ಬೆಂಗಳೂರು: ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾ ರೆ. ಜೂನ್ 15ರಂದು ಮತ ಎಣಿಕೆ ನಡೆಯಲಿದೆ.
ಕ್ಷೇತ್ರವಾರು ಕೇಂದ್ರಗಳು:
ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರಗಳು
ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆ
ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಜಿಲ್ಲೆಗಳು
ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆ
ದಕ್ಷಿಣ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಜಿಲ್ಲೆಗಳು
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆ
ಇದನ್ನೂ ಓದಿ: ಪಂಜಾಬಿ ಗಾಯಕ ಮೂಸೆವಾಲಾ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಾರಿ ಮತದಾನ ಮಾಡಲು ಒಂದು ಗಂಟೆ ಅವಧಿ ವಿಸ್ತರಣೆ ಮಾಡಲಾಗಿದೆ. ಮತದಾನ ಮಾಡಲು ಅನುಕೂಲವಾಗುವಂತೆ ಇಂದು ಸರ್ಕಾರಿ ರಜೆ ನೀಡಲಾಗಿದೆ. 1,41,961 ಮತದಾರರು, 82,505 ಪುರುಷರು, 59,432 ಮಹಿಳೆಯರು 24 ಇತರೆ ಮತದಾರರು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಸೇರಿ ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 150 ಮತಗಟ್ಟೆಗಳನ್ನು ತೆರೆಯಲಾಗಿದೆ. ಹಾಸನ ಜಿಲ್ಲೆಯಲ್ಲಿ 27, ಮಂಡ್ಯದಲ್ಲಿ 45, ಮೈಸೂರು ಜಿಲ್ಲೆಯಲ್ಲಿ 66, ಚಾಮರಾಜನಗರ ಜಿಲ್ಲೆಯಲ್ಲಿ 12, ನಾಲ್ಕು ಜಿಲ್ಲೆಯಿಂದ 68 ಸೂಕ್ಷ್ಮ, 17 ಅತಿಸೂಕ್ಷ್ಮ ಮತಗಟ್ಟೆ ತೆರೆಯಲಾಗಿದೆ. ಹಾಸನ ಜಿಲ್ಲೆಯಲ್ಲಿ 2 ಅತಿ ಸೂಕ್ಷ್ಮ, ಮಂಡ್ಯ ಜಿಲ್ಲೆಯಲ್ಲಿ 13, ಮೈಸೂರು ಜಿಲ್ಲೆಯಲ್ಲಿ 2 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ತೆರೆಯಲಾಗಿದೆ.
ಮತಗಟ್ಟೆ ಸುತ್ತಮುತ್ತ ಸೂಕ್ತ ಪೊಲೀಸ್ ಬಂದೋಬಸ್ತ್
ಬೆಳಗಾವಿ: ಮತದಾನ ಹಿನ್ನೆಲೆ ಮೂರು ಜಿಲ್ಲೆ ವ್ಯಾಪ್ತಿ ಹೊಂದಿರುವ ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರ. ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ವ್ಯಾಪ್ತಿಯನ್ನು ವಾಯವ್ಯ ಕ್ಷೇತ್ರ ಹೊಂದಿದೆ. ಪದವೀಧರ ಕ್ಷೇತ್ರದಲ್ಲಿ ಹಕ್ಕು ಚಲಾಯಿಸಲಿರುವ 99,598 ಮತದಾರರು. ವಾಯವ್ಯ ಶಿಕ್ಷಕ ಕ್ಷೇತ್ರದಲ್ಲಿ ಒಟ್ಟು ಮತದಾರರು 25,388. ಬೆಳಗಾವಿ ಜಿಲ್ಲೆಯಲ್ಲಿ 95 ಮತಗಟ್ಟೆಗಳನ್ನ ನಿರ್ಮಿಸಲಾಗಿದೆ. ಬಾಗಲಕೋಟ ಜಿಲ್ಲೆಯಲ್ಲಿ 48, ವಿಜಯಪುರ ಜಿಲ್ಲೆಯಲ್ಲಿ 47 ಸೇರಿ ಒಟ್ಟು 190ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ 11ಜನ ಅಭ್ಯರ್ಥಿಗಳು ಕಣದಲ್ಲಿದ್ದರೆ, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ 12ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಂದು ಗಂಟೆ ಹೆಚ್ಚುವರಿಯಾಗಿ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದ್ದು, ಮತದಾನ ಹಿನ್ನೆಲೆ ಮತಗಟ್ಟೆ ಸುತ್ತಮುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.