AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಪ್ರಯೋಜನವಿಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್​ಗಳು ಪತ್ತೆ

ಕಳೆದ 21ರ ರಾತ್ರಿ ಅಧಿಕಾರಿಗಳು ಧೀಡಿರ್ ತಪಾಸಣೆ ನಡೆಸಿದ್ದು ಜೈಲಿನ ಟವರ್ ಒಂದರ ಆರನೇ ಬ್ಯಾರಕ್​ನಲ್ಲಿ ಮೊಬೈಲ್ ಫೋನ್​ಗಳು ಸಿಕ್ಕಿವೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡ್ರು ಜೈಲಿನಲ್ಲಿ ಅಕ್ರಮ ಚಟುವಟಿಕೆ ನಿಲ್ಲುತ್ತಿಲ್ಲ. ಪದೇ ಪದೇ ಮೊಬೈಲ್ ಫೋನ್, ಮಾದಕ ವಸ್ತುಗಳು ಪತ್ತೆಯಾಗುತ್ತಿವೆ.

ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಪ್ರಯೋಜನವಿಲ್ಲ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್​ಗಳು ಪತ್ತೆ
ಪರಪ್ಪನ ಅಗ್ರಹಾರ
ರಾಮು, ಆನೇಕಲ್​
| Edited By: |

Updated on:Jul 24, 2023 | 12:19 PM

Share

ಬೆಂಗಳೂರು, ಜುಲೈ 24: ಆನೇಕಲ್​ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಕೈದಿಗಳಿಗೆ(Parappana Agrahara Jail) ಅಪ್ಪನ ಮನೆಯಂತಾಗಿದೆ. ಎಷ್ಟೇ ಎಚ್ಚರಿಕೆ ವಹಿಸಿದರೂ, ಎಷ್ಟೇ ವಾರ್ನಿಂಗ್ ಕೊಟ್ಟರೂ ಇಲ್ಲಿನ ಪರಿಸ್ಥಿತಿ ಮಾತ್ರ ಬದಲಾಗುತ್ತಿಲ್ಲ. ಕೈದಿಗಳ ಕಳ್ಳಾಟ ನಿಂತಿಲ್ಲ. ಇತ್ತೀಚೆಗಷ್ಟೇ ಉಗ್ರ ನಜೀರ್(T Nazir) ಪರಪ್ಪನ ಆಗ್ರಹಾರದಲ್ಲೇ ಇದ್ದುಕೊಂಡು ಉಗ್ರ ಚಟುವಟಿಕೆಗಳಲ್ಲಿ ಶಾಮೀಲಾಗುವಂತ ಕೈದಿಗಳಿಗೆ ಪ್ರಚೋದನೆ ನೀಡಿದ್ದ ಎಂಬ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೀಗ ಮತ್ತೆ ಜೈಲಿನಲ್ಲಿ ಮೊಬೈಲ್ ಫೋನ್​ಗಳು(Mobiles) ಪತ್ತೆಯಾಗಿವೆ. ಜೈಲಾಧಿಕಾರಿಗಳ ತಪಾಸಣೆ ವೇಳೆ ಕೈದಿಗಳ ಕಳ್ಳಾಟ ಬಯಲಾಗಿದೆ.

ಕಳೆದ 21ರ ರಾತ್ರಿ ಅಧಿಕಾರಿಗಳು ಧೀಡಿರ್ ತಪಾಸಣೆ ನಡೆಸಿದ್ದು ಜೈಲಿನ ಟವರ್ ಒಂದರ ಆರನೇ ಬ್ಯಾರಕ್​ನಲ್ಲಿ ಮೊಬೈಲ್ ಫೋನ್​ಗಳು ಸಿಕ್ಕಿವೆ. ಕೈದಿಗಳು ಶೌಚಾಲಯದಲ್ಲಿ ಮೊಬೈಲ್ ಫೋನ್ ಬಚ್ಚಿಟ್ಟಿದ್ದಾರೆ. ಸದ್ಯ ಜೈಲಾಧಿಕಾರಿಗಳು ಮೂರು ಮೊಬೈಲ್ ಫೋನ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡ್ರು ಜೈಲಿನಲ್ಲಿ ಅಕ್ರಮ ಚಟುವಟಿಕೆ ನಿಲ್ಲುತ್ತಿಲ್ಲ. ಪದೇ ಪದೇ ಮೊಬೈಲ್ ಫೋನ್, ಮಾದಕ ವಸ್ತುಗಳು ಪತ್ತೆಯಾಗುತ್ತಿವೆ. ಸದ್ಯ ಈಗ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮೊಬೈಲ್ ಫೋನ್​ಗಳನ್ನ ಯಾರು ಬಳಕೆ ಮಾಡುತ್ತಿದ್ರು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇನ್ನು ಕೆಲ ದಿನಗಳ ಹಿಂದೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ನೇತೃತ್ವದ ತಂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿತ್ತು. ಸಿಸಿಬಿ ಅಧಿಕಾರಿಗಳಿಂದ ನಗರದಲ್ಲಿ ಶಂಕಿತ ಉಗ್ರರು ಬಂಧಿತರಾದ ಹಿನ್ನೆಲೆಯಲ್ಲಿ ದಾಳಿ ಕೈಗೊಳ್ಳಲಾಗಿತ್ತು. ‌ಬಂಧಿತ ಶಂಕಿತ ಉಗ್ರರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ಮನಪರಿವರ್ತನೆಗೊಂಡು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದ ಎಡಿಜಿಪಿ ನೇತೃತ್ವದ ತಂಡ ಪ್ರತಿ ಬ್ಯಾರಕ್ ಗಳನ್ನು ಪರಿಶೀಲನೆಗೊಳಪಡಿಸಿತ್ತು. ದಾಳಿ ವೇಳೆ ಮಹತ್ವದ ದಾಖಲೆಗಳು ದೊರೆತಿದೆ ಎನ್ನಲಾಗಿದ್ದು ಹಿರಿಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ದಾಳಿ ಬಳಿಕ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಎಚ್ಚರಿಕೆ ಜೊತೆಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿತ್ತು. ಆದ್ರೆ ಈಗ ಮತ್ತೆ ಬ್ಯಾರಕ್​ಗಳಲ್ಲಿ ಫೋನ್​ಗಳು ಪತ್ತೆಯಾಗಿವೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:19 pm, Mon, 24 July 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!