Karnataka Politics: ಮನೆಗೆ ಬರುವ ಸೊಸೆಗೆ ನೀನು ಹೊಸದಾಗಿ ಬಂದವಳು ಅನ್ನೋಕಾಗುತ್ತಾ?: ಎಂಎಲ್​ಸಿ ಸಿ.ಎಂ.ಇಬ್ರಾಹಿಂ ಪ್ರಶ್ನೆ

ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್‌ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್‌ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.

Karnataka Politics: ಮನೆಗೆ ಬರುವ ಸೊಸೆಗೆ ನೀನು ಹೊಸದಾಗಿ ಬಂದವಳು ಅನ್ನೋಕಾಗುತ್ತಾ?: ಎಂಎಲ್​ಸಿ ಸಿ.ಎಂ.ಇಬ್ರಾಹಿಂ ಪ್ರಶ್ನೆ
ಸಿ.ಎಂ.ಇಬ್ರಾಹಿಂ
Follow us
TV9 Web
| Updated By: guruganesh bhat

Updated on: Jun 26, 2021 | 5:24 PM

ಬೆಂಗಳೂರು: ಮದುವೆಯಾಗಿ ಮನೆಗೆ ಬರುವ ಸೊಸೆ ಹೊಸದಾಗಿಯೇ ಬರೋದು, ಸೊಸೆಗೆ ನೀನು ವಲಸೆ ಬಂದವಳು ಅಂತ ಹೇಳೋಕಾಗುತ್ತಾ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ. ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಪೈಪೋಟಿಯ ಬಗ್ಗೆಯೇ ಅವರು ಈ ಪ್ರತಿಕ್ರಿಯೆ ನೀಡಿರುವುದು. ‘ಸೊಸೆ ಬಂದು ಕೆಲವು ದಿನಕ್ಕೆ ಕೀಲಿಕೈ ಅವಳ ಕೈಗೆ ಸೇರುತ್ತದೆ. ಈಗ ಸಿದ್ದರಾಮಯ್ಯ ಕೈಗೆ ಕೀಲಿಕೈ ಸಿಕ್ಕಿದೆ. ವಲಸಿಗ ಹೊಸಬ ಎಂಬ ಜಟಾಪಟಿ ಮುಂದೆ ನಡೆಯಲ್ಲ. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಅವರನ್ನ ಮುಂದೆ ತಂದಿದ್ಯಾರು?. ಇಂಥವನೊಬ್ಬ ಇದ್ದಾನೆ ಎಂದು ಹೇಳಿದ್ದೇ ನಾವು’ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಂತ ಹೇಳಿದ್ಯಾರು? ಅವರು ಹೀರೋ ಇದ್ದರೂ ಹಿನ್ನೆಲೆ ಗಾಯಕರು ಯಾರು? ಸ್ವಲ್ಪ ಕ್ಯಾಸೆಟ್ ತೆಗೆದು ನೋಡಿ, ಹಿನ್ನೆಲೆ ಗಾಯಕ ಕಾಣಿಸಲ್ಲ. 1ರೂ.ಗೆ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ಆ ಯೋಜನೆಯನ್ನು ತಮಿಳುನಾಡಿನಲ್ಲಿ ಕುಳಿತು ಅಧ್ಯಯನ ಮಾಡಿ ನಾನು ಪರಿಚಯಿಸಿದ್ದೆ. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆ ಕೊಟ್ಟಿದ್ದೆ. ಆ ಯೋಜನೆ ಸಕ್ಸಸ್ ಆಯಿತು ಎಂದು ಅವರು ಸುದ್ದಿಗಾರರಿಗೆ ವಿವರಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್‌ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್‌ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.

ಮೊದಲು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಬಳಿಕ ಶಾಸಕರ ಅಭಿಪ್ರಾಯ ಪಡೆದು ಮುಂದಿನ ಸಿಎಂ ಯಾರು ಎಂಬುದು ತೀರ್ಮಾನವಾಗಬೇಕು. ರಾಷ್ಟ್ರೀಯ ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಶೇಕಡಾ 90ರಷ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಾಗಿ ಈಗಲೇ ಏನೂ ಹೇಳೋಕೆ ಆಗುವುದಿಲ್ಲ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಚೇತನ್​ Vs ಶಿವರಾಮ್​ ಹೆಬ್ಬಾರ್​ ಜಟಾಪಟಿ; ಸಚಿವರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ​

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

(MLC CM Ibrahim analysis Karnataka Politics Congress leadership fight in Bengaluru)

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ