AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರಿಂದ ಭಾರತದಲ್ಲಿ ಜನಪರ ಕಳಕಳಿಯ ವಿದೇಶಾಂಗ ನೀತಿ ಜಾರಿಗೆ ಬಂದಿದೆ

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಪರಿಣಾಮವಾಗಿ ಕಳೆದ 8 ವರ್ಷಗಳಲ್ಲಿ ಜನಪರ ವಿದೇಶಾಂಗ ನೀತಿಯನ್ನು ಭಾರತ ಅನುಷ್ಠಾನಕ್ಕೆ ತಂದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ತಿಳಿಸಿದರು.

ಮೋದಿಯವರಿಂದ ಭಾರತದಲ್ಲಿ ಜನಪರ ಕಳಕಳಿಯ ವಿದೇಶಾಂಗ ನೀತಿ ಜಾರಿಗೆ ಬಂದಿದೆ
ವಿದೇಶಾಂಗ ಸಚಿವ ಎಸ್​ ಜೈಶಂಕರ್​
TV9 Web
| Edited By: |

Updated on:Jun 10, 2022 | 10:41 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ದೂರದೃಷ್ಟಿಯ ಪರಿಣಾಮವಾಗಿ ಕಳೆದ 8 ವರ್ಷಗಳಲ್ಲಿ ಜನಪರ ವಿದೇಶಾಂಗ ನೀತಿಯನ್ನು ಭಾರತ ಅನುಷ್ಠಾನಕ್ಕೆ ತಂದಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jayshankar) ಅವರು ತಿಳಿಸಿದರು. ಬಿಜೆಪಿ ವತಿಯಿಂದ ಇಂದು(ಜೂನ್​10) ರಂದು ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು, “2014ರ ಬಳಿಕ ಭಾರತದ ವಿದೇಶಾಂಗ ನೀತಿ” ಕುರಿತಂತೆ ಮಾತನಾಡಿ ಬೆಂಗಳೂರು ನಗರವು ಭಾರತಕ್ಕೆ ಉತ್ತಮ ಹೆಸರು ಮತ್ತು ಬ್ರ್ಯಾಂಡಿಂಗ್‍ನಲ್ಲಿ ಮಹತ್ವದ ಕೊಡುಗೆ ನೀಡಿದೆ. ದೇಶದಲ್ಲಿ ಬೇಗನೆ ಪಾಸ್‍ಪೋರ್ಟ್ ಸಿಗುವಂತೆ ಮಾಡಿದ್ದು ಸೇರಿದಂತೆ ಆದ್ಯತೆಗಳು ಕೂಡ ಬದಲಾಗಿವೆ. ಇದು ಮಹತ್ವದ ಕೊಡುಗೆ ಎಂದು ಹೇಳಿದರು.

ಇದನ್ನು ಓದಿ: ರಾಜ್ಯಸಭಾ ಚುನಾವಣೆ: ರಾಜಸ್ಥಾನದಲ್ಲಿ 3 ಸ್ಥಾನಗೆದ್ದ ಕಾಂಗ್ರೆಸ್, ಝೀ ಸಂಸ್ಥೆಯ ಸುಭಾಷ್ ಚಂದ್ರಗೆ ಸೋಲು

ಹಿಂದೆ ಹಲವು ತಿಂಗಳ ಬಳಿಕ ಪಾಸ್‍ಪೋರ್ಟ್ ಸಿಗುತ್ತಿತ್ತು. ಈಗ ಬೇಗನೆ ಪಾಸ್‍ಪೋರ್ಟ್ ಸಿಗುವಂತಾಗಿದೆ. ಜನರ ನಿಟ್ಟಿನಲ್ಲಿ ನಿಂತು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಧಾನಿ ಇರುವ ಕಾರಣ ಇದೆಲ್ಲ ಸಾಧ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ಹೊರದೇಶಗಳಿಂದ 70 ಲಕ್ಷ ಜನರನ್ನು ಕರೆತರಲಾಯಿತು. ಮಾಸ್ಕ್, ವೆಂಟಿಲೇಟರ್ ಮತ್ತು ಆಮ್ಲಜನಕ ಕೊರತೆಯ ಸಮಸ್ಯೆಯ ಪರಿಹಾರಕ್ಕೆ ಶ್ರಮಿಸಲಾಯಿತು. ಉಕ್ರೇನ್ ಯುದ್ಧಕಾಲದಲ್ಲಿ ಅಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವುದರಲ್ಲೂ ಜನರ ಬಗೆಗಿನ ಕಳಕಳಿ ಇರುವ ನೀತಿಯನ್ನು ನಾವು ಕಾಣಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಯೋಧರೊಬ್ಬರು ಮಗುವಿಗೆ ಹಾಲುಣಿಸುವ ಹೃದಯಸ್ಪರ್ಶಿ ಫೋಟೋ ವೈರಲ್​

ನೇಪಾಳದಲ್ಲಿ ಭೂಕಂಪನ, ಯೆಮನ್‍ನಲ್ಲಿ ಯುದ್ಧ, ಮೊಜಾಂಬಿಕ್‍ನಲ್ಲಿ ನೆರೆ ಸೇರಿದಂತೆ ಹತ್ತಾರು ಸಮಸ್ಯೆಗಳಿಗೆ ಸ್ಪಂದಿಸುವ ಗುಣ ನಮ್ಮದಾಗಿತ್ತು.  ಯೋಗವನ್ನು ವಿಶ್ವದಾದ್ಯಂತ ಹಬ್ಬಿಸುವಲ್ಲಿ ಪ್ರಧಾನಿ ಮೋದಿಯವರ ಚಿಂತನೆ ಮಹತ್ವದ ಪಾತ್ರ ವಹಿಸಿದೆ. ಭಾರತದಿಂದ ವಿದೇಶಕ್ಕೆ ಪ್ರವಾಸ ಮತ್ತು ಹೊರದೇಶಗಳಿಂದ ಭಾರತಕ್ಕೆ ಬರಲು ಇದ್ದ ನೀತಿಯನ್ನು ಸರಳಗೊಳಿಸಿದ್ದರಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ಲಭಿಸಿದೆ ಎಂದರು.

ಭಾರತದ ಏಕತೆ, ಸಮಗ್ರತೆ, ರಕ್ಷಣಾ ಕ್ಷೇತ್ರ ಮತ್ತು ಅಭಿವೃದ್ಧಿ ವಿಚಾರದಲ್ಲಿ ಕಳೆದ 8 ವರ್ಷಗಳಲ್ಲಿ ದೊಡ್ಡ ಸಾಧನೆ ಸಾಧ್ಯವಾಗಿದೆ. ನಮ್ಮ ಜನರು ದೇಶ ಮಾತ್ರವಲ್ಲದೆ ಹೊರದೇಶಗಳಲ್ಲೂ ಮಾನ್ಯತೆ ಮತ್ತು ಅಭಿವೃದ್ಧಿ ಸಾಧಿಸಬೇಕೆಂಬ ಚಿಂತನೆ ಕೇಂದ್ರದ ಬಿಜೆಪಿ ಸರಕಾರದ್ದು. ಶ್ರೀಲಂಕಾದ ಬಿಕ್ಕಟ್ಟು ಪರಿಹರಿಸುವಲ್ಲಿ ನಮ್ಮ ಪ್ರಯತ್ನ ಸಾಗಿದೆ. ಜನಕಲ್ಯಾಣ ಮತ್ತು ಜಗಕಲ್ಯಾಣದ ನಿಟ್ಟಿನಲ್ಲಿ ನಮ್ಮ ಪ್ರಧಾನಿ ಮೋದಿಯವರು ಶ್ರಮಿಸಿದ್ದಾರೆ. ದೇಶದ ಪ್ರತಿಷ್ಠೆ, ಹೊರಜಗತ್ತಿನಲ್ಲಿ ಭಾರತಕ್ಕಿರುವ ಸ್ಥಾನ, ನಮ್ಮ ರಾಷ್ಟ್ರಕ್ಕಿರುವ ಪ್ರಭಾವ, ದೇಶದ ಸಾಮರ್ಥ್ಯವು ಕಳೆದ 8 ವರ್ಷಗಳಲ್ಲಿ ಉನ್ನತ ಸ್ಥಾನಕ್ಕೆ ಏರಿದೆ ಎಂದು ನುಡಿದರು.

ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ್, ಸಂಸದ ಪಿ.ಸಿ.ಮೋಹನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:41 pm, Fri, 10 June 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?