AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ನಲಪಾಡ್​​ಗೆ ಮತ್ತೆ ಸಂಕಷ್ಟ; ವಿದ್ವತ್ ಮೇಲೆ ಹಲ್ಲೆ ಪ್ರಕರಣದ ತನಿಖೆ ಮುಂದುವರಿಸಲು ಸೆಷನ್ಸ್ ಕೋರ್ಟ್ ನಿರ್ಧಾರ

ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಹಲ್ಲೆ ಮಾಡಿದ ಪ್ರಕರಣದ ತಡೆಯಾಜ್ಞೆ ವಿಸ್ತರಣೆಯಾಗದ ಹಿನ್ನೆಲೆ ಪ್ರಕರಣವನ್ನು ಮುಂದುವರಿಸಲು ಸೆಷನ್ಸ್ ಕೋರ್ಟ್ ನಿರ್ಧರಿಸಿದೆ.

ಮೊಹಮ್ಮದ್ ನಲಪಾಡ್​​ಗೆ ಮತ್ತೆ ಸಂಕಷ್ಟ; ವಿದ್ವತ್ ಮೇಲೆ ಹಲ್ಲೆ ಪ್ರಕರಣದ ತನಿಖೆ ಮುಂದುವರಿಸಲು ಸೆಷನ್ಸ್ ಕೋರ್ಟ್ ನಿರ್ಧಾರ
ಕರ್ನಾಟಕ ಯೂತ್​ ಕಾಂಗ್ರೆಸ್​ ಅಧ್ಯಕ್ಷ ಮೊಹಮ್ಮದ್​ ನಲಪಾಡ್​​
TV9 Web
| Edited By: |

Updated on:Nov 15, 2022 | 9:19 PM

Share

ಬೆಂಗಳೂರು: ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ (Mohammed Nalapad) ಹಲ್ಲೆ ಮಾಡಿದ ಪ್ರಕರಣದ ತಡೆಯಾಜ್ಞೆಯ ದಿನಾಂಕ ವಿಸ್ತರಣೆಯಾಗದ ಹಿನ್ನೆಲೆ ಪ್ರಕರಣದ ತನಿಖೆಯನ್ನು ಮುಂದುವರಿಸುವಂತೆ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ನಲಪಾಡ್ ಪರ ವಕೀಲ ಶ್ಯಾಮ್ ಸುಂದರ್ ಎಸ್​ಪಿಪಿಯಾಗುವಂತಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ನ್ಯಾ.ಎಸ್.ನಟರಾಜ್ ನಲಪಾಡ್ ಪರ ವಕೀಲರ ಆಕ್ಷೇಪ ತಳ್ಳಿಹಾಕಿ ಸಾಕ್ಷ್ಯ ವಿಚಾರಣೆ ಮುಂದುವರಿಸಲು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಮೊಹಮ್ಮದ್ ಹ್ಯಾರಿಸ್​​ ನಲಪಾಡ್​ ಮಗ ಮೊಹಮ್ಮದ್ ನಲಪಾಡ್​ರ 4 ವರ್ಷದ ಹಿಂದಿನ ಪ್ರಕರಣದ ತನಿಖೆಗೆ ಕೋರ್ಟ್​​ ಗ್ರೀನ್​ ಸಿಗ್ನಲ್​ ನೀಡಿದೆ. 2023ರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಈ ಬೆಳವಣಿಗೆ ಮೊಹಮ್ಮದ್ ನಲಪಾಡ್​ಗೆ ಕಪ್ಪು ಚುಕ್ಕೆಯಾಗುವ ಸಾಧ್ಯತೆ ಇದೆ. ಇನ್ನು ಮೊಹಮ್ಮದ್ ನಲಪಾಡ್ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಮೊಹಮ್ಮದ್ ನಲಪಾಡ್ ಫೆಬ್ರವರಿ 17, 2018 ರಂದು ಯುಬಿ ಸಿಟಿ ರೆಸ್ಟೊರೆಂಟ್​​ವೊಂದರಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದರು. ರಾತ್ರಿ ಸುಮಾರು 11 ಗಂಟೆಗೆ ಯುಬಿ ಸಿಟಿ ರೆಸ್ಟೊರೆಂಟ್​​ಗೆ ವಿದ್ವತ್ ಊಟಕ್ಕೆಂದು ತೆರಳಿದ್ದರು. ಈ ವೇಳೆ ವಿದ್ವತ್ ಮತ್ತು ನಲಪಾಡ್ ನಡುವೆ ಜಗಳ ನಡೆದಿತ್ತು. ಈ ಜಗಳ ತಾರಕಕ್ಕೇರಿ ನಲಪಾಡ್ ಮತ್ತು ಆತನ ಸ್ನೇಹಿತರು ವಿದ್ವತ್​ ಮೇಲೆ ಹಲ್ಲೆ ಮಾಡಿದ್ದಾರೆ.

ಬಳಿಕ ವಿದ್ವತ್ ರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅಲ್ಲಿಗೆ ತೆರಳಿದ ನಲಪಾಡ್ ಮತ್ತು ತಂಡ ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಮತ್ತು ಇತರೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 116 ದಿನಗಳ ಜೈಲುವಾಸದ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಮೊಹಮ್ಮದ್ ನಲಪಾಡ್ ಹೊರಬಂದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್​ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದರು. ಸದ್ಯ ಮಧ್ಯಂತರ ತಡೆಯಾಜ್ಞೆಯ ದಿನಾಂಕ ಮುಗಿದಿದೆ. ತಡೆಯಾಜ್ಞೆಯ ಅವಧಿಯನ್ನು ವಿಸ್ತರಿಸುವಂತೆ ನಲಪಾಡ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ ಸೆಷನ್ಸ್ ಕೋರ್ಟ್​​ನ ನಲಪಾಡ್ ಪರ ವಕೀಲರ ಆಕ್ಷೇಪ ತಳ್ಳಿಹಾಕಿ ಸಾಕ್ಷ್ಯ ವಿಚಾರಣೆ ಮುಂದುವರಿಸಲು ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 pm, Tue, 15 November 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ