೆ ಇಡಿ ಅಧಿಕಾರಿಗಳು ಕರೆತರಲಿದ್ದಾರೆ.

ಇದನ್ನೂ ಓದಿ: ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗದಲ್ಲಿ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಮನೆ ಮೇಲೆ ಇ.ಡಿ ದಾಳಿ

ಸಿಕ್ಕಿಂನಿಂದ 11 ಗಂಟೆಯ ಅಕಾಸಾ ಏರ್ ವಿಮಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಅಲ್ಲಿಂದ ನೇರವಾಗಿ ಇಡಿ ಕಛೇರಿಗೆ ಕರೆದುಕೊಂಡು ಹೋಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Sat, 23 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!