AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ಪೊಲೀಸರ ಸೋಗಿನಲ್ಲಿ ಮೊಬೈಲ್ ಶಾಪ್ ಮಾಲೀಕನ ಕಿಡ್ನಾಪ್: ಐವರು ಆರೋಪಿಗಳ ಬಂಧನ

ಸಿಸಿಬಿ ಪೊಲೀಸರ ಸೋಗಿನಲ್ಲಿ ಮೊಬೈಲ್ ಶಾಪ್ ಮಾಲೀಕನನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸ್ನೇಹಿತರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಪ್ರಕರಣ ಸಂಬಂಧ ವಿಶ್ವೇಶ್ವರಪುರಂ (ವಿ.ವಿಪುರಂ) ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರ ಸೋಗಿನಲ್ಲಿ ಮೊಬೈಲ್ ಶಾಪ್ ಮಾಲೀಕನ ಕಿಡ್ನಾಪ್: ಐವರು ಆರೋಪಿಗಳ ಬಂಧನ
ಸಿಸಿಬಿ ಪೊಲೀಸರ ಸೋಗಿನಲ್ಲಿ ಮೊಬೈಲ್ ಅಂಗಡಿ ಮಾಲೀಕನನ್ನು ಕಿಡ್ನಾಪ್ ಮಾಡಿದ ಐವರು ಆರೋಪಿಗಳನ್ನು ವಿವಿ ಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ
Follow us
Shivaprasad
| Updated By: Rakesh Nayak Manchi

Updated on: Oct 22, 2023 | 4:20 PM

ಬೆಂಗಳೂರು, ಅ.22: ಸಿಸಿಬಿ (CCB) ಪೊಲೀಸರ ಸೋಗಿನಲ್ಲಿ ಮೊಬೈಲ್ ಶಾಪ್ ಮಾಲೀಕನನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸ್ನೇಹಿತರಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ನಗರದ (Bengaluru) ವಿಶ್ವೇಶ್ವರಪುರಂ (ವಿ.ವಿ.ಪುರಂ) ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೊಹಮ್ಮದ್ ಖಾಸಿಂ, ಮುಜಾಹಿದ್, ವಸೀಂ, ಮುಕ್ತಿಯಾರ್ ಮತ್ತು ಶಬ್ಬೀರ್ ಬಂಧಿತ ಆರೋಪಿಗಳಾಗಿದ್ದಾರೆ. ವಿವಿ ಪುರಂನ ಮೊಬೈಲ್ ಶಾಪ್ ಮಾಲೀಕ‌ ಕಾಲುಸಿಂಗ್ ಅವರನ್ನು ಆರೋಪಿಗಳು ಕಿಡ್ನಾಪ್ ಮಾಡಿದ್ದರು. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾಲುಸಿಂಗ್ ಸ್ನೇಹಿತರಿಗೆ ಕರೆ ಮಾಡಿ ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರಿನ ನಾಗಸಂದ್ರ ಬಳಿ ನಡೆದ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್​​; ಕೊಲೆ ಹಿಂದೆ ಇದೆ ಪ್ರೇಮ ಕಹಾನಿ

ಕೂಡಲೇ ಕಾಲುಸಿಂಗ್ ಸ್ನೇಹಿತರು ಸಿಸಿಬಿ ಪೊಲೀಸರನ್ನು ಸಂಪರ್ಕಿಸಿದಾಗ ಕಿಡ್ನಾಪ್ ಮಾಡಿರುವುದು ನಕಲಿ ಸಿಸಿಬಿ ಪೊಲೀಸರು ಎಂದು ತಿಳಿದುಬಂದಿದೆ. ಇತ್ತ, ಸಿಸಿಬಿ‌ ಪೋಲಿಸರಿಗೆ ಕಿಡ್ನಾಪ್ ವಿಚಾರ ತಿಳಿಯುತ್ತಿದ್ದಂತೆ ಆರೋಪಿಗಳು ಕಾಲುಸಿಂಗ್​ನನ್ನು ಬಿಟ್ಟು ಕಳುಹಿಸಿದ್ದರು.

ನಿರ್ಜನ ಪ್ರದೇಶದಿಂದ ಬಂದ ಬಳಿಕ ಕಾಲುಸಿಂಗ್ ನೇರವಾಗಿ ವಿವಿ ಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ