AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ ಪದಕ ಕಳವು

ಬೆಂಗಳೂರಿನ ಇಂದಿರಾನಗರದಲ್ಲಿ ಹಾಕಿ ದಂತಕಥೆ ಎಂ.ಎಂ.ಸೋಮಯ್ಯ ಅವರ ಮನೆ ಕಳ್ಳತನವಾಗಿದೆ. 1980ರ ಮಾಸ್ಕೋ ಒಲಿಂಪಿಕ್ಸ್ ಚಿನ್ನದ ಪದಕ ಸೇರಿದಂತೆ ಹಲವಾರು ಐತಿಹಾಸಿಕ ಪದಕಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ದುಷ್ಕರ್ಮಿಗಳು ದೋಚಿದ್ದಾರೆ. ಸಿ.ಸಿ.ಟಿ.ವಿ ದೃಶ್ಯಾವಳಿಗಳಲ್ಲಿ ಕಳ್ಳರು ಸೆರೆಯಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಳ್ಳರನ್ನು ಶೀಘ್ರವೇ ಬಂಧಿಸಿ ಪದಕಗಳನ್ನು ಮರಳಿ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಹಾಕಿ ದಿಗ್ಗಜ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ ಪದಕ ಕಳವು
ಎಂ.ಎಂ.ಸೋಮಯ್ಯ, Image Credit source: social Media
ಅಕ್ಷಯ್​ ಪಲ್ಲಮಜಲು​​
|

Updated on:Nov 04, 2026 | 5:13 PM

Share

ಬೆಂಗಳೂರು, ನ.4: ರಾಜಧಾನಿ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನದ ಘಟನೆಯೊಂದು ನಡೆದಿದೆ. ಭಾರತೀಯ ಹಾಕಿ ತಂಡದ ದಿಗ್ಗಜ ಆಟಗಾರ ಹಾಗೂ ಒಲಿಂಪಿಕ್ ಚಿನ್ನದ ಪದಕ ವಿಜೇತ ಎಂ.ಎಂ. ಸೋಮಯ್ಯ (MM Somaya) ಅವರ ಮನೆಯ ಬೀಗ ಮುರಿದಿರುವ ದುಷ್ಕರ್ಮಿಗಳು, ಕೋಟ್ಯಂತರ ಅಭಿಮಾನಿಗಳ ಹೆಮ್ಮೆಯ ಸಂಕೇತವಾಗಿದ್ದ 1980ರ ಮಾಸ್ಕೋ ಒಲಿಂಪಿಕ್ಸ್‌ನ ಐತಿಹಾಸಿಕ ಚಿನ್ನದ ಪದಕ ಸೇರಿದಂತೆ ಹಲವು ಅಮೂಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಎಂ.ಎಂ. ಸೋಮಯ್ಯ ಅವರು ತಮ್ಮ ಕುಟುಂಬದೊಂದಿಗೆ ಅಕ್ಟೋಬರ್ 25 ರಿಂದ ಅಕ್ಟೋಬರ್ 28 ರ ನಡುವೆ ಕೊಡಗಿನ ತಮ್ಮ ಸ್ವಗ್ರಾಮಕ್ಕೆ ತೆರಳಿದ್ದಾಗ ಈ ಕಳವು ಆಗಿದೆ.

ಸೋಮಯ್ಯ ಅವರು ಅಕ್ಟೋಬರ್ 25 ರಂದು ಸಂಜೆ ಸುಮಾರು 5 ಗಂಟೆಗೆ ನ್ಯೂ ತಿಪ್ಪಸಂದ್ರದಲ್ಲಿರುವ ತಮ್ಮ ನಿವಾಸಕ್ಕೆ ಬೀಗ ಹಾಕಿ ಕೊಡಗಿಗೆ ತೆರಳಿದ್ದರು. ಅಕ್ಟೋಬರ್ 28 ರಂದು ಬೆಳಿಗ್ಗೆ 7.15 ರ ಸುಮಾರಿಗೆ ವಾಪಸ್ ಮನೆಗೆ ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ದುಷ್ಕರ್ಮಿಗಳು ಸೋಮಯ್ಯ ಅವರ ಭಾರತೀಯ ಹಾಕಿ ಜೀವನದ ಸ್ಮರಣೀಯ ಸಾಧನೆಗಳಾಗಿದ್ದ ಅತ್ಯಮೂಲ್ಯ ಅಂತರರಾಷ್ಟ್ರೀಯ ಪದಕಗಳನ್ನು ಕದ್ದು ಒಯ್ದಿದ್ದಾರೆ. 1980 ಮಾಸ್ಕೋ ಒಲಿಂಪಿಕ್ಸ್​​ನಲ್ಲಿ ಭಾರತ ತಂಡ ಗೆದ್ದಿದ್ದ ಐತಿಹಾಸಿಕ ಚಿನ್ನದ ಪದಕ. 1982 ನವದೆಹಲಿ ಏಷ್ಯನ್ ಗೇಮ್ಸ್​​ನಲ್ಲಿ ಭಾರತೀಯ ತಂಡ ಪ್ರತಿನಿಧಿಸಿ ಗೆದ್ದ ಬೆಳ್ಳಿ ಪದಕ. 1986 ಸಿಯೋಲ್ ಏಷ್ಯನ್ ಗೇಮ್ಸ್​​​ನಲ್ಲಿ ಪಡೆದುಕೊಂಡಿದ್ದ ಕಂಚಿನ ಪದಕ. 1982 ಆಮ್‌ಸ್ಟರ್‌ಡ್ಯಾಮ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆದ್ದುಕೊಂಡಿದ್ದ ಕಂಚಿನ ಪದಕ ಕಳವು ಆಗಿದೆ.

ಇದನ್ನೂ ಓದಿ: ಮಂಗಳೂರು, ಉಡುಪಿ ಬಸ್​​ ದರ ಏರಿಕೆ ಜತೆಗೆ ಮತ್ತೊಂದು ಬಿಗ್​ ಶಾಕ್: ಈ ದೀಪಾವಳಿಗೆ ಎಲ್ಲವೂ ದುಬಾರಿ

ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಸೆರೆ:

ಪೊಲೀಸ್ ಎಫ್‌ಐಆರ್ ಹಾಗೂ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಪ್ರಕಾರ,ಎಂ.ಎಂ. ಸೋಮಯ್ಯ ಅವರು ಕುಟುಂಬ ಸಮೇತ ಹೆಚ್‌ಎಎಲ್ 3ನೇ ಹಂತದಲ್ಲಿರುವ ತಮ್ಮ ನಿವಾಸಕ್ಕೆ ಬೀಗ ಹಾಕಿ ಕೊಡಗಿಗೆ ತೆರಳಿದ್ದರು. ಅಕ್ಟೋಬರ್ 28 ರಂದು ಬೆಳಿಗ್ಗೆ ಸುಮಾರು 7.15 ಕ್ಕೆ ಸೋಮಯ್ಯ ಅವರ ನೆರೆಯ ನಿವಾಸಿ ನಾರಾಯಣನ್ ಎಂಬುವರು ಮನೆಯ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ, ಕಳ್ಳತನವಾಗಿರುವ ಶಂಕೆ ವ್ಯಕ್ತಪಡಿಸಿ ಸೋಮಯ್ಯ ಅವರಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ರೆಮನೆಯ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ, ಅಕ್ಟೋಬರ್ 28 ರಂದು ನಸುಕಿನ 2.34 ರ ಸುಮಾರಿಗೆ ಇಬ್ಬರು ದುಷ್ಕರ್ಮಿಗಳು ಬಾಗಿಲು ಮುರಿದು ಒಳನುಗ್ಗಿರುವುದು ಪತ್ತೆಯಾಗಿದೆ. ಓರ್ವ ಆರೋಪಿ ನೀಲಿ ಶರ್ಟ್ ಹಾಗೂ ಮತ್ತೋರ್ವ ಕೆಂಪು ಶರ್ಟ್ ಧರಿಸಿರುವುದು ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಅಪರೂಪದ ಪದಕಗಳ ಜೊತೆಗೆ, ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಇತರ ವಸ್ತುಗಳನ್ನೂ ಎಗರಿಸಿದ್ದಾರೆ. 10 ಗ್ರಾಂ ತೂಕದ ಚಿನ್ನದ ಬಳೆ, 10 ಗ್ರಾಂ ತೂಕದ ಚಿನ್ನದ ಬಳೆ, 144 ಗ್ರಾಂ ತೂಕದ ಎರಡು ಬೆಳ್ಳಿಯ ಕಪ್‌ಗಳು ಹಾಗೂ 6 ಬೆಳ್ಳಿಯ ಚಮಚಗಳು, 80 ಗ್ರಾಂ ತೂಕದ ಬೆಳ್ಳಿಯ ಬಿಂದಿಗೆ/ಪಾತ್ರೆ, 30 ಸಾವಿರ ರೂ. ಕಳವು ಮಾಡಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರನ್ನು ಬಂಧಿಸಲು ಎರಡು ಪ್ರತ್ಯೇಕ ವಿಶೇಷ ಪಡೆಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ, ಪದಕಗಳನ್ನು ವಶಪಡಿಸಿಕೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Wed, 4 November 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?