Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ ಮಾಹಿತಿ

ಬೆಂಗಳೂರಿನ ಹೊಸ ಮೊಬೈಲ್ ಉತ್ಪಾದನಾ ಕಂಪನಿಯಿಂದ 40,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಕರ್ನಾಟಕ ರೈಲ್ವೆಗೆ 7,564 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಉತ್ಪಾದನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ರೈಲ್ವೇ ಅಭಿವೃದ್ಧಿ, ಮೆಟ್ರೋ ಯೋಜನೆಗಳಿಗೂ ಸಾಕಷ್ಟು ಅನುದಾನ ಮೀಸಲಿಡಲಾಗಿದೆ.

ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ ಮಾಹಿತಿ
Ashwini Vaishnaw
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 15, 2025 | 4:19 PM

ಬೆಂಗಳೂರು, ಫೆಬ್ರವರಿ 15: ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಶುರುವಾಗಲಿದ್ದು, 40 ಸಾವಿರ ಉದ್ಯೋಗ ಸೃಷ್ಟಿಯಾಗುವ ಗುರಿ ಇದೆ. ಮುಂದಿನ ಸಲ ಬಂದಾಗ ನಾನು ಈ ಕಂಪನಿಗೆ ಭೇಟಿ ಕೊಡುತ್ತೇನೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮಾಹಿತಿ ನೀಡಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಿದೆ. ಉದ್ಯೋಗ ಸೃಷ್ಟಿಯಾಗುವುದೇ ಉತ್ಪಾದನಾ ವಲಯದಿಂದ. ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಫೂಟ್‌‌ವೇರ್ ಉತ್ಪಾದಕ ವಲಯಗಳಿಗೆ ಬಜೆಟ್ ಪುಷ್ಟಿ ನೀಡಿದೆ ಎಂದಿದ್ದಾರೆ.

ಕರ್ನಾಟಕ ರೈಲ್ವೇಗೆ 7,564 ಕೋಟಿ ರೂ. ಅನುದಾನ

ಕರ್ನಾಟಕ ರೈಲ್ವೇಗೆ 7,564 ಕೋಟಿ ರೂ. ಅನುದಾನ ಕೊಡಲಾಗಿದೆ. ಯುಪಿಎ ಅವಧಿಯಲ್ಲಿ 850 ಕೋಟಿ ರೂ.‌ ಕೊಡಲಾಗುತ್ತಿತ್ತು. 51,479 ಕೋಟಿಯಷ್ಟು ರೈಲ್ವೇ ವಲಯದಲ್ಲಿ ಬಂಡವಾಳ ಹೂಡಲಾಗಿದೆ. ಅಮೃತ್ ಸ್ಟೇಷನ್ ಯೋಜನೆಯಡಿ 61 ರೈಲ್ವೇ ನಿಲ್ದಾಣಗಳ ಮರು ನಿರ್ಮಾಣ ಆಗಿದೆ. 1,652 ಕಿ.ಮೀ. ಹೊಸ ರೈಲ್ವೇ ಮಾರ್ಗದ ನಿರ್ಮಾಣ ರಾಜ್ಯದಲ್ಲಾಗಿದೆ. 10 ವಂದೇ ಭಾರತ್ ರೈಲುಗಳು ಕರ್ನಾಟಕದಲ್ಲಿ ಸಂಚರಿಸುತ್ತಿವೆ, ಮತ್ತಷ್ಟು ಬರಲಿವೆ. ಸಬ್ ಅರ್ಬನ್ ರೈಲ್ವೇ ಯೋಜನೆಗೆ 15,762 ಕೋಟಿ ರೂ. ಕೊಡಲಾಗಿದೆ. 15,611 ಕೋಟಿ ರೂ. ಮೆಟ್ರೋಗೆ ಕೊಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್

ಕಳೆದ 60 ವರ್ಷದಲ್ಲಿ ಆಗದಿರುವ ಕೆಲಸ ಪ್ರಧಾನಿ ಮೋದಿ ಅವಧಿಯಲ್ಲಾಗಿದೆ. ಒಂದು ಮತ್ತು ಎರಡನೇ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯ‌ ದೇಶದ ಯಾವ ಭಾಗಕ್ಕೆ ಹೋದರೂ ಕಾಣುತ್ತದೆ. 12 ಲಕ್ಷದವರೆಗೆ ತೆರಿಗೆ ಇಲ್ಲದಿರುವುದು ಐಐಎಂ, ಐಐಟಿ ಇದೆಲ್ಲಾ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ವಾಜಪೇಯಿ ಅವಧಿ ಬಳಿಕ ಯುಪಿಎ ಅವಧಿಯಲ್ಲಿ ಭಾರತದ ಆರ್ಥಿಕತೆ ಬಹಳ ಕೆಟ್ಟ ಸ್ವರೂಪದಲ್ಲಿ ಇತ್ತು. 2014 ರಲ್ಲಿ ಬ್ಯಾಂಕಿಂಗ್ ವಲಯ ಅಷ್ಟು ಉತ್ತಮವಾಗಿರಲಿಲ್ಲ. ಪ್ರಧಾನಿ ಮೋದಿ ಅದಕ್ಕೊಂದು ಆಯಾಮ ನೀಡಿದರು. ಪ್ರತಿ ವರ್ಷ ಹೈವೇ, ರೈಲ್ವೇ, ಏರ್ ಪೋರ್ಟ್ ಅಭಿವೃದ್ಧಿ ಆಯಿತು ಎಂದು ತಿಳಿದ್ದಾರೆ.

ಕೇಂದ್ರ ಸರ್ಕಾರದ ಆಡಳಿತಕ್ಕೆ ಜನ ಮೆಚ್ಚುಗೆ ದೊಡ್ಡದಾಗಿಯೇ ಸಿಗುತ್ತಿದೆ. ಮೋದಿ ದೂರದೃಷ್ಟಿ ಯೋಜನೆಗಳಿಗೆ ಜನರ ಬೆಂಬಲ ಸಿಕ್ಕಿದೆ. ಜನಧನ್, ಉಜ್ವಲಾ, ಜಲಜೀವನ್ ಯೋಜನೆಗಳು ಜನರ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿವೆ. ಮೂಲಸೌಕರ್ಯ ವೃದ್ಧಿ, ಶಿಕ್ಷಣ ಅಭಿವೃದ್ಧಿ, ರೈಲ್ವೇ ಯೋಜನೆಗಳು ಜನರ ಬದುಕಿನ ಗತಿ ಬದಲಿಸಿವೆ ಎಂದರು.

ಹಣದುಬ್ಬರಕ್ಕೆ ಕಡಿವಾಣ

ಈ ಬಾರಿಯ ಬಜೆಟ್​ನ ಬಹು‌ ಮುಖ್ಯ ಅಂಶ ತೆರಿಗೆ ಸುಧಾರಣೆ. ಪ್ರಧಾನಿ ಮೋದಿ ಆರ್ಥಿಕ ಚಿಂತನೆಗಳು ಸಾಕಷ್ಟು ಬದಲಾವಣೆ ತಂದಿದೆ. ಹತ್ತು ವರ್ಷಗಳ ಹಿಂದೆ ಕಾಲ್ ಡ್ರಾಪ್ ಆಗುವುದು ದೊಡ್ಡ ಚರ್ಚೆ ಆಗುತ್ತಿತ್ತು. ಈಗ ನಮಗೆ ಉತ್ತಮ 5ಜಿ ನೆಟ್ ವರ್ಕ್ ಇದೆ. ಕಳೆದ ಹತ್ತು ವರ್ಷದಿಂದ ವಿವಿಗಳು, ಐಐಎಂ, ಐಐಟಿ, ಮೆಡಿಕಲ್ ಕಾಲೇಜುಗಳ ಸಂಖ್ಯೆ ದುಪ್ಪಟ್ಟಾಗಿವೆ. ಬಡ-ಮಧ್ಯಮ ವರ್ಗದ ಮೇಲೆ ಈ ಬಾರಿ ಬಜೆಟ್ ಫೋಕಸ್ ಮಾಡಿದೆ. ಕಿಸಾನ್ ಸಮ್ಮಾನ್ ನಿಧಿಯಂತಹ ರೈತ ಕಲ್ಯಾಣ ಯೋಜನೆಗಳು ಬದಲಾವಣೆಗೆ ಸಾಕ್ಷಿ ಆಗಿವೆ. ಸಣ್ಣ, ಅತಿ ಸಣ್ಣ ಕೈಗಾರಿಕೆಗಳಿಗೆ ದೊಡ್ಡ ನಿರೀಕ್ಷೆ, ಭರವಸೆ ನಮ್ಮ ಸರ್ಕಾರದಿಂದ ಸಿಕ್ಕಿದೆ. ಈಗ ದೇಶ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಸೃಷ್ಟಿಸಿದೆ. ಹಣದುಬ್ಬರಕ್ಕೆ ಕಡಿವಾಣ ಬಿದ್ದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದರ ಏರಿಕೆ: ಮೆಟ್ರೋ ಪ್ರಯಾಣಿಕರ ಪರ್ಯಾಯ ವ್ಯವಸ್ಥೆ, ಬೆಂಗಳೂರಿನಲ್ಲಿ ಶುರುವಾಯ್ತು ಟ್ರಾಫಿಕ್​ ಸಮಸ್ಯೆ

ಮುಂದಿನ ವರ್ಷದ ಹೊತ್ತಿಗೆ ನಮ್ಮ ದೇಶ 356 ಲಕ್ಷ ಕೋಟಿ ಆರ್ಥಿಕತೆ ಹೊಂದಲಿದೆ. ಜಗತ್ತಿನ ಐದನೇ ದೊಡ್ಡ ಆರ್ಥಿಕತೆಯ ದೇಶ ಭಾರತ. ಅಮೆರಿಕ, ಫ್ರಾನ್ಸ್, ಇಂಗ್ಲೆಂಡ್​ಗಳಿಗೆ ಹೋಲಿಸಿದರೆ ನಮ್ಮ ಆರ್ಥಿಕತೆಯ ಆರೋಗ್ಯ ಚೆನ್ನಾಗಿದೆ. ಉತ್ಪಾದನಾ ವಲಯಕ್ಕೂ ಬಜೆಟ್ ಹೆಚ್ಚಿನ ಆದ್ಯತೆ ನೀಡಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ