ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸರ್ಕಾರಕ್ಕೆ ಶಾಸಕರ ತಂಡ ಮನವಿ

ಬೆಂಗಳೂರಿಗೆ ಈಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅವಶ್ಯವಾಗಿದೆ. ಬೆಂಗಳೂರು ದಿನದಿಂದ ದಿನಕ್ಕೆ ಬೆಳೆಯುತ್ತಿದೆ, ಹೀಗಾಗಿ ಇನ್ನೊಂದು ವಿಮಾನ ನಿಲ್ದಾಣ ಅವಶ್ಯಕವಾಗಿದ್ದು, ಇದಕ್ಕೆ ಸರ್ಕಾರ ಸ್ಥಳ ಹುಡುಕಾಟದಲ್ಲಿದೆ. ಈಗಾಗಲೇ ಡಿಕೆ ಶಿವಕುಮಾರ್ ಮತ್ತು ಸಚಿವ ಎಂಬಿ ಪಾಟೀಲ್ ಸಭೆಗಳನ್ನು ಮಾಡಿದ್ದು, ಮೂರ್ನಾಲ್ಕು ಸ್ಥಳಗಳನ್ನು ಗುರುತಿಸಿದ್ದಾರೆ. ಆದ್ರೆ, ಬೆಂಗಳೂರು ದಕ್ಷಿಣದಲ್ಲೇ ನಿರ್ಮಿಸಬೇಕೆಂದು ಆ ಭಾಗದ ಶಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸರ್ಕಾರಕ್ಕೆ ಶಾಸಕರ ತಂಡ ಮನವಿ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Oct 22, 2024 | 10:34 PM

ಬೆಂಗಳೂರು, (ಅಕ್ಟೋಬರ್ 22): ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರತನಿಧಿಗಳ ತಂಡವು ಮನವಿ ಮಾಡಿದೆ.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ .

ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಾ? ಎಂಬಿ ಪಾಟೀಲ್ ಹೇಳಿದ್ದಿಷ್ಟು

ರಾಮನಗರ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್, ಮಾಗಡಿ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಮಳವಳ್ಳಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಮದ್ದೂರು ಶಾಸಕರಾದ ಕೆ.ಎಂ. ಉದಯ್‌, ಮಂಡ್ಯ ಶಾಸಕರಾದ ಪಿ.ರವಿಕುಮಾರ್, ಆನೇಕಲ್‌ ಶಾಸಕರಾದ ಶಿವಣ್ಣ, ನೆಲಮಂಗಲ ಶಾಸಕರಾದ ಎನ್.ಶ್ರೀನಿವಾಸ್, ವಿಧಾನ ಪರಿಷತ್‌ ಶಾಸಕರುಗಳಾದ ಎಸ್.ರವಿ, ದಿನೇಶ್ ಗೂಳಿಗೌಡ, ಪುಟ್ಟಣ್ಣ ಹಾಗೂ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) ಅವರ ತಂಡವು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ಒತ್ತಾಯಿಸಿದ್ದಾರೆ.

ಮನವಿ ಪತ್ರದಲ್ಲೇನಿದೆ?

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ವಿಮಾನ ದಟ್ಟಣೆ ದಿನೇದಿನೇ ಹೆಚ್ಚಾಗುತ್ತಿದೆ. ಈ ಕಾರಣದಿಂದ ಬೆಂಗಳೂರು ನಗರದ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಅವಶ್ಯಕತೆಯಿದ್ದು ಈ ಸಂಬಂಧ ಈಗಾಗಲೇ ಜಾಗ ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ.

ಬೆಂಗಳೂರಿನ ಉತ್ತರ ಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚರಿಸುವ ಪ್ರಯಾಣಿಕರ ಪೈಕಿ ಅರ್ಧದಷ್ಟು ಪ್ರಯಾಣಿಕರು ದಕ್ಷಿಣ ಭಾಗದವರೇ ಆಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಬನ್ನೇರುಘಟ್ಟ ರಸ್ತೆ, ಜಯನಗರ, ಜೆ.ಪಿ.ನಗರ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವುದರಿಂದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ ಪ್ರಯಾಣಿಕರ ಸಂಚಾರಕ್ಕಾಗಿ ಮೆಟ್ರೋ ಸಂಪರ್ಕವಿದೆ. ಎಲೆಕ್ಟ್ರಾನಿಕ್ ಸಿಟಿ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆ, ಮೈಸೂರು ರಸ್ತೆಗೆ ಮೆಟ್ರೋ ಸಂಪರ್ಕ ಕಲ್ಪಿಸಿರುವುದರ ಜೊತೆಗೆ ನೈಸ್ ರಸ್ತೆಯಂತಹ ಹೊರವಲಯದ ರಸ್ತೆ ಕೂಡ ಇರುವುದರಿಂದ ಸಂಚಾರ ದಟ್ಟಣೆ ಕಿರಿಕಿರಿಯನ್ನು ತಪ್ಪಿಸಬಹುದಾಗಿದೆ.

ಈ ಭಾಗದಲ್ಲಿ ಕಾವೇರಿ, ಅರ್ಕಾವತಿ ನದಿ ಜೊತೆಗೆ ಕಣ್ವ, ಮಂಚನಬೆಲೆ, ಜಲಾಶಯಗಳಿರುವುದರಿಂದ ಈ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರುವುದಿಲ್ಲ. ಇದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗದ ಭೂಪ್ರದೇಶ ಸಮತಟ್ಟಗಾಗಿದೆ. ರನ್ ವೇ ನಿರ್ಮಾಣಕ್ಕೆ ಕನಿಷ್ಠ 3-5 ಕಿ.ಮೀ.ನಷ್ಟು ಉದ್ದದ ಸಮತಟ್ಟು ಭೂಮಿಯ ಅವಶ್ಯಕತೆ ಇರುವುದರಿಂದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬೆಂಗಳೂರು ದಕ್ಷಿಣ ಭಾಗ ಸೂಕ್ತ ಪ್ರದೇಶವಾಗಿದೆ.

ಬೆಂಗಳೂರು ನಗರದ ನಂತರದಲ್ಲಿ ಎರಡನೇ ಐಟಿ ನಗರವಾಗಿ ಮೈಸೂರು ನಗರ ಹೊರಹೊಮ್ಮುತ್ತಿದೆ. ವಿಶ್ವದ ನಾನಾ ಭಾಗಗಳಿಂದ ಪ್ರವಾಸಿಗರನ್ನು ಸೆಳೆಯುತ್ತಿರುವ ಮೈಸೂರಿಗೆ ಬೆಂಗಳೂರಿನಿಂದ ಸಂಚರಿಸುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಪ್ರಯಾಣಿಕರ ಸಂಚಾರಕ್ಕೆ ವರದಾನವಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿ ನಿರ್ಮಾಣದ ನಂತರ ರಾಮನಗರ, ಚನ್ನಪಟ್ಟಣ, ಮದ್ದೂರು ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ.

ಕಾವೇರಿ ನದಿ ತಪ್ಪಲಿನ ಈ ಭಾಗದಲ್ಲಿ ನೀರಿನ ಸೌಕರ್ಯ ಕೂಡ ಚೆನ್ನಾಗಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಬಿಡದಿ ಕೈಗಾರಿಕಾ ಪ್ರದೇಶವಿದ್ದು ಟೊಯೋಟಾ ಕಿರ್ಲೋಸ್ಕರ್ ನಂತಹ ಕಾರು ತಯಾರಿಕಾ ಕಂಪನಿ ಜೊತೆಗೆ ನಾನಾ ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ಬಿಡದಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿದೆ. ಶಿಕ್ಷಣ ಸಂಸ್ಥೆಗಳು, ಹೈಟೆಕ್ ಆಸ್ಪತ್ರೆ, ಸ್ಟಾರ್ ಹೋಟೆಲ್, ರೆಸಾರ್ಟ್ ಗಳನ್ನು ಒಳಗೊಂಡಿರುವ ಬೆಂಗಳೂರು ದಕ್ಷಿಣ ಭಾಗದಲ್ಲಿ ಸುಸಜ್ಜಿತ ರಸ್ತೆ ಸೇರಿದಂತೆ ಎಲ್ಲಾ ರೀತಿಯ ಮೂಲಸೌಕರ್ಯವನ್ನು ಕೂಡ ಒಳಗೊಂಡಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಕೂಡ ಬಿಡದಿಗೆ ಹೊಂದಿಕೊಂಡಿರುವುದರಿಂದ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೈಸೂರು ರಸ್ತೆಯಲ್ಲಿ ಮಾಡಿದರೆ ಸೂಕ್ತವಾಗಿರಲಿದೆ.

ಯಾವುದೇ ಸಂಚಾರ ದಟ್ಟಣೆ ಇಲ್ಲದ ಮೈಸೂರು ರಸ್ತೆಯಲ್ಲಿ ಅಗತ್ಯವಾದ ಭೂಮಿ ಜೊತೆಗೆ ಉತ್ತಮ ವಾತಾವರಣವಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದಲ್ಲಿ ಈ ಭಾಗದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವುದರ ಜೊತೆಗೆ ಉದ್ಯೋಗ ಸೃಷ್ಟಿಯಾಗಲಿದೆ.

ಮಾತ್ರವಲ್ಲದೆ ಮುಂಬೈ ನಂತರದಲ್ಲಿ ಪುಣೆ ಹೇಗೆ ವಾಣಿಜ್ಯ ನಗರಿಯಾಗಿ ಮಾರ್ಪಟಿತ್ತೋ ಅದೇ ಮಾದರಿಯಲ್ಲಿ ಬೆಂಗಳೂರು ನಂತರದಲ್ಲಿ ಮೈಸೂರು ಕೂಡ ವಾಣಿಜ್ಯ ನಗರಿಯಾಗಿ ಹೊರಹೊಮ್ಮಲು ಸಹಕಾರಿಯಾಗಲಿದೆ. ಇದರ ಜೊತೆಗೆ ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಭಾಗದ ಪ್ರವಾಸಿ ಸ್ಥಳಗಳಿಗೆ ಆಗಮಿಸುವರ ಪ್ರವಾಸಿಗರ ಸಂಖ್ಯೆ ಕೂಡ ಮತ್ತಷ್ಟು ಹೆಚ್ಚಾಗಲಿದ್ದು ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ.

ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ತುಮಕೂರು ರಸ್ತೆಗಿಂತ ಮೈಸೂರು ರಸ್ತೆಯ ಸಂಚಾರ ದಟ್ಟಣೆ ತೀರ ವಿರಳ. ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಮೈಸೂರು ರಸ್ತೆಯ ಸಂಚಾರ ದಟ್ಟಣೆ ಇಳಿಮುಖವಾಗಿದೆ. ಹೀಗಾಗಿ ಈ ಮೇಲಿನ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಬೇಕು. ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದು ಸೂಕ್ತವೆಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಹಾಗೂ ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕೆಂದು ಈ ಮೂಲಕ ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ